• search
  • Live TV
ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಗಣರಾಜ್ಯೋತ್ಸವ; ಮೈಸೂರಲ್ಲಿ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ

By ಮೈಸೂರು ಪ್ರತಿನಿಧಿ
|

ಮೈಸೂರು, ಜನವರಿ 25: ಬನ್ನಿಮಂಟಪ ಪಂಜಿನ ಕವಾಯಿತು ಮೈದಾನದಲ್ಲಿ ನಡೆಯುವ ಗಣರಾಜ್ಯೋತ್ಸವ ಆಚರಣೆ ಸಂಬಂಧ ಮೈಸೂರು ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಮತ್ತು ಸುಗಮ ಸಂಚಾರಕ್ಕಾಗಿ ಸಾರ್ವಜನಿಕರು ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮೈಸೂರು ನಗರದ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ ಮನವಿ ಮಾಡಿದ್ದಾರೆ.

26/1/2021ರಂದು ಮೈಸೂರು ನಗರದ ಬನ್ನಿಮಂಟಪ ಮೈದಾನದಲ್ಲಿ ನಡೆಯುವ ಗಣರಾಜ್ಯೋತ್ಸವ ಆಚರಣೆ ಸಂಬಂಧ ಬನ್ನಿಮಂಟಪ ಮೈದಾನಕ್ಕೆ ಆಗಮಿಸುವ ಅತಿ ಗಣ್ಯರು, ಗಣ್ಯರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಮತ್ತು ಜಿಲ್ಲಾ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರುಗಳು, ಮಹಾನಗರಪಾಲಿಕೆ ಸದಸ್ಯರು ಬನ್ನಿಮಂಟಪ ಮುಖ್ಯದ್ವಾರದ ಮುಖೇನ ಪ್ರವೇಶಿಸಬೇಕು. ಇವರ ವಾಹನಗಳಿಗೆ ಮುಖ್ಯದ್ವಾರದ ಎಡಭಾಗದಲ್ಲಿ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ.

ದೆಹಲಿ: ಗಣರಾಜ್ಯೋತ್ಸವ ಪೆರೇಡ್‌ನಲ್ಲಿ ಪ್ರಧಾನಿ ಜೊತೆ ವಿದ್ಯಾರ್ಥಿಗಳು! ದೆಹಲಿ: ಗಣರಾಜ್ಯೋತ್ಸವ ಪೆರೇಡ್‌ನಲ್ಲಿ ಪ್ರಧಾನಿ ಜೊತೆ ವಿದ್ಯಾರ್ಥಿಗಳು!

ಗೇಟ್ ಜಿ-1 ಒಳ ಆವರಣದಲ್ಲಿ ಪೊಲೀಸ್ ಇಲಾಖೆ, ಮಾಧ್ಯಮ ಮತ್ತು ಇತರೆ ಸರ್ಕಾರಿ ಇಲಾಖೆಯ ದ್ವಿಚಕ್ರ ಮತ್ತು ನಾಲ್ಕು ಚಕ್ರದ ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಗೇಟ್ ಜಿ-5ರಲ್ಲಿ ಸಾರ್ವಜನಿಕರಿಗೆ ಪ್ರವೇಶ ಹಾಗೂ ದ್ವಿಚಕ್ರ ಮತ್ತು ನಾಲ್ಕು ಚಕ್ರದ ವಾಹನಗಳ ಪಾರ್ಕಿಂಗ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

ಗಣರಾಜ್ಯೋತ್ಸವ ದಿನಾಚರಣೆ 2021: ಕರ್ನಾಟಕದಿಂದ ವಿಜಯನಗರ ವೈಭವ ಸಾರುವ ಸ್ತಬ್ಧಚಿತ್ರ ಆಯ್ಕೆಗಣರಾಜ್ಯೋತ್ಸವ ದಿನಾಚರಣೆ 2021: ಕರ್ನಾಟಕದಿಂದ ವಿಜಯನಗರ ವೈಭವ ಸಾರುವ ಸ್ತಬ್ಧಚಿತ್ರ ಆಯ್ಕೆ

ಗೇಟ್ ಜಿ-11ರಲ್ಲಿ ಸಾರ್ವಜನಿಕರಿಗೆ ಪ್ರವೇಶ ಹಾಗೂ ದ್ವಿ ಚಕ್ರ ವಾಹನಗಳಿಗೆ ಮಾತ್ರ ಪಾರ್ಕಿಂಗ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಗೇಟ್ ಜಿ-8ರಲ್ಲಿ ಗಣರಾಜ್ಯೋತ್ಸವದ ಆಚರಣೆಯ ಸಂಬಂಧ ಕಾರ್ಯಕ್ರಮಗಳು ಹಾಗೂ ಪೆರೇಡ್‍ನಲ್ಲಿ ಭಾಗವಹಿಸುವವರಿಗೆ ಪ್ರವೇಶ ಹಾಗೂ ಅವರ ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

 ಗಣರಾಜ್ಯೋತ್ಸವ; ವಿಜಯದ ಕಥೆ ಹೇಳುವ 'Kargil: Valour & Victory' ಸಾಕ್ಷ್ಯಚಿತ್ರ ಪ್ರದರ್ಶನ ಗಣರಾಜ್ಯೋತ್ಸವ; ವಿಜಯದ ಕಥೆ ಹೇಳುವ 'Kargil: Valour & Victory' ಸಾಕ್ಷ್ಯಚಿತ್ರ ಪ್ರದರ್ಶನ

ಸೂಚನೆಗಳು; ಬನ್ನಿಮಂಟಪ ಮೈದಾನದ ಗಣರಾಜ್ಯೋತ್ಸವ ಆಚರಣೆಯಲ್ಲಿ ಭಾಗವಹಿಸುವವರು ಸುರಕ್ಷತೆಯ ದೃಷ್ಠಿಯಿಂದ ಯಾವುದೇ ರೀತಿಯ ಆಯುಧಗಳು, ಚಾಕು, ಗಾಜಿನ ನೀರಿನ ಬಾಟಲಿ ಮತ್ತು ದೊಡ್ಡ ಬ್ಯಾಗ್‍ಗಳನ್ನು ತೆಗೆದುಕೊಂಡು ಹೋಗಬಾರದು.

ಲೋಹಶೋಧಕ ಯಂತ್ರಗಳನ್ನು ಅಳವಡಿಸಿದ್ದು, ಸಾರ್ವಜನಿಕರು ಲೋಹಶೋಧಕ ಯಂತ್ರದ ಮೂಲಕ ತಪಾಸಣೆಗೆ ಒಳಪಟ್ಟು ನಂತರ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳಬೇಕು.

ನಿಗದಿತಪಡಿಸಿದ ಸ್ಥಳದಲ್ಲೇ ಕುಳಿತು ಕಾರ್ಯಕ್ರಮವನ್ನು ವೀಕ್ಷಿಸಬೇಕು. ಕಾರ್ಯಕ್ರಮ ಪ್ರಾರಂಭವಾದ ನಂತರ ಪದೇ ಪದೇ ಸ್ಥಳ ಬದಲಾವಣೆ ಮಾಡುವಂತಿಲ್ಲ. ನಿಗದಿಪಡಿಸಿದ ಪ್ರವೇಶ ದ್ವಾರಗಳಿಂದ ಹೊರತುಪಡಿಸಿ, ಬೇರೆ ಕಡೆಗಳಿಂದ ಸಾರ್ವಜನಿಕರು ಪ್ರವೇಶಿಸಬಾರದು.

ಸಾರ್ವಜನಿಕರು ತಮ್ಮ ವಾಹನಗಳನ್ನು ಸಂಚಾರ ನಿಯಂತ್ರಣ ಪೊಲೀಸರು ನಿಗದಿಪಡಿಸಿದ ಸ್ಥಳದಲ್ಲೇ ನಿಲುಗಡೆ ಮಾಡಬೇಕು. ಸಂಚಾರಕ್ಕೆ ಅಡಚಣೆ ಉಂಟಾಗುವ ರೀತಿಯಲ್ಲಿ ನಿಲ್ಲಿಸಿದ ವಾಹನಗಳ ಮಾಲೀಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು.

ಸಾರ್ವಜನಿಕ ಸ್ಥಳಗಳಾದ ಮಾಲ್‍ಗಳು, ಸಿನಿಮಾ ಮಂದಿರಗಳು, ಮಾರುಕಟ್ಟೆ, ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ, ವಿಮಾನ ನಿಲ್ದಾಣ, ಪ್ರಾರ್ಥನಾ ಸ್ಥಳಗಳು, ಪ್ರವಾಸಿ ಸ್ಥಳಗಳಲ್ಲಿ ಹಾಗೂ ಹೆಚ್ಚಿನ ಜನನಿಬಿಡ ಪ್ರದೇಶಗಳಲ್ಲಿ ಮಾಲೀಕರು/ವ್ಯವಸ್ಥಾಪಕರು ಸೂಕ್ತ ಸ್ಥಳಗಳಲ್ಲಿ ಸಿ. ಸಿ. ಕ್ಯಾಮರಾಗಳನ್ನು ಅಳವಡಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಭದ್ರತಾ ಸಿಬ್ಬಂದಿಗಳನ್ನು ನೇಮಿಸತಕ್ಕದ್ದು.

ಹೋಟೆಲ್, ವಸತಿ ಗೃಹ, ಹೋಂ ಸ್ಟೇಗಳ ಮಾಲೀಕರು ಪ್ರವಾಸಿಗರಿಗೆ ಮತ್ತು ಇತರರಿಗೆ ರೂಂ ಗಳನ್ನು ನೀಡುವಾಗ ಅವರ ಬಗ್ಗೆ ಹಾಗೂ ಅವರ ತಂದಿರುವ ಲಗ್ಗೇಜ್‍ ಗಳ ಬಗ್ಗೆ ಕೂಲಂಕುಶವಾಗಿ ಪರಿಶೀಲಿಸಿ ಪೂರ್ಣ ವಿಳಾಸದ ಮಾಹಿತಿ ಪಡೆದು ಸಂಬಂಧಪಟ್ಟ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು.

ಸಾರ್ವಜನಿಕರು ಅನುಮಾನಾಸ್ಪದವಾಗಿ ಓಡಾಡುವ ವ್ಯಕ್ತಿಗಳು ವಾಹನಗಳು, ವಸ್ತುಗಳು ಇತ್ಯಾದಿ ಕಂಡು ಬಂದಲ್ಲಿ ಕೂಡಲೇ ನಗರ ಪೊಲೀಸ್ ನಿಯಂತ್ರಣ ಕೊಠಡಿ ದೂರವಾಣಿ ಸಂಖ್ಯೆ 0821-2418100, 2418339, 2418139 ತಿಳಿಸಬೇಕು. ಮಾಹಿತಿ ನೀಡಿದವರ ವಿವರವನ್ನು ಗೌಪ್ಯವಾಗಿಡಲಾಗುವುದು.

ಕೋವಿಡ್-19 ಹಿನ್ನೆಲೆಯಲ್ಲಿ ಕಾರ್ಯಕ್ರಮಕ್ಕೆ ಹಾಜರಾಗುವವರು ಕಡ್ಡಾಯವಾಗಿ ಮಾಸ್ಕ್ ಧರಿಸತಕ್ಕದ್ದು ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನೀಡಿರುವ ಆದೇಶಗಳನ್ನು ಮತ್ತು ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಲು ಕೋರಲಾಗಿದೆ.

English summary
Republic Day event held in Bannimantap field in Mysuru on January 26, 2021. Here are the information on traffic restrictions.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X