4 ಕೋಟಿ ವೆಚ್ಚದಲ್ಲಿ ಅಂಬಾ ವಿಲಾಸ ಅರಮನೆ ಅಭಿವೃದ್ಧಿ
ಮೈಸೂರು, ಜೂನ್ 3 : ಮೈಸೂರಿನ ಮುಖ್ಯ ಆಕರ್ಷಣೆಗಳಲ್ಲಿ ಒಂದಾದ ಅಂಬಾ ವಿಲಾಸ ಅರಮನೆಯನ್ನು 4.98 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಪ್ರವಾಸೋದ್ಯಮ ಇಲಾಖೆ ತೀರ್ಮಾನಿಸಿದೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ಕೌಶಿಕ್ ಮುಖರ್ಜಿ ಅರಮನೆಯಲ್ಲಿ ಕೈಗೊಳ್ಳಬಹುದಾದದ ಅಭಿವೃದ್ಧಿ ಕಾರ್ಯಗಳ ಯೋಜನೆ ತಯಾರಿಸುವಂತೆ ಮೈಸೂರು ಜಿಲ್ಲಾಧಿಕಾರಿ ಅವರಿಗೆ ಸೂಚಿಸಿದ್ದಾರೆ.
ಸರ್ಕಾರದ ಮುಖ್ಯ ಕಾರ್ಯದರ್ಶಿ ಕೌಶಿಕ್ ಮುಖರ್ಜಿ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಸೋಮವಾರ ನಡೆದ ಸಭೆಯಲ್ಲಿ ಈ ಕುರಿತು ಜಿಲ್ಲಾಧಿಕಾರಿ ಅವರಿಗೆ ಮಾಹಿತಿ ನೀಡಲಾಗಿತ್ತು. ಅಂಬಾ ವಿಲಾಸ ಅರಮನೆಯಲ್ಲಿ ಕೈಗೊಳ್ಳಬೇಕಾಗಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಯೋಜನೆ ತಯಾರಿಸುವಂತೆ ನಿರ್ದೇಶನ ನೀಡಲಾಗಿದೆ.

ಪ್ರವಾಸೋದ್ಯಮ ಇಲಾಖೆ ಅಂಬಾ ವಿಲಾಸ ಅರಮನೆಯನ್ನು 4.98 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲು ಮುಂದಾಗಿದೆ. ದರ್ಬಾರ್ ಹಿಲ್ಸ್, ಅರಮನೆ ಆವರಣದಲ್ಲಿ ಹಲವಾರು ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತದೆ ಎಂದು ಕೌಶಿಕ್ ಮುಖರ್ಜಿ ಹೇಳಿದ್ದಾರೆ. ಅರಮನೆಯ ಐತಿಹಾಸಿಕ ಸೌಂದರ್ಯಕ್ಕೆ ಯಾವುದೇ ರೀತಿಯ ಧಕ್ಕೆ ಉಂಟಾಗದಂತೆ ಈ ಕಾಮಗಾರಿಗಳನ್ನು ನಡೆಸಲಾಗುತ್ತದೆ ಎಂದರು. [ಜೂನ್ 4ಕ್ಕೆ ನಾಲ್ವಡಿ ಕೃಷ್ಣರಾಜ್ ಒಡೆಯರ್ ಜಯಂತಿ]
ಮುಖರ್ಜಿ ಭೇಟಿ : ಕೌಶಿಕ್ ಮುಖರ್ಜಿ ಶೀಘ್ರದಲ್ಲೇ ಅರಮನಗೆ ಭೇಟಿ ನೀಡಲಿದ್ದು, ಮೈಸೂರು ಅರಮನೆ ಅಭಿವೃದ್ಧಿ ಮಂಡಳಿ ಮತ್ತು ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳ ಜೊತೆ ಚರ್ಚಿಸಿ ಕೈಗೊಳ್ಳಬಹುದಾದದ ಕಾಮಗಾರಿಗಳ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ. ಸುಮಾರು 40 ವಿವಿಧ ಕಾಮಗಾರಿಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ.












Click it and Unblock the Notifications