ಮೈಸೂರು ನಗರದ ಮೂಲ ಸೌಕರ್ಯಕ್ಕಾಗಿ 950 ಕೋಟಿ ರು. : ಸಿಎಂ ಸಿದ್ದರಾಮಯ್ಯ
ಕೃಷ್ಣರಾಜ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ಕಾಮಗಾರಿ ಶಂಕುಸ್ಥಾಪನೆ ಹಾಗೂ ವಿವಿಧ ಸವಲತ್ತುಗಳ ವಿತರಣಾ ಸಮಾರಂಭ ಉದ್ಘಾಟನಾ ಸಮಾರಂಭದಲ್ಲಿ ಅನುದಾನದ ಬಗ್ಗೆ ಮುಖ್ಯಮಂತ್ರಿ ವಿವರಣೆ
ಮೈಸೂರು, ಫೆಬ್ರವರಿ 12: ಸಾಂಸ್ಕೃತಿಕ ನಗರಿ, ಅರಮನೆಗಳ ನಗರಿ ಮುಂತಾದ ಹಲವಾರು ವಿಶೇಷಣೆಗಳನ್ನು ಹೊಂದಿರುವ ಮೈಸೂರು ನಗರದ ಸೌಂದರ್ಯ ಹಾಗೂ ಸ್ವಚ್ಛತೆ ಉಳಿಸಿಕೊಳ್ಳಲು ಹಾಗೂ ಎಲ್ಲಾ ಅಗತ್ಯ ಸೌಲಭ್ಯಗಳನ್ನು ಮೈಸೂರಿಗೆ ಒದಗಿಸಲು ಸರ್ಕಾರ ಕಳೆದ ಮೂರೂವರೆ ವರ್ಷಗಳಲ್ಲಿ 950 ಕೋಟಿ ರೂ.ಗಳನ್ನು ಮೈಸೂರು ನಗರಕ್ಕೆ ನೀಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಭಾನುವಾರ ಆಯೋಜಿಸಿದ್ದ ಕೃಷ್ಣರಾಜ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ಕಾಮಗಾರಿ ಶಂಕುಸ್ಥಾಪನೆ ಹಾಗೂ ವಿವಿಧ ಸವಲತ್ತುಗಳ ವಿತರಣಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.['ಬಿಎಸ್ ವೈ ಆರೋಪ ಭೂತದ ಬಾಯಲ್ಲಿ ಭಗವದ್ಗೀತೆ': ಸಿಎಂ]

ಮೈಸೂರಿಗೆ ಜಿಲ್ಲಾ ಆಸ್ಪತ್ರೆ ಕಟ್ಟಡ, ಟ್ರಾಮಾ ಸೆಂಟರ್, ಜಯದೇವ ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ ಅನುದಾನ ನೀಡಿದ್ದೇನೆ. ಮಹಾರಾಣಿ ಕಾಲೇಜಿನಲ್ಲಿ ಸುಮಾರು 10 ಸಾವಿರ ವಿದ್ಯಾರ್ಥಿನಿಯರು ವಿದ್ಯಾಭ್ಯಾಸ ಮಾಡುತ್ತಾರೆ. ಆ ಕಾಲೇಜಿಗೆ ಹೊಸದಾಗಿ ಕಟ್ಟಡ ಹಾಗೂ ಹಾಸ್ಟೆಲ್ ನಿರ್ಮಾಣ ಮಾಡುತ್ತಿದ್ದೇವೆ. 136 ಹಾಸಿಗೆಯ ಜಯದೇವ ಆಸ್ಪತ್ರೆ ಕಟ್ಟಡ ನಿರ್ಮಾಣ ಪ್ರಗತಿಯಲ್ಲಿದ್ದು, ಪೂರ್ಣಗೊಂಡ ನಂತರ ಬೆಂಗಳೂರಿನಲ್ಲಿ ಸಿಗುತ್ತಿದ್ದ ವೈದ್ಯಕೀಯ ಸೌಲಭ್ಯ ಮೈಸೂರಿನ ಜನತೆಗೆ ಇಲ್ಲೇ ಸಿಗುತ್ತದೆ ಎಂದು ಹೇಳಿದರು.
ಮೈಸೂರಿಗೆ ಜಿಲ್ಲಾ ಆಸ್ಪತ್ರೆ ಇರಲಿಲ್ಲ. ಕಳೆದ ವರ್ಷ 500 ಹಾಸಿಗೆಗಳುಳ್ಳ ಜಿಲ್ಲಾ ಆಸ್ಪತ್ರೆಯನ್ನು ಮಂಜೂರು ಮಾಡಿದ್ದೇನೆ. ಇದರ ಜೊತೆಗೆ 700 ಕೋಟಿ ರೂ. ವೆಚ್ಚದಲ್ಲಿ ಸೂಪರ್‍ಸ್ಪೆಷಾಲಿಟಿ ಆಸ್ಪತ್ರೆಯನ್ನು ಸಹ ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.[1,000 ಕೋಟಿ ಕೊಟ್ಟಿದ್ದು ನಿಜವೇ ಆದರೆ ರಾಜೀನಾಮೆ ನೀಡ್ತೀರಾ? ಸಿಎಂಗೆ ಬಿಎಸ್ ವೈ ಚಾಲೆಂಜ್]
ಮೈಸೂರು ಮಹಾನಗರ ಪಾಲಿಕೆ ವತಿಯಿಂದ ವಿವಿಧ ಅಭಿವೃದ್ಧಿ ಕೈಗೊಳ್ಳಲು 350 ಕೋಟಿ ನೀಡಿದ್ದೇವೆ. ಇರ್ವಿನ್ ರಸ್ತೆ ಅಗಲೀಕರಣಕ್ಕೆ ಅನುದಾನ ನೀಡಲಾಗುವುದು. ಮೈಸೂರಿಗೆ ಎರಡು ಬಾರಿ ಸ್ವಚ್ಛ ನಗರಿ ಗೌರವ ಸಿಗಲು ಜನರ ಸಹಕಾರ ಹಾಗೂ ಪೌರಕಾರ್ಮಿಕರ ಶ್ರಮ ಕಾರಣ. ಎಲ್ಲಾ ಪೌರಕಾರ್ಮಿಕರನ್ನು ಹಂತ ಹಂತವಾಗಿ ಖಾಯಂ ಮಾಡಲು ತೀರ್ಮಾನಿಸಲಾಗಿದೆ ಎಂದರು.
ಎಲೆ ತೋಟದ ನಿವಾಸಿಗಳಿಗೆ ಹಕ್ಕು ಪತ್ರ ಸಿಕ್ಕಿಲ್ಲ. ಇದಕ್ಕಾಗಿ ಜಿಲ್ಲಾಧಿಕಾರಿಗಳು ಹಾಗೂ ಮಹಾನಗರ ಪಾಲಿಕೆ ಆಯುಕ್ತರು ಜಂಟಿ ಸಮೀಕ್ಷೆ ನಡೆಸಲು ಸೂಚನೆ ನೀಡಿದ್ದೇನೆ. ಸ್ವಾಧೀನದಲ್ಲಿರುವವರಿಗೆ ಹಕ್ಕು ಪತ್ರ ನೀಡಲು ಕ್ರಮವಹಿಸಲಾಗುವುದು ಎಂದರು.
ಸೂಯಜ್ ಫಾರಂ ನಿಂದ ದುರ್ವಾಸನೆ ಬರುತ್ತಿದೆ. ಇದರ ನಿವಾರಣೆಗಾಗಿ ಮುಂದಿನ ಬಜೆಟ್‍ನಲ್ಲಿ ಅನುದಾನ ಒದಗಿಸಲಾಗುವುದು ಎಂದರು.
ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ ಉಪಸ್ಥಿತರಿದ್ದರು.
ರೇಷ್ಮೆ ಉದ್ಯಮಗಳ ನಿಗಮದ ಅಧ್ಯಕ್ಷರಾಗಿರುವ ಕೃಷ್ಣರಾಜ ಕ್ಷೇತ್ರದ ಶಾಸಕರಾದ ಎಂ.ಕೆ. ಸೋಮಶೇಖರ್ ಅಧ್ಯಕ್ಷತೆ ವಹಿಸಿದ್ದರು. ಮಹಾಪೌರರಾದ ಎಂ.ಜೆ. ರವಿಕುಮಾರ್, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಿ. ಧ್ರುವಕುಮಾರ್, ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಸಿದ್ದರಾಜು, ಮೈಸೂರು ಬಣ್ಣ ಮತ್ತು ಅರಗು ಕಾರ್ಖಾನೆ ಅಧ್ಯಕ್ಷರಾದ ಹೆಚ್.ಎ. ವೆಂಕಟೇಶ್, ಮಹಾನಗರ ಪಾಲಿಕೆ ಉಪ ಮೇಯರ್ ರತ್ನ ಲಕ್ಷಣ್, ಜಿಲ್ಲಾಧಿಕಾರಿ ಡಿ. ರಂದೀಪ್ ಮತ್ತಿತರರು ಉಪಸ್ಥಿತರಿದ್ದರು.
-
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ












Click it and Unblock the Notifications