ಬಿಜೆಪಿ ಅಧ್ಯಕ್ಷರ ಬದಲಾವಣೆ ವಿಷಯದಲ್ಲಿ ಆರ್‌ಎಸ್‌ಎಸ್ ಹಸ್ತಕ್ಷೇಪವಿಲ್ಲ: ಕಲ್ಲಡ್ಕ ಪ್ರಭಾಕರ್ ಭಟ್
ಮೈಸೂರು, ಮೇ 15: ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ವಿಷಯದಲ್ಲಿ ಆರ್‌ಎಸ್‌ಎಸ್ ಮೂಗು ತೂರಿಸುವುದಿಲ್ಲ ಎಂದು ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರು ತಿಳಿಸಿದ್ದಾರೆ.
ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧ್ಯಕ್ಷರ ಬದಲಾವಣೆ ವಿಷಯವನ್ನು ಬಿಜೆಪಿ ಪಕ್ಷ ಮತ್ತು ಅದರ ಹೈಕಮಾಂಡ್ ನೋಡಿಕೊಳ್ಳುತ್ತದೆ ಎಂದು ಅವರು ಹೇಳಿದ್ದಾರೆ.
ಪಕ್ಷದ ಆಂತರಿಕ ವಿಷಯಕ್ಕೂ ಸಂಘ ಪರಿವಾರಕ್ಕೂ ಯಾವುದೇ ಸಂಬಂಧ ಇಲ್ಲ, ಸಂಘದ ಯಾರೊಬ್ಬರೂ ಬಿಜೆಪಿ ರಾಜ್ಯಾಧ್ಯಕ್ಷರ ಸ್ಥಾನಕ್ಕೆ ಆಕಾಂಕ್ಷಿಗಳು ಸಹ ಅಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ರಾಜ್ಯ ರಾಜಕಾರಣದ ಬಗ್ಗೆ ಮಾತನಾಡಿರುವ ಅವರು, ಎಪ್ಪತ್ತು ವರ್ಷದಲ್ಲಿ ಮೊದಲ ಬಾರಿಗೆ ಕರ್ನಾಟಕದಲ್ಲಿ ಸರ್ಕಾರವೇ ಇಲ್ಲ ಎಂಬಂತೆ ಭಾಸವಾಗುತ್ತಿದೆ, 38 ಸೀಟು ಪಡೆದ ವ್ಯಕ್ತಿ ಮುಖ್ಯಮಂತ್ರಿ ಆಗುವುದು ಪ್ರಜಾಪ್ರಭುತ್ವದ ವಿಡಂಬನೆ ಎಂದು ಪ್ರಭಾಕರ್ ಭಟ್ ಅವರು ಬೇಸರ ವ್ಯಕ್ತಪಡಿಸಿದರು.
ಪ್ರಸ್ತುತ ಮೈತ್ರಿ ಪಕ್ಷಗಳ ನಡುವೆ ನಡೆಯುತ್ತಿರುವ ರಾಜಕೀಯ ಕಿತ್ತಾಟಗಳನ್ನು ನೋಡಿದರೆ ಸರ್ಕಾರ ಯಾವಾಗ ಬೇಕಾದರೂ ಉರುಳುಬಹುದು, ಮೇ 23 ರ ಫಲಿತಾಂಶದ ನಂತರ ಸರ್ಕಾರ ಅಲ್ಲಾಡಬಹುದು ಎಂದು ಅವರು ನಿರೀಕ್ಷೆ ವ್ಯಕ್ತಪಡಿಸಿದರು.
ಸ್ವಾತಂತ್ರ್ಯ ಭಾರತದ ಮೊದಲ ಉಗ್ರ ನಾಥೂರಾಮ್ ಗೂಡ್ಸೆ ಎಂದ ಕಮಲ್ ಹಾಸನ್ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಯಾರ್ಯಾರೋ ಏನೇನೋ ಹೇಳುತ್ತಿರುತ್ತಾರೆ ಅದಕ್ಕೆಲ್ಲಾ ಪ್ರತಿಕ್ರಿಯಿಸುತ್ತಾ ಇರಲು ಸಾಧ್ಯವಿಲ್ಲ ಎಂದರು.
ಪಶ್ಚಿಮ ಬಂಗಾಳದಲ್ಲಿ ನಿನ್ನೆ ಚುನಾವಣಾ ಪ್ರಚಾರ ಭಾಷಣದ ವೇಳೆ ನಡೆ ಗಲಭೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಅಮಿತ್ ಷಾ ಅವರಿಗೆ ಬಂಗಾಳದಲ್ಲಿ ಮಾತನಾಡಲು ಅವಕಾಶ ನೀಡುತ್ತಿಲ್ಲ. ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಮಾತನಾಡುವ ಅವಕಾಶವಿದೆ ಎಂದರು. ಸರ್ಕಾರ ಏನೂ ಕೆಲಸ ಮಾಡಿಲ್ಲ. ಅದನ್ನು ಮುಚ್ಚಿಕೊಳ್ಳಲು ಇತರರಿಗೂ ಮಾತನಾಡಲು ಅವಕಾಶ ನೀಡುತ್ತಿಲ್ಲ ಎಂದು ಹೇಳಿದರು.
-
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ-ಬಿ.ಎಸ್.ಯಡಿಯೂರಪ್ಪ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ












Click it and Unblock the Notifications