ಮೈಸೂರು; ನಿವೃತ್ತ ಇಂಟೆಲಿಜನ್ಸ್ ಬ್ಯೂರೋ ಅಧಿಕಾರಿ ಹತ್ಯೆ
ಮೈಸೂರು, ನವೆಂಬರ್ 06; ವಾಯು ವಿಹಾರಕ್ಕೆ ಬಂದಿದ್ದ ನಿವೃತ್ತ ಐಬಿ (ಇಂಟಲಿಜೆನ್ಸ್ ಬ್ಯುರೋ) ಅಧಿಕಾರಿ ಸಾವು ಇದೀಗ ಹೊಸ ತಿರುವು ಪಡೆದುಕೊಂಡಿದೆ. ಅಧಿಕಾರಿಯ ಹತ್ಯೆಯ ರೀತಿ ನೀಡಿ ಮೈಸೂರು ಪೊಲೀಸರು ಬೆಚ್ಚಿ ಬಿದ್ದಿದ್ದಾರೆ.
ಮೈಸೂರಿನ ಶಾರದಾದೇವಿನಗರದ ನಿವಾಸಿ ಆರ್. ಎನ್. ಕುಲಕರ್ಣಿ (82) ಕಾರು ಡಿಕ್ಕಿ ಹೊಡೆದು ಮೃತಪಟ್ಟಿದ್ದಾರೆ ಎಂದು ವಿವಿ ಪುರಂ ಸಂಚಾರ ಠಾಣೆ ಪೊಲೀಸ್ ಪ್ರಕರಣದ ದಾಖಲಿಸಿಕೊಂಡಿದ್ದರು. ಆದರೆ, ಘಟನಾ ಸ್ಥಳದಲ್ಲಿ ಸಿಕ್ಕ ಮಾಹಿತಿ ಪ್ರಕರಣಕ್ಕೆ ತಿರುವು ಕೊಟ್ಟಿದೆ.
ಚೆನ್ನೈ-ಮೈಸೂರು ವಂದೇ ಭಾರತ್ ರೈಲು ಏರಲು 921 ರೂ. ಸಾಕು!
ಘಟನಾ ಸ್ಥಳದ ಸಿಸಿಟಿವಿ ದೃಶ್ಯಾವಳಿಗಳು ಆರ್. ಎನ್. ಕುಲಕರ್ಣಿಗೆ ಕಾರು ಡಿಕ್ಕಿ ಹೊಡೆಸಿ ಹತ್ಯೆ ಮಾಡಿರುವುದನ್ನು ಖಚಿತ ಪಡಿಸಿವೆ. ಸಿಕ್ಕ ಮಾಹಿತಿ ಆಧರಿಸಿ, ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ಪೊಲೀಸರು ಮುಂದುವರೆಸಿದ್ದಾರೆ.
ಚಂದ್ರಶೇಖರ್ ಹತ್ಯೆ ಮಾಡಿದ ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ: ಬಿ.ಎಸ್.ಯಡಿಯೂರಪ್ಪ
ಅಕ್ಟೋಬರ್ 4ರ ಶುಕ್ರವಾರ ಸಂಜೆ ಶಾರದಾದೇವಿನಗರದ ನಿವಾಸಿ ಕುಲಕರ್ಣಿ ಎಂದಿನಂತೆ ವಾಯುವಿಹಾರಕ್ಕೆ ಕಾರಿನಲ್ಲಿ ಮಾನಸಗಂಗೋತ್ರಿ ಕ್ಯಾಂಪಸ್‌ಗೆ ತೆರಳಿದ್ದರು.
ಮಳವಳ್ಳಿಯಲ್ಲಿ ಬಾಲಕಿ ಹತ್ಯೆ: ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಸಾರ್ವಜನಿಕರ ಒತ್ತಾಯ
ಆ ವೇಳೆ ಕುಲಕರ್ಣಿ ಅವರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದೆ. ವಿಷಯ ತಿಳಿದ ಅವರ ಕಾರು ಚಾಲಕ ಸ್ಥಳಕ್ಕೆ ದೌಡಾಯಿಸಿ ಅವರನ್ನು ತಕ್ಷಣ ಕಾಮಾಕ್ಷಿ ಆಸ್ಪತ್ರೆಗೆ ಕರೆತಂದಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕುಲಕರ್ಣಿ ಮೃತಪಟ್ಟಿದ್ದರು.
ಇದೀಗ ತನಿಖೆ ಕೈಗೊಂಡ ಪೊಲೀಸರಿಗೆ ಅಪಘಾತದ ಬಗ್ಗೆ ಸಾಕಷ್ಟು ಅನುಮಾನ ಮೂಡಿದೆ. ಕ್ಯಾಂಪಸ್‌ನಲ್ಲಿದ್ದ ಸಿಸಿ ಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದಾಗ ನೋಂದಣಿ ಸಂಖ್ಯೆ ಇಲ್ಲದ ಕಾರು ಡಿಕ್ಕಿ ಹೊಡೆದು ಪರಾರಿಯಾಗಿರುವುದು ಕಂಡು ಬಂದಿದೆ.
ಏಕಾಏಕಿ ಡಿಕ್ಕಿ ಹೊಡೆದ ಮೇಲೆ ಕಾರನ್ನು ನಿಲ್ಲಿಸದೇ ಪರಾರಿಯಾಗಿದ್ದು, ಕೊಲೆ ಉದ್ದೇಶವೇ ಎಂಬ ಅನುಮಾನ ಪೊಲೀಸರಿಗೆ ಖಚಿತವಾಗಿದೆ.
ಮೈಸೂರು ನಗರ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ ಈ ಕುರಿತು ಮಾತನಾಡಿ, "ನಿವೃತ್ತ ಐಬಿ ಅಧಿಕಾರಿ ಕುಲಕರ್ಣಿ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ಪ್ರಕರಣದ ತನಿಖೆ ವೇಳೆ ಕೊಲೆ ಎಂಬುದು ಬೆಳಕಿಗೆ ಬಂದಿದೆ. ಆರೋಪಿಗಳ ಪತ್ತೆಗೆ ಮೂರು ತಂಡಗಳನ್ನು ರಚಿಸಲಾಗಿದ್ದು, ಶೋಧ ಕಾರ್ಯ ನಡೆಸಲಾಗುತ್ತಿದೆ" ಎಂದು ಹೇಳಿದ್ದಾರೆ.
ಮೂಲತಃ ಹಾವೇರಿ ಜಿಲ್ಲೆ ಸವಣೂರಿನ ಆರ್. ಎನ್. ಕುಲಕರ್ಣಿ, 1963ರಲ್ಲಿ ಕೇಂದ್ರ ಸರಕಾರದ ಇಂಟೆಲಿಜೆನ್ಸ್ ಬ್ಯುರೋ ಸೇರ್ಪಡೆಗೊಂಡು ನಾನಾ ಹುದ್ದೆ ಹಾಗೂ ಸ್ಥಳಗಳಲ್ಲಿ ಮೂರೂವರೆ ದಶಕಗಳ ಕಾಲ ಸೇವೆ ಸಲ್ಲಿಸಿದ್ದರು.