• search
  • Live TV
ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕರ್ನಾಟಕದಿಂದ ಮೋದಿ ಸ್ಪರ್ಧೆ ವದಂತಿ: HDK ಏನಂದ್ರು?

|
      ಮೋದಿಗೆ ಕರ್ನಾಟಕದ ಕಷ್ಟ ಗೊತ್ತಾಗ್ಬೇಕು ಅಂದ್ರೆ ಹೀಗೆ ಮಾಡ್ಬೇಕಂತೆ..! | Oneindia Kannada

      ಮೈಸೂರು, ಮಾರ್ಚ್ 25: "ಕರ್ನಾಟಕದಿಂದ ಪ್ರಧಾನಿ ನರೇಂದ್ರ ಮೋದಿ ಅವರು ಸ್ಪರ್ಧಿಸುವುದಾದರೆ ಸ್ಪರ್ಧಿಸಲಿ. ಆಗಲಾದರೂ ಅವರಿಗ ಈ ರಾಜ್ಯದ ಕಷ್ಟಗಳ ಅರಿವಾಗಬಹುದು" ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

      ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

      ಮಂಢ್ಯ ಕ್ಷೇತ್ರದಲ್ಲಿ ಪುತ್ರ ನಿಖಿಲ್ ಕುಮಾರ್ ನಾಮಪತ್ರ ಸಲ್ಲಿಕೆಗೂ ಮುನ್ನ ಮೈಸೂರಿನ ಚಾಮುಂಡೇಶ್ವರಿ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ ನಂತರ ಅವರು ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದರು.

      ಬೆಂಗಳೂರು ದಕ್ಷಿಣಕ್ಕೆ ಕಾಂಗ್ರೆಸ್ ಅಭ್ಯರ್ಥಿ ಬಿ.ಕೆ.ಹರಿಪ್ರಸಾದ್

      ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದ ಯಾವುದಾದರೂ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ವದಂತಿ ಕೆಲವು ದಿನಗಳಿಂದ ಹಬ್ಬಿತ್ತು. ನರೇಂದ್ರ ಮೋದಿ ಅವರು ಸ್ಪರ್ಧಿಸುತ್ತಾರೆ ಎಂಬ ಕಾರಣಕ್ಕೇ ಬಿಜೆಪಿ ಇನ್ನೂ ಬೆಂಗಳೂರು ದಕ್ಷಿಣ ಕ್ಷೇತ್ರಕ್ಕೆ ತನ್ನ ಅಭ್ಯರ್ಥಿಯ ಹೆಸರನ್ನು ಘೋಷಿಸಿಲ್ಲ ಎನ್ನಲಾಗಿತ್ತು.

      ಆದರೆ ಈ ಕುರಿತು ಬಿಜೆಪಿ ಯಾವುದೇ ಸ್ಪಷ್ಟೀಕರಣ ನೀಡಿಲ್ಲ.

      ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಪ್ರಧಾನಿ ನರೇಂದ್ರ ಮೋದಿ ಸ್ಪರ್ಧೆ?

      ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಎಚ್ ಡಿ ಕುಮಾರಸ್ವಾಮಿ, "ಮೋದಿಯವರು ಸ್ಪರ್ಧಿಸುವುದಾದರೆ ನಮ್ಮದೇನೂ ಅಭ್ಯಂತರವಿಲ್ಲ. ಸ್ವಾಗತಿಸುತ್ತೇವೆ. ಕರ್ನಾಟಕದಲ್ಲಿ ಸ್ಪರ್ಧಿಸಿದರಾದರೂ ಅವರಿಗೆ ಈ ರಾಜ್ಯದ ಕಷ್ಟ ಕಾರ್ಪಣ್ಯಗಳು ಅರ್ಥವಾಗಬಹುದು" ಎಂದರು.

      English summary
      If PM Narendra Modi wants to contest from Karnataka he can come here, said HD Kumaraswamy, chief minister of Karnataka to media in Mysuru.
      ತಾಜಾ ಸುದ್ದಿ ತಕ್ಷಣ ಪಡೆಯಿರಿ
      Enable
      x
      Notification Settings X
      Time Settings
      Done
      Clear Notification X
      Do you want to clear all the notifications from your inbox?
      Settings X