ಮೈಸೂರು: ನಿವೃತ್ತ ಐಎಎಸ್ ಅಧಿಕಾರಿ ಮಗಳ ಮೇಲೆ ಅತ್ಯಾಚಾರ

ಮೈಸೂರು, ಏ. 17: ನಿವೃತ್ತ ಐಎಎಸ್ ಅಧಿಕಾರಿಯೊಬ್ಬರು ತಮ್ಮ 8 ತಿಂಗಳ ಗರ್ಭಿಣಿ ಮಗಳ ಮೇಲೆ ಗಂಡನ ಮನೆಯವರಿಂದಲೇ ಅತ್ಯಾಚಾರ ನಡೆದಿದೆ ಎಂದು ಬೆಂಗಳೂರು ಪೂರ್ವ ವಲಯದಲ್ಲಿ ದೂರು ದಾಖಲಿಸಿದ್ದಾರೆ.

ಮೈಸೂರಿನಲ್ಲಿರುವ ತಮ್ಮ ಮಗಳ (ಗಂಡನ) ಮನೆಯಲ್ಲಿ ಆಕೆಯ ಪತಿಯ ಸಹೋದರ ಅತ್ಯಾಚಾರ ಎಸಗಿದ್ದಾನೆ. ಅಲ್ಲದೇ ವರದಕ್ಷಿಣೆ ಕಿರುಕುಳವನ್ನು ನೀಡಲಾಗಿದೆ ಎಂದು ದೂರು ದಾಖಲಿಸಿದ್ದಾರೆ. ದೂರನ್ನು ಪೂರ್ವವಲಯ ಡಿಸಿಪಿ ಸತೀಶ್ ಮೈಸೂರಿಗೆ ವರ್ಗಾಯಿಸಿದ್ದಾರೆ.[ಬುದ್ಧಿ ಹೇಳಿದ್ದೇ ಜೀವಕ್ಕೆ ಕುತ್ತು ತಂತು]

rape

ಮಗಳನ್ನು 4 ವರ್ಷದ ಹಿಂದೆ ಮೈಸೂರಿಗೆ ಮದುವೆ ಮಾಡಿ ಕೊಡಲಾಗಿತ್ತು. ಮಗಳ ಮೇಲೆ ನಿರಂತರವಾಗಿ ಶೋಷಣೆ ನಡೆಯುತ್ತಿದ್ದು ಎಂಟು ತಿಂಗಳ ಗರ್ಭಿಣಿಯಾಗಿದ್ದ ಆಕೆಯ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು ನಿವೃತ್ತ ಐಎಎಸ್ ಅಧಿಕಾರಿ ಆರೋಪಿಸಿದ್ದಾರೆ.['ರೇಪ್ ಮಾಡುವ ಮುನ್ನ ಈಕೆಯ ವಿಡಿಯೋ ನೋಡಿ']

ಮಗಳ ಬಳಿ 45 ಕೋಟಿ ರೂ. ವರದಕ್ಷಿಣೆ ತರುವಂತೆ ಒತ್ತಾಯ ಮಾಡಲಾಗಿತ್ತು. 2011 ರಲ್ಲಿ ಮೈಸೂರಿನ ಕುಟುಂಬವೊಂದಕ್ಕೆ ಮದುವೆ ಮಾಡಿ ಕೊಡಲಾಗಿತ್ತು. ಕುಟುಂಬದವರು ಮೈಸೂರಿನಲ್ಲಿ ಪ್ರತಿಷ್ಠಿತ ಆಸ್ಪತ್ರೆಯೊಂದನ್ನು ನಡೆಸುತ್ತಿದ್ದು ಅದರ ನಿರ್ವಹಣೆಗೆ ಹಣ ಬೇಕು ಎಂಬ ಕಾರಣಕ್ಕೆ ಮಗಳ ಮೇಲೆ ದೌರ್ಜನ್ಯ ಎಸಗಲಾಗಿದೆ ಎಂದು ರಾಜ್ಯದ ನಿವೃತ್ತ ಮುಖ್ಯ ಕಾರ್ಯದರ್ಶಿ ದೂರಿನಲ್ಲಿ ತಿಳಿಸಿದ್ದಾರೆ.

ಮನೆಯಿಂದ ಹಣ ತರಲು ಒತ್ತಾಯಿಸಿ ಅನೇಕ ಬಾರಿ ಮಧ್ಯರಾತ್ರಿ ಮನೆಯಿಂದ ಹೊರಕ್ಕೆ ಹಾಕಿದ್ದರು. ಈಗ ಮಗಳ ಮೇಲೆ ಅತ್ಯಾಚಾರವನ್ನು ಮಾಡಲಾಗಿದೆ ಎಂದು ದೂರು ದಾಖಲಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+