ಮಹಾಲಯ ಅಮಾವಾಸ್ಯೆಯಂದು ಚಾಮುಂಡಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧ
ಮೈಸೂರು, ಸೆಪ್ಟೆಂಬರ್ 15: ಮಹಾಲಯ ಅಮಾವಾಸ್ಯೆಯಂದು (ಸೆಪ್ಟೆಂಬರ್ 17) ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತಾದಿಗಳ ಪ್ರವೇಶಕ್ಕೆ ಜಿಲ್ಲಾಡಳಿತ ನಿರ್ಬಂಧ ಹೇರಿದೆ.
ಕೊರೊನಾ ಹಿನ್ನೆಲೆಯಲ್ಲಿ ಹಾಗೂ ಮಹಾಲಯ ಅಮಾವಾಸ್ಯೆ ಪ್ರಯುಕ್ತ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಸಾಧ್ಯತೆ ಇರುವುದರಿಂದ ಭಕ್ತರಿಗೆ ಚಾಮುಂಡಿ ಬೆಟ್ಟಕ್ಕೆ ಪ್ರವೇಶವನ್ನು ಅಂದು ನಿರ್ಬಂಧಿಸಿ ಆದೇಶಿಸಲಾಗಿದೆ. ಬೆಟ್ಟಕ್ಕೆ ಸಂಪರ್ಕಿಸುವ ರಸ್ತೆಗಳನ್ನು ಕೂಡ ಬಂದ್ ಮಾಡಲು ನಿರ್ಧರಿಸಲಾಗಿದೆ.

ಈ ಹಿಂದೆ ಕೊರೊನಾ ಸೋಂಕಿನ ಹಾವಳಿಯಿಂದ ಆಷಾಢ ಶುಕ್ರವಾರ ಹಾಗೂ ಪ್ರತಿ ಶನಿವಾರ ಪ್ರವೇಶವನ್ನು ನಿರ್ಬಂಧಿಸಲಾಗಿತ್ತು. ನಂತರದ ದಿನಗಳಲ್ಲಿ ನಿರ್ಬಂಧವನ್ನು ಸಡಿಲಿಕೆ ಮಾಡಲಾಗಿತ್ತು. ಆದರೆ ಜಿಲ್ಲೆಯಲ್ಲಿಕೊರೊನಾ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಹಾಗೂ ಮಹಾಲಯ ಅಮವಾಸ್ಯೆಯೆಂದು ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬರುವುದರಿಂದ ಮುಂಜಾಗ್ರತಾ ಕ್ರಮವಾಗಿ ಬೆಟ್ಟದ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.












Click it and Unblock the Notifications