ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅ.28 ಮತ್ತು 29 ರಂದು ಚಾಮುಂಡಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧ

By Lekhaka
|
Google Oneindia Kannada News

ಮೈಸೂರು, ಅಕ್ಟೋಬರ್ 27: ಚಾಮುಂಡಿ ಬೆಟ್ಟದಲ್ಲಿ ರಥೋತ್ಸವದ ಹಿನ್ನೆಲೆಯಲ್ಲಿ ಅಕ್ಟೋಬರ್ 28ರ ಸಂಜೆ 6 ಗಂಟೆಯಿಂದ ಅಕ್ಟೋಬರ್ 29ರ ಮಧ್ಯಾಹ್ನ 12 ಗಂಟೆಯವರೆಗೆ ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಆದೇಶ ಹೊರಡಿಸಿದ್ದಾರೆ.

ಪ್ರವೇಶ ನಿಷೇಧವಿರುವ ದಿನಗಳಂದು ಕೇಂದ್ರ ಮತ್ತು ರಾಜ್ಯ ಸರ್ಕಾರ ಘೋಷಿಸಿದ ಕೋವಿಡ್ ಶಿಷ್ಟಾಚಾರ ವ್ಯವಸ್ಥೆ ಹೊಂದಿರುವ ಗಣ್ಯ ವ್ಯಕ್ತಿಗಳು, ಸರ್ಕಾರಿ ಕೆಲಸದ ನಿಮಿತ್ತ ತೆರಳುವ ಅಧಿಕಾರಿಗಳು ಮತ್ತು ತುರ್ತು ಸೇವಾ ವಾಹನಗಳು, ಗ್ರಾಮಸ್ಥರ ವಾಹನಗಳನ್ನು ಹೊರತುಪಡಿಸಿ ಸಾರ್ವಜನಿಕರ ವಾಹನ ಮತ್ತು ಖಾಸಗಿ ವಾಹನಗಳು ಬೆಟ್ಟಕ್ಕೆ ಬರುವುದನ್ನು ನಿಷೇಧಿಸಲಾಗಿದೆ.

Mysuru: Restriction To Devotees On Chamundi Hills On October 28 And 29

 ಸಂಜೆ 6ರ ನಂತರ ಚಾಮುಂಡಿಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ಬ್ರೇಕ್ ಸಂಜೆ 6ರ ನಂತರ ಚಾಮುಂಡಿಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ಬ್ರೇಕ್

ಅಲ್ಲದೆ ಆ ದಿನಗಳಂದು ದೇವಾಲಯದ ಪ್ರದೇಶದಲ್ಲಿ ದೇವಾಲಯದ ವತಿಯಿಂದ ಹಾಗೂ ದಾನಿಗಳಿಂದ ಸಾಮೂಹಿಕವಾಗಿ ಹಾಗೂ ಸಾರ್ವಜನಿಕವಾಗಿ ಪ್ರಸಾದ ತಯಾರಿಸುವುದು, ವಿತರಿಸುವುದನ್ನು ನಿಷೇಧಿಸಲಾಗಿದೆ. ದೇವಾಲಯದಲ್ಲಿ ಜರುಗುವ ರಥೋತ್ಸವ ಸಂಬಂಧಿತ ಧಾರ್ಮಿಕ ಕಾರ್ಯಕ್ರಮಗಳು ಸಾಂಪ್ರದಾಯಿಕವಾಗಿ ದೇವಾಲಯದ ಅರ್ಚಕರು ಮತ್ತು ಸಿಬ್ಬಂದಿಯ ಉಪಸ್ಥಿತಿಯಲ್ಲಿ ಎಂದಿನಂತೆ ನಡೆಸಬಹುದು ಎಂದು ಜಿಲ್ಲಾಧಿಕಾರಿ ಅವರು ಆದೇಶದಲ್ಲಿ ತಿಳಿಸಿದ್ದಾರೆ.

English summary
As a precaution against the spread of covid-19, DC Rohini Sindhuri has issued an order restricting public from entering Chamundeshwari Temple at Chamundi Hills from October 28 to October 29
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X