ರಮ್ಯಾ ಕಾಂಗ್ರೆಸ್ ಬಿಡ್ತಾರಾ? ಅವರ ತಾಯಿ ಉತ್ತರ ಹೀಗಿದೆ
ನಟಿ, ಮಾಜಿ ಸಂಸದೆ ರಮ್ಯ ಅವರು ಬಿಜೆಪಿಗೆ ಸೇರ್ಪಡೆಯಾಗುತ್ತಾರೆ ಎಂಬ ಗುಸುಗುಸು ಕೇಳಿ ಬರುತ್ತಿದೆ.ಆದರೆ, ಅವರ ತಾಯಿ ರಂಜಿತಾ ಅವರು ಮಾತ್ರ ನನ್ನ ಮಗಳು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಬಿಡುವುದಿಲ್ಲ ಎಂಬ ಸ್ಪಷ್ಟನೆಯನ್ನು ನೀಡಿದ್ದಾರೆ.
ನಂಜನಗೂಡು, ಏಪ್ರಿಲ್ 02: ಮಾಜಿ ಮುಖ್ಯಮಂತ್ರಿ ಎಸ್ಸೆಂ ಕೃಷ್ಣ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಬೆನ್ನಲ್ಲೇ ಮಾಜಿ ಸಂಸದೆ, ನಟಿ ರಮ್ಯಾ ಅಲಿಯಾಸ್ ದಿವ್ಯಸ್ಪಂದನ ಅವರು ಕೂಡಾ ಕಮಲ ಪಕ್ಷ ಸೇರುತ್ತಾರೆ ಎಂಬ ಗುಸುಗುಸು ಪಿಸುಪಿಸು ಆರಂಭವಾಗಿತ್ತು.
ಈ ಗಾಳಿಸುದ್ದಿಗೆ ಇಂಬು ನೀಡುವಂತೆ ಉಪ ಚುನಾವಣೆ ಪ್ರಚಾರಕ್ಕೂ ಬಾರದೆ ಪಕ್ಷದ ವೇದಿಕೆಗಳಲ್ಲೂ ಕಾಣಿಸಿಕೊಳ್ಳದೆ ಕಾಂಗ್ರೆಸ್ನಿಂದ ರಮ್ಯಾ ದೂರವಿದ್ದರು. ಆದರೆ, ಇದಕ್ಕೆಲ್ಲ ಸ್ಪಷ್ಟನೆ ಈಗ ಸಿಕ್ಕಿದೆ.[ಏಪ್ರಿಲ್ ಫಸ್ಟ್ ಮಧ್ಯಾಹ್ನ ದಿಢೀರ್ ಜೆಡಿಎಸ್ ಸೇರಿದ ನಟಿ ರಮ್ಯಾ]

ರಮ್ಯಾ ಅವರ ತಾಯಿ ರಂಜಿತಾ ಅವರು ಮಾತ್ರ ನನ್ನ ಮಗಳು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಬಿಡುವುದಿಲ್ಲ ಎಂಬ ಸ್ಪಷ್ಟನೆಯನ್ನು ನೀಡಿದ್ದಾರೆ. ನಂಜನಗೂಡಿಗೆ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಮತಯಾಚನೆಗೆ ಬಂದಿರುವ ರಂಜಿತಾ ಅವರು ಮತಯಾಚನೆ ಮಾಡಿ ಮಾತನಾಡಿದರು.
'ನನ್ನ ಮಗಳಿಗೆ ಅನಾರೋಗ್ಯದ ಕಾರಣ ಪಕ್ಷದ ಚುನಾವಣಾ ಪ್ರಚಾರಕ್ಕೆ ಬರಲು ಸಾಧ್ಯವಾಗಿಲ್ಲ, ಆದರೆ ತಮಗಾಗದ ಕೆಲವರು ಬಿಜೆಪಿ, ಜೆಡಿಎಸ್ ಪಕ್ಷಗಳಿಗೆ ಸೇರಲಿದ್ದಾರೆ ಎಂಬ ಗಾಳಿಸುದ್ದಿಯನ್ನು ಹರಡುತ್ತಿದ್ದಾರೆ. ಇದು ಶುದ್ದ ಸುಳ್ಳು. ಇದನ್ನು ಯಾರು ನಂಬಬಾರದು. ಮಗಳು ರಮ್ಯ ಗುಣಮುಖಳಾದ ತಕ್ಷಣವೇ ಪಕ್ಷದ ಚಟುವಟಿಕೆಗಳಲ್ಲಿ ಭಾಗವಹಿಸಲಿದ್ದಾರೆಎಂದರು.
ನಂಜನಗೂಡು ವ್ಯಾಪ್ತಿಯಲ್ಲಿ ಮಹಿಳೆಯರು ಕಾಂಗ್ರೆಸ್ನತ್ತ ಒಲವು ತೋರುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿ ಕಳಲೆ ಕೇಶವಮೂರ್ತಿ ಅವರ ಗೆಲುವು ಖಚಿತ ಎಂದು ಹೇಳಿದರು.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು












Click it and Unblock the Notifications