622 ಅಂಕ ಪಡೆದು ಮೈಸೂರು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಡಿ.ರೋಹನ್
ಮೈಸೂರು, ಏಪ್ರಿಲ್ 30:ಈ ಬಾರಿ ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಮೈಸೂರು ರಾಜ್ಯ 17ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದು, ಶೇ 70.23ರಷ್ಟು ಫಲಿತಾಂಶ ಪಡೆದಿದೆ. ಕಳೆದ ವರ್ಷ ಶೇ 82.90ರಷ್ಟು ಫಲಿತಾಂಶ ಪಡೆದು 11ನೇ ಸ್ಥಾನದಲ್ಲಿತ್ತು. ಅಂದರೆ ಈ ವರ್ಷ ಶೇ 12ರಷ್ಟು ಕುಸಿತ ಕಂಡಿದೆ.
ಇಲ್ಲಿ ಯಾವ ವಿಷಯದಲ್ಲಿ, ವಿದ್ಯಾರ್ಥಿಗಳು ಎಷ್ಟು ಅಂಕಗಳು ಪಡೆದಿದ್ದಾರೆ ಸೇರಿದಂತೆ ವಿದ್ಯಾರ್ಥಿಗಳ ಅನಿಸಿಕೆ, ಡಿಡಿಪಿಐ ಹೇಳಿಕೆಯನ್ನು ಸಂಗ್ರಹಿಸಿ ಕೊಡಲಾಗಿದೆ.
ಮೈಸೂರಿನ ರೋಹನ್ ಡಿ. ಗಂಗ್ಡಕಾರ್ 622 ಅಂಕ ಪಡೆದು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾನೆ. ಮೈಸೂರಿನ ಜೆಎಲ್ ಬಿ ರಸ್ತೆಯಲ್ಲಿನ ರೋಟರಿ ಜಾವಾ ಶಾಲೆ ವಿದ್ಯಾರ್ಥಿ ರೋಹನ್ ದಿನಕ್ಕೆ 3 ಗಂಟೆ ಓದುತ್ತಿದ್ದು, ಪರೀಕ್ಷೆಯ ವೇಳೆ 5 ಗಂಟೆ ಓದಿದರೆ ಹೆಚ್ಚು ಅಂಕ ಪಡೆಯಲು ಸಾಧ್ಯ ಎಂದು ತನ್ನ ಗೆಲುವಿನ ಗುಟ್ಟನ್ನು ಬಿಟ್ಟುಕೊಟ್ಟಿದ್ದಾನೆ. ಹಾಗೆಯೇ ವಿಜಯ ವಿಟ್ಠಲ ಶಾಲೆಯ ತೇಜಸ್, ನಿರಂತರ್ ದಿನೇಶ್ 620 ಅಂಕ ಪಡೆದಿದ್ದಾರೆ.

ಫಲಿತಾಂಶ ಕುರಿತು ಪ್ರತಿಕ್ರಿಯಿಸಿರುವ ರೋಹನ್ ಪೋಷಕರು ಹೆಚ್ಚು ಓದುವಂತೆ ಯಾವುದೇ ರೀತಿಯ ಒತ್ತಡವನ್ನು ಹಾಕಿರಲಿಲ್ಲ. ಬದಲಿಗೆ ಓದಿಗೆ ಉಪಯೋಗವಾಗುವಂತೆ ಎಲ್ಲಾ ರೀತಿಯ ಸಹಕಾರ ನೀಡಿದರು. ನನ್ನ ಈ ಸಾಧನೆಯಲ್ಲಿ ಶಿಕ್ಷಕರು ಬಹಳ ಮುಖ್ಯ ಪಾತ್ರವಹಿಸಿದ್ದು, ವಿದ್ಯಾರ್ಥಿಗಳಿಗೆ ವಿಶೇಷ ತರಗತಿಗಳನ್ನು ತೆಗೆದುಕೊಳ್ಳುವ ಮೂಲಕ ಉತ್ತಮ ಬೋಧನೆ ಮಾಡಿದ್ದಾರೆ. ಉತ್ತಮ ಅಂಕಗಳಿಸಿರುವುದಕ್ಕೆ ಸಂತೋಷವಾಗುತ್ತಿದೆ ಎಂದಿದ್ದಾರೆ.
ಡಿಡಿಪಿಐ ಡಾ.ಪಾಂಡುರಂಗ ಮೈಸೂರು 17ನೇ ಸ್ಥಾನದಲ್ಲಿ ಗುರುತಿಸಿಕೊಂಡಿರುವುದಕ್ಕೆ ಪ್ರತಿಕ್ರಿಯಿಸಿ, ಪರೀಕ್ಷೆಯಲ್ಲಿ ಅನುತ್ತೀರ್ಣರಾದವರು ಧೃತಿಗೆಡದೆ ಮರು ಪರೀಕ್ಷೆಯತ್ತ ಗಮನಹರಿಸಿ ಓದಬೇಕು. ಮುಂದಿನ ದಿನಗಳಲ್ಲಿ ಮೈಸೂರಿಗೆ ಉತ್ತಮ ಫಲಿತಾಂಶ ಬರುವ ನಿಟ್ಟಿನಲ್ಲಿ ವ್ಯಾಸಂಗದಲ್ಲಿ ಹಿಂದಿರುವ ವಿದ್ಯಾರ್ಥಿಗಳನ್ನು ಗುರುತಿಸಿ ಶಿಕ್ಷಕರು, ಸಂಪನ್ಮೂಲ ಶಿಕ್ಷಕರ ಮೂಲಕ ಮಾರ್ಗದರ್ಶನ ನೀಡುತ್ತೇವೆ. ವೈಯಕ್ತಿಕವಾಗಿಯೂ ವಿವಿಧ ವಿಷಯಗಳಲ್ಲಿ ಹಿಂದುಳಿದಿರುವ ವಿದ್ಯಾರ್ಥಿಗಳ ಬಗ್ಗೆ ಗಮನಹರಿಸಿ ಉತ್ತಮ ಫಲಿತಾಂಶ ಬರುವಂತೆ ಕೆಲಸ ಮಾಡುತ್ತೇವೆ ಎಂದು ಹೇಳಿದರು.
ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಭಾಗದ ಶೇ 87.06ರಷ್ಟು ವಿದ್ಯಾರ್ಥಿ ಗಳು ಉತ್ತೀರ್ಣರಾಗಿದ್ದಾರೆ. ಮೈಸೂರಿನಲ್ಲಿ ಒಟ್ಟು 17,714 ಮಂದಿ ಬಾಲಕರು ಪರೀಕ್ಷೆ ಬರೆದಿದ್ದು 13,613 ಉತ್ತೀರ್ಣರಾಗಿದ್ದಾರೆ. ಇನ್ನು 17,771 ವಿದ್ಯಾರ್ಥಿನಿಯರ ಪೈಕಿ 15,007 ಉತ್ತೀರ್ಣರಾಗಿದ್ದಾರೆ. ಜಿಲ್ಲೆಗೆ ಪಿರಿಯಾಪಟ್ಟಣ ತಾಲ್ಲೂಕು ಶೇ 90.59ರಷ್ಟು ಫಲಿತಾಂಶ ಪಡೆಯುವ ಮೂಲಕ ಮೊದಲ ಸ್ಥಾನದಲ್ಲಿದೆ. ಮೈಸೂರು ಗ್ರಾಮೀಣ, ನಂಜನಗೂಡು, ಹುಣಸೂರು, ಕೆ ಆರ್ ನಗರ ಮುಂದುವರೆದ ಸ್ಥಾನವನ್ನು ಪಡೆದುಕೊಂಡಿದೆ ಎಂದು ಡಿಡಿಪಿಐ ಮಾಹಿತಿ ನೀಡಿದ್ದಾರೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ?












Click it and Unblock the Notifications