ನಂಜನಗೂಡು ಕಾರ್ಖಾನೆ ಉದ್ಯೋಗಿ ಮೇಲೆ ಅತ್ಯಾಚಾರ, ಕೊಲೆ
ಮೈಸೂರು, ಫೆಬ್ರವರಿ 24: ನಂಜನಗೂಡಿನ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯ ಮೇಲೆ ಅತ್ಯಾಚಾರ ಮಾಡಿ, ಭೀಕರವಾಗಿ ಕೊಲೆ ಮಾಡಿರುವ ಘಟನೆ ಮೈಸೂರು ಸಮೀಪದ ಹಿಮ್ಮಾವಿನಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಹಿಮ್ಮಾವು ಕೈಗಾರಿಕಾ ಪ್ರದೇಶದಲ್ಲಿ ಐಟಿಸಿ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ 26 ವರ್ಷದ ಪಲ್ಲವಿ ಎಂದು ಗುರುತಿಸಲಾಗಿದೆ.
ಮೂಲತಃ ಗೋಳೂರು ಗ್ರಾಮದಳಾದ ಪಲ್ಲವಿಯು ಹದಿನಾರು ಮೋಳೆ ಗ್ರಾಮದ ಮಾದು ಎಂಬಾತನನ್ನು 8 ವರ್ಷಗಳ ಹಿಂದೆ ಮದುವೆಯಾಗಿದ್ದಳು. ಈಕೆಗೆ ಮೂವರು ಮಕ್ಕಳಿದ್ದಾರೆ ಎಂದು ತಿಳಿದುಬಂದಿದೆ.

ಮಂಗಳವಾರ ಸಂಜೆ ಕೆಲಸ ಮುಗಿಸಿಕೊಂಡು ಮನೆಗೆ ತೆರಳುವಾಗ ನಿರ್ಜನ ಪ್ರದೇಶಕ್ಕೆ ಎಳೆದೊಯ್ದ ದುಷ್ಕರ್ಮಿಗಳು, ಆಕೆಯ ಮೇಲೆ ಅತ್ಯಾಚಾರ ಮಾಡಿ ತರುವಾಯ ಕೊಲೆ ಮಾಡಿದ್ದಾರೆ.
ಈ ಘಟನೆಯಿಂದ ಕಾರ್ಖಾನೆಗಳಲ್ಲಿ ಸಾವಿರಾರು ಸಂಖ್ಯೆಯಲ್ಲಿ ಕೆಲಸ ಮಾಡುವ ಮಹಿಳಾ ಕಾರ್ಮಿಕರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಈ ಸಂಬಂಧ ನಂಜನಗೂಡು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.












Click it and Unblock the Notifications