ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರು: ಮಗಳ ಮೇಲೆಯೇ ಅತ್ಯಾಚಾರವೆಸಗಿದ್ದ ತಂದೆಗೆ 10 ವರ್ಷ ಜೈಲು ಶಿಕ್ಷೆ

|
Google Oneindia Kannada News

ಮೈಸೂರು, ಸೆಪ್ಟೆಂಬರ್ 16 : ಅತ್ಯಾಚಾರ ಪ್ರಕರಣವೊಂದರಲ್ಲಿ ಪ್ರಮುಖ ಸಾಕ್ಷಿಗಳೇ ಉಲ್ಟಾ ಆಗಿ ಪ್ರಾಸಿಕ್ಯೂಷನ್ ಗೆ ಹಿನ್ನಡೆ ಆಗುವಂತೆ ಮಾಡಿದರೂ ಪಟ್ಟುಬಿಡದ ಸರ್ಕಾರಿ ಅಭಿಯೋಜಕರು ಹಾಗೂ ನ್ಯಾಯಾಧೀಶರು ವಿಚಾರಣೆ ಮುಂದುವರಿಸಿ ಆರೋಪಿಗೆ ಶಿಕ್ಷೆಯಾಗುವಂತೆ ಮಾಡುವಲ್ಲಿ ಯಶಸ್ವಿಯಾದ ಅಪರೂಪದ ಪ್ರಕರಣ ವರದಿಯಾಗಿದೆ.

7 ವರ್ಷದ ಪುತ್ರಿಯ ಮೇಲೆ ಅತ್ಯಾಚಾರ ಮಾಡಿದ್ದ ತಂದೆಗೆ ಮೈಸೂರಿನ 6ನೇ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಜಯಶ್ರೀ ಅವರು 10 ವರ್ಷ ಕಠಿಣ ಶಿಕ್ಷೆ ಹಾಗೂ 2 ಲಕ್ಷ ರೂ. ದಂಡ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ.

ಕೋಲಾರದಲ್ಲಿ ಅತ್ಯಾಚಾರಕ್ಕೆ ಯತ್ನಿಸಿ ಕೊಲೆ: 45 ದಿನದಲ್ಲೇ ಗಲ್ಲು ಶಿಕ್ಷೆಕೋಲಾರದಲ್ಲಿ ಅತ್ಯಾಚಾರಕ್ಕೆ ಯತ್ನಿಸಿ ಕೊಲೆ: 45 ದಿನದಲ್ಲೇ ಗಲ್ಲು ಶಿಕ್ಷೆ

ಪ್ರಕರಣದ ವಿವರ

2016ರಲ್ಲಿ ಉದಯಗಿರಿ ಠಾಣೆ ವ್ಯಾಪ್ತಿಯ ನಿವಾಸಿಯೊಬ್ಬ ತನ್ನ 7 ವರ್ಷದ ಪುತ್ರಿಯ ಮೇಲೆ ಅತ್ಯಾಚಾರ ಎಸಗಿದ್ದನು. ಪ್ರಕರಣ ನಡೆದ ದಿನದಂದು ಬೆಳಗ್ಗೆ ತಾಯಿ ಹಾಗೂ ಪುತ್ರಿ ಉದಯಗಿರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

Rapist father sentenced to 10 years in prison.

ಆಗ ಉದಯಗಿರಿ ಠಾಣೆ ಇನ್‍ಸ್ಪೆಕ್ಟರ್ ಆಗಿದ್ದ ಸಂತೋಷ್ ಅವರು ಇದನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಿ ಎಫ್‍ಐಆರ್ ದಾಖಲಿಸಿ, ಆರೋಪಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು.

ಪ್ರಾಸಿಕ್ಯೂಷನ್ ನಲ್ಲಿ ಸಾಕ್ಷಿ ನೀಡಿದ್ದ ತಾಯಿ ಮಗಳು ನ್ಯಾಯಾಲಯದಲ್ಲಿ ವಿಚಾರಣೆ ಸಮಯದಲ್ಲಿ ಉಲ್ಟಾ ಹೊಡೆದು, ಅತ್ಯಾಚಾರ ನಡೆದಿಲ್ಲ ಎಂದು ಸಾಧಿಸಿದರು. ಸಾಕ್ಷಿ ಹೇಳಿಕೆ ದಾಖಲು ಕುರಿತು ಕೇಳಿದಾಗ ಒತ್ತಡಕ್ಕೆ ಮಣಿದು ಹೇಳಿಕೆ ನೀಡಿದ್ದು, ಇದು ಸತ್ಯಕ್ಕೆ ದೂರ ಎಂದು ಹೇಳಿದ್ದರು.

ಮಾಜಿ ಪ್ರೇಯಸಿಯನ್ನು ಬೆದರಿಸಿ ರೇಪ್ ಮಾಡಿದ ಸಾಫ್ಟ್ ವೇರ್ ಎಂಜಿನಿಯರ್ಮಾಜಿ ಪ್ರೇಯಸಿಯನ್ನು ಬೆದರಿಸಿ ರೇಪ್ ಮಾಡಿದ ಸಾಫ್ಟ್ ವೇರ್ ಎಂಜಿನಿಯರ್

ವೈದ್ಯಕೀಯ ತಪಾಸಣೆ ವರದಿಯನ್ನೂ ಅಲ್ಲಗೆಳೆದಿದ್ದರು. ಆದರೆ, ನ್ಯಾಯಾಧೀಶರು ಇದನ್ನು ಗಂಭೀರವಾಗಿ ಪರಿಗಣಿಸಿ ಇತರೆ ಸಾಕ್ಷಿಗಳ ಆಧಾರದ ಮೇಲೆ ಪ್ರಕರಣದ ವಿಚಾರಣೆ ಮುಂದುವರಿಸಿದರು. ವೈದ್ಯಕೀಯ ತಪಾಸಣೆ ವರದಿಯನ್ನೇ ಪ್ರಮುಖವಾಗಿ ಪರಿಗಣಿಸಿ ಅದರ ಆಧಾರದ ಮೇಲೆ ತೀರ್ಪು ನೀಡಿದರು.

ಸರ್ಕಾರಿ ಅಭಿಯೋಜ ಕರಾಗಿ ಶಿವರುದ್ರಸ್ವಾಮಿ ವಾದ ಮಂಡಿಸಿದ್ದರು.

English summary
A 7-year-old daughter was raped by his father. Now her father sentenced to 10 years in prison. Judge Jayasree announced the verdict.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X