• search
 • Live TV
ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ವಿಜಯದಶಮಿಯಂದು ಸುತ್ತೂರು ಮಠಕ್ಕೆ ಪ್ರವೇಶ ನಿರ್ಬಂಧ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಅಕ್ಟೋಬರ್ 23: ವಿಜಯದಶಮಿಯಂದು ಸುತ್ತೂರು ಶಾಖಾ ಮಠಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧ ಮಾಡಲಾಗಿದೆ. ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠದಲ್ಲಿ ಪ್ರತಿ ವರ್ಷ ಆಯುಧ ಪೂಜೆ ಮತ್ತು ವಿಜಯ ದಶಮಿಯಂದು ವಿಶೇಷ ಪೂಜೆ ಹಾಗೂ ಬನ್ನಿ ಪೂಜೆಯನ್ನು ನೆರವೇರಿಸಲಾಗುತ್ತಿತ್ತು.

ಆದರೆ ಈ ಬಾರಿ ಕೊರೊನಾ ಸೋಂಕಿನ ಭೀತಿ ಹಿನ್ನೆಲೆಯಲ್ಲಿ ಅ.26ರಂದು ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧವನ್ನು ಹೇರಲಾಗಿದೆ.

ಸುತ್ತೂರು ಶ್ರೀಗಳಿಂದ ಮೈಸೂರು ಮೃಗಾಲಯಕ್ಕೆ ಹಣಕಾಸಿನ ನೆರವು ಸುತ್ತೂರು ಶ್ರೀಗಳಿಂದ ಮೈಸೂರು ಮೃಗಾಲಯಕ್ಕೆ ಹಣಕಾಸಿನ ನೆರವು

ದಸರಾ ಸಮಯದಲ್ಲಿ ಹೆಚ್ಚಿನ ಜನರು ಮಠಕ್ಕೆ ಬರುತ್ತಿದ್ದರು. ದಸರಾ ಸಂದರ್ಭ ಪ್ರತಿ ವರ್ಷ ಸುತ್ತೂರು ಶಾಖಾ ಮಠಕ್ಕೆ ಗಣ್ಯರು, ಸಾರ್ವಜನಿಕರು ಹಾಗೂ ಭಕ್ತಾದಿಗಳು ಭೇಟಿ ನೀಡಿ ಪೂಜ್ಯರ ಆಶೀರ್ವಾದ ಪಡೆಯುತ್ತಿದ್ದರು. ಆದರೆ ಈ ವರ್ಷ ಕೊರೊನಾ ವೈರಸ್ ಕಾರಣವಾಗಿ ಮಠಕ್ಕೆ ನಿರ್ಬಂಧವನ್ನು ಹೇರಲಾಗಿದೆ. ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವುದರಿಂದ ಈ ವರ್ಷ ಸಾಂಪ್ರದಾಯಿಕವಾಗಿ ಪೂಜಾ ಕಾರ್ಯಕ್ರಮವನ್ನು ನೆರವೇರಿಸಲಾಗುತ್ತದೆ. ಆದರೆ ಸಾರ್ವಜನಿಕರಿಗೆ ಮಠಕ್ಕೆ ಪ್ರವೇಶವಿರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

   ಆಂಜಿಯೋಪ್ಲಾಸ್ಟಿ ಚಿಕಿತ್ಸೆ , Kapil ಬೇಗ ಹುಷಾರಾಗಿ | Kapil Dev in Hospital | Oneindia Kannada

   ಮೈಸೂರಿನ ಕೊರೊನಾ ವೈರಸ್ ಪ್ರಕರಣ: ಜಿಲ್ಲೆಯಲ್ಲಿ ಒಟ್ಟು 46,172 ಕೊರೊನಾ ಸೋಂಕಿನ ಪ್ರಕರಣಗಳು ದಾಖಲಾಗಿದ್ದು, ಇದುವರೆಗೂ 41,238 ಮಂದಿ ಗುಣಮುಖರಾಗಿದ್ದಾರೆ. 3,998 ಸಕ್ರಿಯ ಪ್ರಕರಣಗಳಿವೆ. ಇದುವರೆಗೆ 936 ಮಂದಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ.

   English summary
   Public not allowed on vijayadashami to mysuru suttur math due to coronavirus,
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X