ಕೇಂದ್ರ ಅನುಮತಿ ನೀಡಿದರೆ ಮಣಿಪುರದಲ್ಲಿ ಶಾಂತಿ ಸ್ಥಾಪಿಸಲು ಸಿದ್ಧ- ಪೇಜಾವರ ಶ್ರೀ
ಮೈಸೂರು, ಆಗಸ್ಟ್ 08: ಅಯೋಧ್ಯೆಯಲ್ಲಿ ರಾಮಮಂದಿರದ ನಿರ್ಮಾಣದ ಕನಸು ಈಡೇರಿದೆ. ಇನ್ನೇನಿದ್ದರೂ ರಾಮ ರಾಜ್ಯ ಸ್ಥಾಪನೆ ಆಗಬೇಕಿದೆ ಎಂದು ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು.
ಮೈಸೂರಿನ ಸರಸ್ವತಿಪುರಂನ ಉಡುಪಿ ಕೃಷ್ಣಧಾಮದಲ್ಲಿ ಚಾತುರ್ಮಾಸ ವ್ರತ ಆಚರಣೆ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಿದೆ. ಇನ್ನೇನಿದ್ದರೂ ರಾಮನ ಆಳ್ವಿಕೆಯ ರಾಮರಾಜ್ಯವನ್ನು ನಾವೆಲ್ಲರೂ ಸೇರಿ ನಿರ್ಮಿಸಬೇಕಿರುವುದು ಅತ್ಯಗತ್ಯವಾಗಿದೆ ಎಂದರು.

ಅಯೋಧ್ಯೆಯಲ್ಲಿ ರಾಮಮಂದಿರದ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ. ಮಂದಿರದ ಗರ್ಭಗುಡಿಯಲ್ಲಿ ರಾಮಲಲ್ಲಾ ವಿಗ್ರಹ ಪ್ರತಿಷ್ಠಾಪಿಸಿ ಸಂಕ್ರಾಂತಿಯ ನಂತರ ಭಕ್ತರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುವುದು. ಈ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿಯವರನ್ನು ಆಹ್ವಾನಿಸಲಾಗಿದೆ ಎಂದರು.
ರಾಮಮಂದಿರ ನಿರ್ಮಾಣವಾದರೆ ಸಾಲದು, ರಾಮ ರಾಜ್ಯ ನಿರ್ಮಾಣವಾಗಬೇಕು ಎಂಬುದು ಎಲ್ಲರ ಆಶಯ. ಪ್ರತಿಯೊಬ್ಬರೂ ತಮ್ಮ ಕಾರ್ಯಕ್ಷೇತ್ರದಲ್ಲಿ ಸಮಾಜಕ್ಕೆ ಕೊಡುಗೆ ನೀಡಬೇಕು. ರಾಮನ ಗುಣಗಳಲ್ಲಿ ಎಲ್ಲರೂ ಒಂದೊಂದು ಗುಣ ಅಳವಡಿಸಿಕೊಂಡರೆ ರಾಮ ರಾಜ್ಯ ಕಲ್ಪನೆ ನನಸಾಗಲಿದೆ. ರಾಮಭಕ್ತಿ ಬೇರೆ ಅಲ್ಲ. ದೇಶಭಕ್ತಿ ಬೇರೆ ಅಲ್ಲ. ರಾಮಸೇವೆ, ದೇಶ ಸೇವೆ ಎರಡೂ ಒಂದೆ. ಸಮಾಜದಲ್ಲಿ ಇರುವ ಅಸಹಾಯಕರಿಗೆ, ಬಡವರಿಗೆ, ಕಷ್ಟದಲ್ಲಿ ಇರುವವರಿಗೆ ಅವರವರ ವೃತ್ತಿ ಸೀಮೆಯಲ್ಲಿ ನೆರವಾಗುವುದೇ ರಾಮ ಸೇವೆ ಎಂದರು.
ಗೋವುಗಳ ರಕ್ಷಣೆಗೆ ಮಠದಿಂದ ಹೆಚ್ಚಿನ ಒತ್ತು ನೀಡಲಾಗಿದೆ. ಈ ನಿಟ್ಟಿನಲ್ಲಿ ಪ್ರತಿ ಜಿಲ್ಲೆಯಲ್ಲೂ ಗೋಶಾಲೆ ತೆರೆಯಬೇಕೆಂಬುದು ನಮ್ಮ ಆಪೇಕ್ಷೆಯಾಗಿದೆ. ಆ ನಿಟ್ಟಿನಲ್ಲಿ ನಾವು ಕಾರ್ಯೋನ್ಮಖರಾಗಿದ್ದೇವೆ. ಇಂದು ಸಮಾಜದಲ್ಲಿ ಅನೇಕ ಬಗೆಯ ಗೊಂದಲಗಳು ಸೃಷ್ಟಿಯಾಗಿವೆ. ಹಿಂಸೆಯ ವೈಭವೀಕರಣವಾಗುತ್ತಿದೆ. ವಿದೇಶಗಳಲ್ಲಿ ಅಪರಾಧ ಮಾಡಲು ಹಿಂದೆ ಮುಂದೆ ನೋಡುತ್ತಾರೆ. ಆದರೆ ನಮ್ಮಲ್ಲಿ ಆ ರೀತಿ ಇಲ್ಲ. ಕಾನೂನಿನ ಮೇಲೆ ಭಯವೇ ಇಲ್ಲವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಸಮರ್ಥವಾಗಿ ಕಾರ್ಯ ನಿರ್ವಹಿಸಬೇಕು. ಜನರ ವಿಶಾಸಗಳಿಸಬೇಕು. ಪತ್ರಿಕಾರಂಗ ಸಮಾಜ ಕಟ್ಟುವ ಕೆಲಸ ಮಾಡಬೇಕು. ಸಾಮರಸ್ಯ ಗಟ್ಟಿಗೊಳಿಸುವ ಕೆಲಸವನ್ನು ಮಾಡುವ ಮೂಲಕ ಪತ್ರಿಕಾರಂಗ ಸಮಾಜದಲ್ಲಿ ಮಾದರಿಯಾಗಿ ನಿಲ್ಲಬೇಕು ಎಂದು ಹೇಳಿದರು.
ಮಣಿಪುರ ಸಂಘರ್ಷ: ಶಾಂತಿ ಸ್ಥಾಪಿಸಲು ಸಿದ್ಧ
ಮಣಿಪುರ ಪ್ರಕರಣವನ್ನು ಇಲ್ಲಿಯವರೆಗೆ ಬೆಳೆಯಲು ಬಿಟ್ಟಿದ್ದು ಸರಿಯಲ್ಲ. ಅದೊಂದು ದೊಡ್ಡ ಕಂಗಂಟಾಗಿದೆ. ಅಲ್ಲಿ ನಡೆಯುತ್ತಿರುವ ಹಿಂಸೆಗೆ ಮೂಲ ಕಾರಣವೇನು ಎಂಬುದೇ ಅರ್ಥವಾಗುತ್ತಿಲ್ಲ. ಅಲ್ಲಿ ಪರಿಸ್ಥಿತಿ ಕೈಮೀರಿದೆ. ಇಷ್ಟಾಗಿಯೂ ತಾವು ಆ ರಾಜ್ಯದಲ್ಲಿ ಸಂಘರ್ಷಕ್ಕೆ ನಿಂತಿರುವ ಗುಂಪುಗಳ ಜೊತೆ ಮಾತನಾಡಿ ಶಾಂತಿ ಸ್ಥಾಪಿಸಲು ಮಧ್ಯ ಪ್ರವೇಶ ಮಾಡಲು ಸಿದ್ಧವಿದ್ದೇವೆ. ಈ ನಿಟ್ಟಿನಲ್ಲಿ ಅನುಮತಿ ಕೋರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ಒಂದು ವೇಳೆ ಅನುಮತಿ ನೀಡಿದರೆ ಮಣಿಪುರದಲ್ಲಿ ಶಾಂತಿ ಸುವ್ಯವಸ್ಥೆ ಸ್ಥಾಪಿಸಲು ಮುಂದಾಗುವುದಾಗಿ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸಾಮೀಜಿ ಹೇಳಿದರು.
ಈ ಸಂದರ್ಭದಲ್ಲಿ ರಾಜ್ಯ ಹೋಟೆಲ್ ಮಾಲಿಕರ ಸಂಘದ ಉಪಾಧ್ಯಕ್ಷ ರವಿಶಾಸ್ತ್ರಿ, ಹೋಟೆಲ್ ಮಾಲೀಕರ ಪತ್ರಿನ ಸಹಕಾರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಆರ್.ತಂತ್ರಿ, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಟಿ.ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಎಂ.ಸುಬ್ರಹ್ಮಣ್ಯ, ಕಾರ್ಯದರ್ಶಿ ರಂಗಸಾಮಿ, ರಾಜ್ಯ ಸಮಿತಿ ಸದಸ್ಯ ಬಿ.ರಾಘವೇಂದ್ರ, ಕಾರ್ಯಕಾರಿ ಸಮಿತಿ ಸದಸ್ಯರಾದ ಶಿವಮೂರ್ತಿ ಜುಪ್ತಿಮಠ, ಆರ್.ಕೃಷ್ಣ, ಮಾಚಮ್ಮ ಮಲ್ಲಿಗೆ, ಹಿರಿಯ ಪತ್ರಕರ್ತ ಮೂಗೂರು ನಂಜುಂಡಸಾಮಿ ಇತರರು ಹಾಜರದ್ದಿರು.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!












Click it and Unblock the Notifications