• search
  • Live TV
ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮೈಸೂರು ನೂತನ ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ಅಧಿಕಾರ ಸ್ವೀಕಾರ

By ಮೈಸೂರು ಪ್ರತಿನಿಧಿ
|

ಮೈಸೂರು, ಸೆಪ್ಟೆಂಬರ್ 29: ನಿರ್ಗಮಿತ ಮೈಸೂರು ಜಿಲ್ಲಾಧಿಕಾರಿ ಬಿ.ಶರತ್ ಅವರಿಂದ, ನೂತನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಅಧಿಕಾರ ಸ್ವೀಕರಿಸಿದರು. ಮೈಸೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ರೋಹಿಣಿ ಸಿಂಧೂರಿ ಅಧಿಕಾರ ವಹಿಸಿಕೊಂಡರು.

ಜಿಲ್ಲಾಧಿಕಾರಿ ಕಚೇರಿಯ ಸಿಬ್ಬಂದಿ ವರ್ಗವು ನೂತನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಗೆ ಹೂಗುಚ್ಛ ನೀಡಿ ಸ್ವಾಗತಿಸಿ, ಅಭಿನಂದನೆ ಸಲ್ಲಿಸಿದರು.

ಮೈಸೂರು ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ನೇಮಕ

ನೂತನ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಅಧಿಕಾರ ಸ್ವೀಕಾರ ಮಾಡುವುದಕ್ಕೂ ಮೊದಲು ನಾಡಿನ ಅಧಿದೇವತೆ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ಚಾಮುಂಡಿ ಬೆಟ್ಟಕ್ಕೆ ರೋಹಿಣಿ ಸಿಂಧೂರಿ ಹಾಗೂ ಪತಿ ಸುಧೀರ್ ರೆಡ್ಡಿ ದಂಪತಿ ಭೇಟಿ ನೀಡಿ, ನಾಡದೇವತೆ ಚಾಮುಂಡೇಶ್ವರಿಯ ದರ್ಶನ ಪಡೆದರು. ನೂತನ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ದೇವಸ್ಥಾನದ ಆಡಳಿತ ಮಂಡಳಿ ಬರಮಾಡಿಕೊಂಡಿತು.

ಚಾಮುಂಡಿ ಬೆಟ್ಟ ದೇಗುಲದ ಕಾರ್ಯ ನಿರ್ವಾಹಕ ಅಧಿಕಾರಿ ಎನ್.ಎಸ್ ಯತಿರಾಜ್ ಸಂಪತ್ ಕುಮಾರನ್, ವ್ಯವಸ್ಥಾಪಕ ಗೋವಿಂದ ರಾಜ್ ಹಾಗೂ ಪ್ರಧಾನ ಅರ್ಚಕ ಶಶಿಶೇಖರ್ ದೀಕ್ಷಿತ್ ನೂತನ ಜಿಲ್ಲಾಧಿಕಾರಿಗಳನ್ನು ಬರಮಾಡಿಕೊಂಡರು.

ನಾಡದೇವತೆ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಬಳಿಕ ಮೈಸೂರು ಜಿಲ್ಲಾಧಿಕಾರಿ ಕಚೇರಿಯತ್ತ ರೋಹಿಣಿ ಸಿಂಧೂರಿ ಪಯಣ ಬೆಳೆಸಿದರು.

ಧಾರ್ಮಿಕ ಮತ್ತು ದತ್ತಿ ಇಲಾಖೆಯ ಆಯುಕ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದ 2009 ಬ್ಯಾಚಿನ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ದಾಸರಿ ಅವರನ್ನು ಮೈಸೂರು ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.

ಭ್ರಷ್ಟ ಅಧಿಕಾರಿಗಳಿಗೆ ಸಿಂಹಸ್ವಪ್ನವಾಗಿದ್ದ ರೋಹಿಣಿ ಸಿಂಧೂರಿ ದಾಸರಿ ಅವರು ಕಳೆದ ಫೆಬ್ರವರಿಯಿಂದ ಇಲ್ಲಿ ತನಕ ನಾಲ್ಕನೇ ಇಲಾಖೆ ನೋಡುತ್ತಿದ್ದಾರೆ.

ಮೈಸೂರು ದಸರಾಕ್ಕೂ ಮುನ್ನ ಹಾಲಿ ಜಿಲ್ಲಾಧಿಕಾರಿ ಬಿ ಶರತ್ ಅವರನ್ನು ವರ್ಗಾವಣೆ ಮಾಡದಂತೆ ಸರ್ಕಾರದ ಮೇಲೆ ಅವರ ಸಮುದಾಯದವರು ಒತ್ತಡ ಹೇರಿದ್ದರು.

English summary
The new District Collector, Rohini Sindhuri Has Takes Over Power by the departered Mysuru District Collector B. Sharath.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X