ಕಾಂಗ್ರೆಸ್ ಪಕ್ಷದ ಸಿ.ಎಚ್.ವಿಜಯ್ ಶಂಕರ್ ಮತ್ತೆ ಬಿಜೆಪಿಗೆ?

ಮೈಸೂರು, ಅಕ್ಟೋಬರ್ 24: ಬಿಜೆಪಿ ತೊರೆದು ಕಾಂಗ್ರೆಸ್​ ಸೇರಿದ್ದ ಮಾಜಿ ಸಂಸದ ಸಿ.ಎಚ್​. ವಿಜಯಶಂಕರ್​ ಅವರು ಮತ್ತೆ ಬಿಜೆಪಿ ಪಕ್ಷಕ್ಕೆ ಮರಳಲಿದ್ದಾರೆ ಎಂಬ ವದಂತಿ ಜಿಲ್ಲಾದ್ಯಂತ ಹರಿದಾಡುತ್ತಿದೆ.

ಬಿಜೆಪಿ ತನಗೆ ಸೂಕ್ತ ಸ್ಥಾನಮಾನ ನೀಡಿಲ್ಲ ಎಂದು ಸಿ.ಎಚ್​.ವಿಜಯಶಂಕರ್​ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದರು. ಇವರು ಮೊದಲೂ ಕಾಂಗ್ರೆಸ್‌ ನಲ್ಲೇ ಇದ್ದರು. ಕಳೆದ ಫೆಬ್ರುವರಿಯಲ್ಲಿ ಸಿದ್ದರಾಮಯ್ಯನವರ ಸಮ್ಮುಖದಲ್ಲಿ ಕಾಂಗ್ರೆಸ್​ಗೆ ಸೇರ್ಪಡೆಗೊಂಡಿದ್ದು, ಸಿದ್ದರಾಮಯ್ಯನವರ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದರು. ಇದೀಗ ಅವರು ಮತ್ತೆ ಬಿಜೆಪಿ ಸೇರಲು ತೀರ್ಮಾನಿಸಿದ್ದಾರೆ ಎನ್ನಲಾಗಿದ್ದು, ಬಿಜೆಪಿಗೆ ಮರಳುವುದನ್ನು ಮುಖ್ಯಮಂತ್ರಿ ಯಡಿಯೂರಪ್ಪನವರು ಕೂಡ ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ.

ವಿಜಯಶಂಕರ್​ ಅವರು ಪಿರಿಯಾಪಟ್ಟಣದ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್​ ಕೇಳಿದ್ದು, ಅದಕ್ಕೆ ಬಿಜೆಪಿ ನಾಯಕರೂ ಸಮ್ಮತಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

Rumor About Congress Member CH VijayShankar Back To BJP

ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಸಚಿವ ವಿ.ಸೋಮಣ್ಣ, "ವಿಜಯಶಂಕರ್​ ನನ್ನ ಆತ್ಮೀಯ ಸ್ನೇಹಿತ. ನಾನು ವಿಜಯಶಂಕರ್​ಗೆ ಮೊದಲೇ ಹೇಳಿದ್ದೆ. ಮೋದಿ ಹವಾ ಇದೆ, ತರಗೆಲೆ ಥರ ತೂರಿ ಹೋಗುತ್ತೀರಿ ಅಂತ. ಅವರ ಮನೆಯವರ ಬಳಿಯೂ ಮಾತುಕತೆ ಆಡಿದ್ದೆ. ಆದರೂ ಪಕ್ಷ ತೊರೆದು ಹೋಗಿದ್ದರು. ವಿಜಯಶಂಕರ್​ ಮರಳಿ ಪಕ್ಷಕ್ಕೆ ಬರುವ ಬಗ್ಗೆ ನನಗೆ ಮಾಹಿತಿ ಇಲ್ಲ. ಅದನ್ನು ವರಿಷ್ಠರು ನಿರ್ಧರಿಸುತ್ತಾರೆ" ಎಂದಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+