ಪತ್ರಕರ್ತನ ಮೇಲೆ ಮೈಸೂರಿನಲ್ಲಿ ಅತ್ಯಾಚಾರ ಪ್ರಕರಣ ದಾಖಲು
ಮೈಸೂರು, ಜನವರಿ 29 : ಮದುವೆ ಆಗುವುದಾಗಿ ನಂಬಿಸಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಕನ್ನಡದ ಖಾಸಗಿ ಸುದ್ದಿ ವಾಹಿನಿಯ ವರದಿಗಾರನ ಮೇಲೆ ಉದಯಗಿರಿ ಠಾಣೆಯಲ್ಲಿ ದೂರು ದಾಖಲಾಗಿದೆ.
ತಾನು ಮದುವೆಯಾಗಿರುವ ವಿಚಾರವನ್ನು ಮುಚ್ಚಿಟ್ಟಿದ್ದ ವರದಿಗಾರ, ವಿಚ್ಛೇದಿತೆಯಾಗಿದ್ದ ಮಹಿಳಾ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಅವರನ್ನು ಮದುವೆಯಾಗುವುದಾಗಿ ನಂಬಿಸಿದ್ದಾನೆ. ಹೀಗೆ ಮುಂದುವರೆದು ಹಲವಾರು ಸಲ ಅತ್ಯಾಚಾರ ಎಸಗಿದ್ದು, ಈಗ ಮದುವೆಯಾಗಲು ನಿರಾಕರಿಸಿದ್ದಾನೆ. ಪೊಲೀಸರು ವರದಿಗಾರನ ವಿರುದ್ಧ ಲೈಂಗಿಕ ದೌರ್ಜನ್ಯ, ವಂಚನೆ ಮೊದಲಾದ ಪ್ರಕರಣ ದಾಖಲಿಸಿಕೊಂಡಿದ್ದು, ನಾಪತ್ತೆಯಾಗಿರುವ ಆತನ ಬಂಧನಕ್ಕೆ ಬಲೆ ಬೀಸಿದ್ದಾರೆ.

ಈ ಹಿನ್ನೆಲೆ ಪೊಲೀಸರು ಐಪಿಸಿ ಕಲಂ 376, 354, 420, 496 ಅನ್ವಯ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.












Click it and Unblock the Notifications