ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಾಮುಂಡಿ ಬೆಟ್ಟದಲ್ಲಿ ಹರಿದ್ವಾರ ರೀತಿ ರೋಪ್ ವೇ: ಸೋಮಣ್ಣ

|
Google Oneindia Kannada News

ಮೈಸೂರು, ಡಿಸೆಂಬರ್ 24: ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಹರಿದ್ವಾರ ಮಾದರಿಯಲ್ಲಿ ರೋಪ್ ವೇ ನಿರ್ಮಾಣ ಮಾಡಲು ಸರಕಾರ ನಿರ್ಧರಿಸಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.

ಚಾಮುಂಡೇಶ್ವರಿ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಾಗುತ್ತಿದ್ದು, ಬೆಟ್ಟದಲ್ಲಿ ಸಂಚಾರ ಒತ್ತಡವನ್ನು ನಿಯಂತ್ರಣ ಮಾಡಲು ಕೇಂದ್ರ ಸರಕಾರದ ನೆರವಿನೊಂದಿಗೆ ರೋಪ್ ವೇ ನಿರ್ಮಿಸಲು ಅಂದಾಜು 20 ಕೋಟಿ ರೂ, ವೆಚ್ಚ ಮಾಡಲು ನಿರ್ಧರಿಸಲಾಗಿದೆ.

 ಚಾಮುಂಡಿ ಬೆಟ್ಟದ 1001 ಮೆಟ್ಟಿಲು ಹತ್ತಿ ಹರಕೆ ತೀರಿಸಿದ ನಾರಾಯಣ ಗೌಡ ಚಾಮುಂಡಿ ಬೆಟ್ಟದ 1001 ಮೆಟ್ಟಿಲು ಹತ್ತಿ ಹರಕೆ ತೀರಿಸಿದ ನಾರಾಯಣ ಗೌಡ

ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ನಿರ್ಮಾಣ ಮಾಡುವ ರೋಪ್ ವೇ ಪಳನಿ ಮತ್ತು ಹರಿದ್ವಾರಕ್ಕಿಂತಲೂ ಅತ್ಯಾಧುನಿಕವಾಗಿರಲಿದೆ, ಅಲ್ಲಿನ ಪರಿಸರಕ್ಕೆ ಯಾವುದೇ ಹಾನಿಯಾಗದಂತೆ ಯೋಜನೆ ರೂಪಿಸಲಾಗುವುದು ಎಂದು ಸಚಿವ ಸೋಮಣ್ಣ ತಿಳಿಸಿದರು.

Ropeway Like Haridwar In Chamundi Hill: V.Somanna

ಈ ರೋಪ್ ವೇ ಯೋಜನೆಯಿಂದ ಭಕ್ತರಿಗೆ ಅನುಕೂಲವಾಗುವ ಜತೆಗೆ ಮಳೆಗಾಲದಲ್ಲಿ ರಸ್ತೆ ಕುಸಿತದಿಂದ ಸಮಸ್ಯೆ ಎದುರಾಗುವುದು ನಿವಾರಣೆಯಾಗಲಿದೆ ಎಂದು ಹೇಳಿದರು.

ಚಾಮುಂಡಿ ಬೆಟ್ಟದಲ್ಲಿ ಸಮರ್ಪಕವಾದ ಕುಡಿಯುವ ನೀರಿನ ವ್ಯವಸ್ಥೆ ಕಾಮಗಾರಿ ಮುಂದುವರೆದಿದೆ, ಬೆಟ್ಟದ ಮೇಲೆ ಸ್ವಚ್ಛತೆ ಕಾಪಾಡಲು ಅಂಗಡಿ, ಮುಂಗಟ್ಟುಗಳನ್ನು ಸಂಪೂರ್ಣವಾಗಿ ತೆರವುಗೊಳಿಸಲಾಗುವುದು ಎಂದರು.

 ಡಿ.26ಕ್ಕೆ ಸೂರ್ಯಗ್ರಹಣ; ಚಾಮುಂಡಿ ಬೆಟ್ಟದಲ್ಲಿ ಮಧ್ಯಾಹ್ನದವರೆಗೆ ದೇವಿ ದರ್ಶನ ಇಲ್ಲ ಡಿ.26ಕ್ಕೆ ಸೂರ್ಯಗ್ರಹಣ; ಚಾಮುಂಡಿ ಬೆಟ್ಟದಲ್ಲಿ ಮಧ್ಯಾಹ್ನದವರೆಗೆ ದೇವಿ ದರ್ಶನ ಇಲ್ಲ

ಕಾರು ನಿಲ್ದಾಣದ ಸಮೀಪದಲ್ಲಿ 180 ಮಳಿಗೆಗಳನ್ನು ನಿರ್ಮಿಸಿ ಹಂಚಲು ಮುಂದಾಗಿದ್ದೇವೆ, ಇದಕ್ಕಾಗಿ 5 ರಿಂದ 6 ಕೋಟಿ ರೂ, ವೆಚ್ಚವನ್ನು ಅಂದಾಜು ಮಾಡಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.

ಇದೇ ಸಂದರ್ಭದಲ್ಲಿ ರೇಷ್ಮೇ ಇಲಾಖೆಗೂ ಉತ್ತೇಜನ ನೀಡಲು ನಿರ್ಧರಿಸಲಾಗಿದ್ದು, ಸಂಸ್ಥೆಯ ಇತರೆ ನಿಗಮಗಳನ್ನು ವಿಲೀನ ಮಾಡಲಾಗುವುದು, ಇಲಾಖೆಯ ನೇರ ಆಡಳಿತಕ್ಕೆ ತರುವ ಪ್ರಸ್ತಾವನೆ ಸಿದ್ದವಾಗುತ್ತಿದೆ ಎಂದು ಸಚಿವ ಸೋಮಣ್ಣ ತಿಳಿಸಿದರು.

English summary
Mysore District Minister incharge V. Somanna said the government has decided to construct a ropeway in the Haridwar model of the Mysore Chamundi Hill.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X