ಪಿರಿಯಾಪಟ್ಟಣದ ಗಣರಾಜ್ಯೋತ್ಸವ ವೇದಿಕೆಯಲ್ಲಿ ಕಿರಿಕಿರಿ!
ಮೈಸೂರು, ಜನವರಿ 27: ಗಣರಾಜ್ಯೋತ್ಸವದ ಮಹತ್ವದ ಕುರಿತು ಮಾತನಾಡುತ್ತಿದ್ದ ಭಾಷಣಕಾರರಿಗೆ ಪುರಸಭೆ ಅಧ್ಯಕ್ಷರು ಭಾಷಣ ನಿಲ್ಲಿಸುವಂತೆ ಹೇಳಿದ ಘಟನೆ ಮೈಸೂರಿನ ಪಿರಿಯಾಪಟ್ಟಣದಲ್ಲಿ ನಡೆದಿದ್ದು, ಇದನ್ನು ಖಂಡಿಸಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದ್ದಾರೆ.
ಪಿರಿಯಾಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಶುಕ್ರವಾರ ನಡೆದ ಗಣರಾಜ್ಯೋತ್ಸವ ಸಮಾರಂಭಕ್ಕೆ ಮುಖ್ಯ ಭಾಷಣಕಾರರಾಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಪುಟ್ಟಮಾದಯ್ಯ ಅವರನ್ನು ಕರೆಯಿಸಲಾಗಿತ್ತು.
ಅವರು ವೇದಿಕೆಯಲ್ಲಿ ಭಾಷಣ ಆರಂಭಿಸಿ ಶಿಕ್ಷಣ ಪ್ರತಿಯೊಬ್ಬರ ಹಕ್ಕಾಗಿದ್ದು, ದೇಶವು ಗೌರವಿಸುವಂತಹ ಸಂವಿಧಾನ ನಮ್ಮಲ್ಲಿದ್ದು ಇದನ್ನು ಗೌರವಿಸದ ಕೆಲವರು ವಿವಿಧ ರೀತಿಯಲ್ಲಿ ತಿರುಚಲು ಯತ್ನಿಸುತ್ತಿದ್ದಾರೆ, ಇದು ಅಪಾಯಕಾರಿಯಾಗಿದೆ ಎಂದರು. ಇದನ್ನು ಸರಿಯಾಗಿ ಅರ್ಥೈಸಿಕೊಳ್ಳದ ಪುರಸಭಾಧ್ಯಕ್ಷ ವೇಣುಗೋಪಾಲ್ ಇದು ರಾಜಕೀಯ ಪಕ್ಷದ ವೇದಿಕೆಯಲ್ಲ, ಇದು ಸರ್ಕಾರದ ಕಾರ್ಯಕ್ರಮ, ಭಾಷಣವನ್ನು ನಿಲ್ಲಿಸಿ ಎಂದು ಕಿರಿಕಿರಿ ಆರಂಭಿಸಿದ್ದಾರೆ.

ಇದರಿಂದ ವೇದಿಕೆಯಲ್ಲಿ ಕೆಲಕಾಲ ಗೊಂದಲ ಏರ್ಪಟ್ಟು ಆರೋಪ ಪ್ರತ್ಯಾರೋಪ ನಡೆದು ಕೆಲ ಸಂಘಟನೆಗಳು ಧಿಕ್ಕಾರ ಕೂಗಲು ಆರಂಭಿಸಿದರು.
ತಹಸೀಲ್ದಾರ್ ನಿಯಮದ ಪ್ರಕಾರ ಕಾಲಾವಕಾಶವನ್ನು ನಿಗದಿಪಡಿಸಿ ಭಾಷಣಕಾರರಿಗೆ ತಿಳಿಸಬೇಕಿತ್ತು, ಜೊತೆಗೆ ವೇದಿಕೆಯ ನಡವಳಿಕೆಯ ಬಗ್ಗೆ ಗಣ್ಯರಿಗೆ ತಿಳಿಸಬೇಕಿತ್ತು, ಇದ್ಯಾವುದನ್ನೂ ಮಾಡದ ಪರಿಣಾಮ ಗಣರಾಜ್ಯೋತ್ಸವದ ಸಮಾರಂಭದಲ್ಲಿ ಅಗೌರವ ಮಾಡಿದಂತಾಗಿದೆ ಎಂದು ಆರೋಪಿಸಿದ ಕೆಲವು ಸಂಘಟನೆಗಳು ಇದರ ಸಂಪೂರ್ಣ ಹೊಣೆಗಾರಿಕೆ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಅಧ್ಯಕ್ಷರಾಗಿರುವ ಜೆ.ಮಹೇಶ್ ಮತ್ತು ಪುರಸಭೆ ಅಧ್ಯಕ್ಷ ವೇಣುಗೋಪಾಲ್ ಹೊರಬೇಕೆಂದು ಆಗ್ರಹಿಸಿ ಅವರ ವಿರುದ್ದ ಪ್ರತಿಭಟನೆ ನಡೆಸಿ ಕ್ಷಮೆ ಕೇಳುವಂತೆ ಒತ್ತಾಯಿಸಿದರು.

ಸಂಘಟನಾಕಾರರ ನೇತೃತ್ವ ವಹಿಸಿದ್ದ ತಾ.ಪಂ. ಸ್ಥಾಯಿಸಮಿತಿ ಅಧ್ಯಕ್ಷ ಎಸ್. ರಾಮುಐಲಾಪುರ ಮಾತನಾಡಿ ಸಂವಿಧಾನವನ್ನು ಜಾರಿಗೊಳಿಸುವ ಸಂದರ್ಭ ಈ ದಿನವನ್ನು ಸಂವಿಧಾನ ದಿನಾಚರಣೆ ಎಂದು ಆಚರಿಸುವಂತೆ ಒತ್ತಾಯಿಸಲಾಗಿತ್ತು, ಆದರೆ ಅಂಬೇಡ್ಕರ್‍ರವರು ಶೋಷಿತ ಸಮುದಾಯಕ್ಕೆ ಸೇರಿದವರಾಗಿದ್ದಾರೆ ಎಂಬ ಒಂದೇ ಕಾರಣಕ್ಕೆ ಗಣರಾಜ್ಯ ದಿನವಾಗಿ ಆಚರಿಸಲಾಗುತ್ತಿದೆ, ಈ ಸತ್ಯವನ್ನು ಭಾಷಣಕಾರರು ತಿಳಿಸಲು ಮುಂದಾದಾಗ ಅವಕಾಶ ನೀಡದೆ ತಡೆಒಡ್ಡುವುದು ಅಭಿವೃಕ್ತಿ ಸ್ವಾತಂತ್ರಕ್ಕೆ ಧಕ್ಕೆತರುವ ವಿಚಾರ, ಇದನ್ನು ತೀವ್ರವಾಗಿ ಖಂಡಿಸುತ್ತೇವೆ.
ತಹಸೀಲ್ದಾರ್ ಜೆ.ಮಹೇಶ್ ಮತ್ತು ಪುರಸಭೆ ಅಧ್ಯಕ್ಷ ವೇಣುಗೋಪಾಲ್ ವಿರುದ್ಧ ಜಿಲ್ಲಾಧಿಕಾರಿಯು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ ಅವರು ವಿಳಂಬವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications