ಕೃಷ್ಣರಾಜ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀವತ್ಸ ಪರ ಎಸ್.ಎ.ರಾಮದಾಸ್ ಪ್ರಚಾರ
ಮೈಸೂರು, ಏಪ್ರಿಲ್, 23: ಟಿಕೆಟ್ ವಂಚಿತರಾದ ಶಾಸಕ ರಾಮದಾಸ್ ಅವರು ಮೇಯರ್ ಶಿವಕುಮಾರ್ ಮತ್ತು ಸ್ಥಳೀಯ ಕಾರ್ಯಕರ್ತರೊಂದಿಗೆ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀವತ್ಸ ಅವರ ಪರವಾಗಿ ಕುವೆಂಪುನಗರದಲ್ಲಿ ಮತ ಪ್ರಚಾರ ನಡೆಸಿದರು.
ವಾರ್ಡ್ ನಂಬರ್ 47ರ ಕುವೆಂಪುನಗರದ ಸುಮಸೋಪಾನ ಉದ್ಯಾನವನದಿಂದ ಪ್ರಚಾರ ಕೈಗೊಂಡಿದ್ದು, ಕ್ಷೇತ್ರದಲ್ಲಿ ಕಳೆದ 5 ವರ್ಷಗಳಿಂದ ಆಗಿರುವ ಅಭಿವೃದ್ಧಿ ಮತ್ತು ವಾರ್ಡ್‌ನ ಮಟ್ಟದಲ್ಲಿ ಆಗಿರುವ ಅಭಿವೃದ್ಧಿ ವಿಷಯವನ್ನು ತಿಳಿಸಿದರು. ಅಲ್ಲದೆ ಉದ್ಯಾನವನದಲ್ಲಿ ವಾಕಿಂಗ್ ಮಾಡುತ್ತಿರುವವರೊಂದಿಗೆ, ಸುತ್ತಮುತ್ತಲಿನ ಅಂಗಡಿಗಳು, ಹೋಟೆಲ್, ಬಸ್ ನಿಲ್ದಾಣ, ಆಟೋ ನಿಲ್ದಾಣ ಹಾಗೂ ಈ ಭಾಗದ ಮನೆಗಳಿಗೆ ತೆರಳಿ ಮತಯಾಚನೆ ಮಾಡಿದರು.

ಈ ಹಿಂದೆ ಸ್ಥಳೀಯ ನಿವಾಸಿಗಳು ಬೇಡಿಕೆ ಇಟ್ಟಿದ್ದ ಹಲವು ಕಾಮಗಾರಿಗಳಿಗೆ ಈಗಾಗಲೇ ಶಾಸಕರ ಅನುದಾನದ ಅಡಿಯಲ್ಲಿ ಅನುದಾನ ನೀಡಿದ್ದು, ಇದರ ಟೆಂಡರ್ ಪ್ರಕ್ರಿಯೆ ಮುಗಿದಿರುತ್ತದೆ. ಚುನಾವಣೆ ನೀತಿ ಸಂಹಿತೆ ಮುಗಿದ ಕೂಡಲೇ ಕಾಮಗಾರಿ ಪ್ರಾರಂಭಿಸುವುದಾಗಿ ತಿಳಿಸಿದರು. ದೇಶದ ನೆಚ್ಚಿನ ಪ್ರಧಾನಿ ಮೋದಿಯವರ ಕೈ ಬಲಪಡಿಸಲು ಮತ್ತು ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಹತ್ತರ ಯೋಜನೆಗಳನ್ನು ಮನಗಂಡು ಈ ಬಾರಿ ಬಿಜೆಪಿಗೆ ಮತ ನೀಡುವಂತೆ ನಿವಾಸಿಗಳಲ್ಲಿ ಮನವಿ ಮಾಡಿದರು.
ನಂತರ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ 47ನೇ ವಾರ್ಡ್‌ನ, ಕುವೆಂಪುನಗರ ಟಿ.ಕೆ.ಬಡಾವಣೆಯ 118ನೇ ಭೂತ ಅಧ್ಯಕ್ಷೆ ಶೋಭಾ ಅವರ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅವ್ಯವಸ್ಥೆ ವಿರುದ್ಧ ಹೋರಾಡಲು ಸಂಘರ್ಷದ ಹಾದಿ ತೋರಿಸಿಕೊಟ್ಟವರು ಭಕ್ತಿಭಂಡಾರಿ ಬಸವಣ್ಣ ಎಂದು ಶಾಸಕ ಎಸ್.ಎ.ರಾಮದಾಸ್ ತಿಳಿಸಿದರು.
ಧರ್ಮ-ಅಧರ್ಮದ ನಡುವೆ ಇಂದು ಕುರುಕ್ಷೇತ್ರ ನಡೆಯುತ್ತಿದೆ. ಧರ್ಮದ ಹಾದಿಯಲ್ಲಿ ಸಾಗುವುದು ಇಂದು ಬಹಳ ಕಷ್ಟವಾಗಿದೆ. ನೋವು-ನಲಿವು, ಕಷ್ಟಗಳನ್ನು ಸಹಿಸಿಕೊಂಡು ನಡೆಯಬೇಕಾದ ಅನಿವಾರ್ಯತೆ ಇಂದು ಎದುರಾಗಿದೆ. ಕಷ್ಟ ಎಂಬುದು ಬಸವಣ್ಣನವರನ್ನೇ ಬಿಡಲಿಲ್ಲ. ಅವರ ಮೇಲೆ ಇಲ್ಲಸಲ್ಲದ ಆರೋಪ ಹೊರಿಸಲಾಯಿತು. ಬಸವಣ್ಣನವರ ಬದುಕಿನ ಹಾದಿ ಕಲ್ಲು, ಮುಳ್ಳುಗಳನ್ನು ಸೃಷ್ಟಿಸಿತ್ತು ಎಂದು ಹೇಳಿದರು.
ಬಸವಣ್ಣನವರು ಬ್ರಾಹ್ಮಣ ಸಮಾಜದಿಂದ ಬಂದವರಾದರೂ ಸಮಾಜದ ಸುಧಾರಣೆಗಾಗಿ ಪರಿವರ್ತನೆಗೊಂಡ ಮಹಾನ್ ಸುಧಾರಕ ಹಾಗೂ ಚೇತನ ಎಂದು ಬಣ್ಣಿಸಿದರು.
ವರುಣದ ಮೇಲೆ ನನಗೆ ಅಪಾರ ಪ್ರೀತಿಯಿದೆ
ಇನ್ನು ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ವರುಣಾ ಕ್ಷೇತ್ರ ಹೈವೋಲ್ಟೇಜ್ ಕ್ಷೇತ್ರವಾಗಿದ್ದು, ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಸಚಿವ ವಿ. ಸೋಮಣ್ಣ ತೊಡೆತಟ್ಟಿದ್ದಾರೆ. ಕ್ಷೇತ್ರದಲ್ಲಿ ಎರಡೂ ಪಕ್ಷಗಳು ಭರ್ಜರಿ ಪ್ರಚಾರ ನಡೆಸುತ್ತಿದ್ದು, ಮತದಾರರನ್ನು ತಮ್ಮತ್ತ ಸೆಳೆಯಲು ಶತ ಪ್ರಯತ್ನ ನಡೆಸುತ್ತಿದ್ದಾರೆ.
ವರುಣ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ನಡುವೆ ಒಳ ಒಪ್ಪಂದ ಆಗಿದೆ ಎನ್ನುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಮಾತನಾಡಿದ್ದಾರೆ.
ವರಣಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಬಿ.ವೈ ವಿಜಯೇಂದ್ರ, ಯಡಿಯೂರಪ್ಪ ಅವರು ಸತತವಾಗಿ ಪ್ರತಿನಿಧಿಸುತ್ತಾ ಬಂದಿದ್ದ ಶಿಕಾರಿಪುರದಲ್ಲಿ ಪ್ರತಿನಿಧಿಸಬೇಕಾಗಿರುವುದರಿಂದ ವರುಣದಿಂದ ಸ್ಪರ್ಧಿಸಲಾಗಿಲ್ಲ. ವರುಣದಿಂದಲೇ ರಾಜ್ಯದ ಜನರು ನನ್ನನ್ನು ಗುರುತಿಸಿದರು. ಹೀಗಾಗಿ ವರುಣದ ಮೇಲೆ ನನಗೆ ಅಪಾರ ಪ್ರೀತಿಯಿದೆ ಎಂದು ನಾನು ಮತ್ತೊಮ್ಮೆ ವರುಣಕ್ಕೆ ಬಂದು ಸೋಮಣ್ಣನವರ ಪರ ಪ್ರಚಾರ ನಡೆಸುತ್ತೇನೆ.
ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ಟಿಕೆಟ್ ವಿಚಾರವಾಗಿ ಅಸಮಾಧಾನಗೊಂಡು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಯಾಗಿರುವ ಬಗ್ಗೆ ಮಾತನಾಡಿದ ಬಿ.ವೈ ವಿಜಯೇಂದ್ರ, ಕಾಂಗ್ರೆಸ್‌ಗೆ ಹೋಗಿದ್ದು ದೊಡ್ಡ ದುರಂತ. ವೀರಶೈವ ಲಿಂಗಾಯತ ಧರ್ಮವನ್ನು ಒಡೆಯಲು ಮುಂದಾದ ಕಾಂಗ್ರೆಸ್ ಪಕ್ಷ ಸೇರಿದ್ದು ಬೇಸರ ತರಿಸಿದೆ ಎಂದಿದ್ದಾರೆ.
ಜಗದೀಶ್ ಶೆಟ್ಟರ್ ಅವರು ಪಕ್ಷೇತರವಾಗಿ ಸ್ಪರ್ಧೆ ಮಾಡಬಹುದಿತ್ತು. ಲಿಂಗಾಯತ ಸಮುದಾಯದ ವೀರೇಂದ್ರ ಪಾಟೀಲ್ ಅವರನ್ನು ಕಾಂಗ್ರೆಸ್ ಕೆಟ್ಟದಾಗಿ ನಡೆಸಿಕೊಂಡಿತು. ಕಾಂಗ್ರೆಸ್ ಸೇರಿರುವ ಜಗದೀಶ್ ಶೆಟ್ಟರ್ ಸೋಲಲಿದ್ದು, ಅವರ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎನ್ನುವ ಭರವಸೆಯನ್ನು ಬಿ.ವೈ ವಿಜಯೇಂದ್ರ ವ್ಯಕ್ತಪಡಿಸಿದ್ದಾರೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications