ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರಿನಲ್ಲಿ ಅಮೃತ ಭಾರತಿಗೆ ಕನ್ನಡದಾರತಿ ಕಾರ್ಯಕ್ರಮ- ಶಿಲಾಫಲಕ ಉದ್ಘಾಟಿಸಿದ ರಾಮದಾಸ್

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಜೂ.25: ದೇಶದ 75ನೇ ಸ್ವಾತಂತ್ರೋತ್ಸವದ ಸಂದರ್ಭದಲ್ಲಿ ಮೈಸೂರು ಮತ್ತು ಕರ್ನಾಟಕದ ಪಾತ್ರ ಬಹಳ ದೊಡ್ಡದು ಎಂದು ಕೃಷ್ಣರಾಜ ಕ್ಷೇತ್ರದ ಶಾಸಕರಾದ ಎಸ್.ಎ.ರಾಮದಾಸ್ ಅವರು ತಿಳಿಸಿದರು. ಜಿಲ್ಲಾಡಳಿತ, ಮೈಸೂರು ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಾಶ್ರಯದಲ್ಲಿ 75 ನೇ ಸ್ವಾತಂತ್ರ್ಯ ಮಹೋತ್ಸವ ಅಂಗವಾಗಿ ರಾಮಸ್ವಾಮಿ ವೃತ್ತದಲ್ಲಿ ಅಮೃತ ಭಾರತಿಗೆ ಕನ್ನಡದಾರತಿ ಕಾರ್ಯಕ್ರಮ ಶಿಲಾಫಲಕದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.

ರಾಮಸ್ವಾಮಿ ಕೇವಲ 18 ವರ್ಷದವರಿದ್ದಾಗ ಮೊದಲನೇ ಡಿಗ್ರಿಯಲ್ಲಿ ಓದುತ್ತಿದ್ದಾಗ ಬ್ರಿಟಿಷರ ವಿರುದ್ಧವಾದ ಒಂದು ಹೋರಾಟದಲ್ಲಿ ಸ್ವದೇಶಿಯ ಆಂದೋಲನದ ಮೊದಲನೇ ಬಲಿ ಎಂದು ತಿಳಿಸಿದರು. ಮೈಸೂರಿನಲ್ಲಿ ಸ್ವಾತಂತ್ರಕ್ಕೋಸ್ಕರವಾಗಿ ಯಾರು ಯಾರು ಹೋರಾಟವನ್ನು ಮಾಡಿ ತನ್ನ ಪ್ರಾಣವನ್ನು. ತನ್ನ ಸರ್ವಸ್ವವನ್ನೂ, ಕಳೆದುಕೊಂಡು ದೇಶಕ್ಕೋಸ್ಕರವಾಗಿ ತ್ಯಾಗ ಮಾಡಿದವರು ನೆನಪಿಸಿಕೊಳ್ಳುವುದರ ಜೊತೆಗೆ ತಾಯಿ ಭಾರತಾಂಬೆಯ 75 ವರ್ಷಗಳಲ್ಲಿ ಕರ್ನಾಟಕದ ಪಾತ್ರ ಬಿಂಬಿಸುವಂತಹ ಸಾಹಿತ್ಯ, ಕಲೆ, ಸಂಸ್ಕೃತಿ, ಸ್ವಾತಂತ್ರ್ಯ ಇತಿಹಾಸ ಬಿಂಬಿಸುವಂತಹ ಎಲ್ಲಾ ಬಿತ್ತಿ ಚಿತ್ರಗಳು ಮತ್ತು ವಿಶೇಷವಾಗಿ ವೇಷಭೂಷಣಗಳು, ನೃತ್ಯ ಇವೆಲ್ಲದರ ಮೂಲಕವಾಗಿ ಆ ದಿನವನ್ನು ನೆನಪು ಮಾಡಿಕೊಂಡು ಮುಂದೆ ಬರುತ್ತಿರುವಂತಹ ಸ್ವಾತಂತ್ರ್ಯೋತ್ಸವವನ್ನು ನಾವು ವಿಜೃಂಭಣೆಯಿಂದ ಆಚರಿಸೋಣ ಎಂದು ತಿಳಿಸಿದರು.

ಪಕ್ಷಾಂತರಿಗಳಿಗೆ 10 ವರ್ಷ ಚುನಾವಣೆಗೆ ಸ್ಪರ್ಧಿಸದಂತೆ ನಿಷೇಧ ಹೇರಬೇಕು: ಸಿದ್ದರಾಮಯ್ಯಪಕ್ಷಾಂತರಿಗಳಿಗೆ 10 ವರ್ಷ ಚುನಾವಣೆಗೆ ಸ್ಪರ್ಧಿಸದಂತೆ ನಿಷೇಧ ಹೇರಬೇಕು: ಸಿದ್ದರಾಮಯ್ಯ

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮೈಸೂರು ಮಹಾನಗರ ಪಾಲಿಕೆಯ ಮಹಾಪೌರರಾದ ಸುನಂದಾ ಪಾಲನೇತ್ರ, ಅಪರ ಜಿಲ್ಲಾಧಿಕಾರಿ ಮಂಜುನಾಥ್ ಸ್ವಾಮಿ,ಹೆಚ್ಚುವರಿ ಆಯುಕ್ತರಾದ ರೂಪ. ಎಂ.ಜೆ ಹಾಗೂ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಸಾವರ್ಕರ್ -ತಿಲಕರು ಮೊದಲ ಸ್ವಾತಂತ್ರ್ಯ ಹೋರಾಟಗಾರರು

ಸಾವರ್ಕರ್ -ತಿಲಕರು ಮೊದಲ ಸ್ವಾತಂತ್ರ್ಯ ಹೋರಾಟಗಾರರು

ಸಾವರ್ಕರ್ -ತಿಲಕರು ಮೊದಲ ಸ್ವಾತಂತ್ರ್ಯ ಹೋರಾಟಗಾರರು. ಅವರಿಗೆ ಸ್ವಾತಂತ್ರ್ಯ ಪಡೆಯಬೇಕೆಂಬ ಮೊದಲ ಆಲೋಚನೆ ಇತ್ತು. ಇವರ ಆಲೋಚನೆಗೆ ಲಾಹೋರ್ ನಲ್ಲಿ ವೇಗ ಸಿಕ್ಕಿತು ಎಂದರು. ಲಾಹೋರ್ ಚಳವಳಿ ವೇಳೆ ಬ್ರಿಟಿಷರು ಲಾಠಿ ಪ್ರಹಾರ ನಡೆಸಿದರು. ಲಾಲಾ ಲಜಪತ್ ರಾಯ್ ನೇತೃತ್ವದಲ್ಲಿ ಚಳವಳಿ ನಡೆದಿತ್ತು. ಇದರ ನಂತರ ಸ್ವಾತಂತ್ರ್ಯದ ಕಿಚ್ಚು ಹೆಚ್ಚಿಸಿದರು. ಗಾಂಧಿ ನೇತೃತ್ವದಲ್ಲಿ ಅನೇಕರು ಸ್ವಾತಂತ್ರ್ಯ ಚಳವಳಿಗೆ ಧುಮುಕಿದರು. ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸುಲಭವಾಗಿ ಸಿಕ್ಕಿಲ್ಲ. ಬಾರ್ದೋಲಿಯಲ್ಲಿ ಪಟೇಲರು ಸತ್ಯಾಗ್ರಹದ ನೇತೃತ್ವ ವಹಿಸಿದರು. ಆಗ ನಮಗೆ ಉಳಿಗಾಲವಿಲ್ಲ ಎಂದು ಬ್ರಿಟಿಷರಿಗೆ ಮನವರಿಕೆಯಾಯಿತು. ಚಂಪಾರಣ್ಯದಲ್ಲೂ ದುಡಿಯುವ ವರ್ಗ ಬ್ರಿಟಿಷರ ವಿರುದ್ಧ ತಿರುಗಿಬಿತ್ತು. ಈ ಹೋರಾಟಗಳಲ್ಲಿ ಪಾಲ್ಗೊಂಡವರಿಗೆ ಸಲಾಂ ಎಂದರು.

ಮೊಘಲರು, ಬ್ರಿಟಿಷರಿಗೆ ನಮ್ಮ ಸ್ವಾಭಿಮಾನ ಬಿಟ್ಟು ಕೊಟ್ಟಿದ್ದೆವು. ಒಂದು ಸಾವಿರ ವರ್ಷಗಳ ಕಾಲ ನಮ್ಮ ಸ್ವಾಭಿಮಾನ ಬಿಟ್ಟುಕೊಟ್ಟಿದ್ದೆವು. ಸ್ವಾತಂತ್ರ್ಯ ಹೋರಾಟಕ್ಕೆ ಕನ್ನಡ ನಾಡಿನ ಕೊಡುಗೆ ದೊಡ್ಡದಿದೆ. ಸರ್ಕಾರ ಅನಾಮಧೇಯ ಹೋರಾಟಗಾರರ ಪುಸ್ತಕವನ್ನು ಆಗಸ್ಟ್ 15ರಂದು ಪ್ರಕಟಿಸುತ್ತೇವೆ ಎಂದರು.

ಹಾಡಿ ಮಕ್ಕಳೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡ ನಾದಬ್ರಹ್ಮ ಹಂಸಲೇಖಹಾಡಿ ಮಕ್ಕಳೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡ ನಾದಬ್ರಹ್ಮ ಹಂಸಲೇಖ

ಸಾವರ್ಕರ್ -ತಿಲಕರು ಮೊದಲ ಸ್ವಾತಂತ್ರ್ಯ ಹೋರಾಟಗಾರರು

ಸಾವರ್ಕರ್ -ತಿಲಕರು ಮೊದಲ ಸ್ವಾತಂತ್ರ್ಯ ಹೋರಾಟಗಾರರು

ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ಸ್ವಾತಂತ್ರ್ಯ ಉದ್ಯಾನವನದಲ್ಲಿ ಅಮೃತ ಭಾರತಿಗೆ-ಕನ್ನಡದಾರತಿ ಅಭಿಯಾನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಆಯೋಜಿಸಿದ್ದ ಅಭಿಯಾನದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಸಾವರ್ಕರ್ ಮತ್ತು ತಿಲಕರು ಮೊದಲ ಸ್ವಾತಂತ್ರ್ಯ ಹೋರಾಟಗಾರರು. ಅವರಿಗೆ ಸ್ವಾತಂತ್ರ್ಯ ಪಡೆಯಬೇಕೆಂಬ ಮೊದಲ ಆಲೋಚನೆ ಇತ್ತು. ಇವರ ಆಲೋಚನೆಗೆ ಲಾಹೋರ್ ನಲ್ಲಿ ವೇಗ ಸಿಕ್ಕಿತು ಎಂದರು.

ಆಗಸ್ಟ್ 9 ರಂದು ಜಿಲ್ಲೆಗಳಿಂದ ಹೊರಟ ರಥಯಾತ್ರೆ ನಗರವನ್ನು ತಲುಪಲಿದ್ದು ಆಗಸ್ಟ್ 9 ರಿಂದ 11 ರವರೆಗೆ ನಗರದಲ್ಲಿ ಮಹೋತ್ಸವದ ಸಮಾರೋಪ ಸಮಾರಂಭ ನಡೆಯಲಿದೆ. ರಾಜಧಾನಿಯಲ್ಲಿ ಭಾರೀ ಮೆರವಣಿಗೆ, ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗುವುದು. ಇದಕ್ಕಾಗಿ ಹಲವು ಸಮಿತಿಗಳನ್ನೂ ರಚಿಸಲಾಗಿದೆ. ಮೇಲ್ಮನೆ ಚುನಾವಣೆ ಹಿನ್ನೆಲೆಯಲ್ಲಿ ಶನಿವಾರ 45 ಕಡೆಗಳಲ್ಲಿ ಈ ಅಭಿಯಾನ ನಡೆದಿದ್ದು, ಚುನಾವಣೆ ಬಳಿಕ 30 ಕಡೆಗಳಲ್ಲಿ ನಡೆಯಲಿದೆ. ಜು.1ರಿಂದ 15ರವರೆಗೆ 'ಹೋರಾಟದ ನೆಲದಲ್ಲಿ ಒಂದು ದಿನ' ಎಂಬ ಪ್ರೇರಣಾದಾಯಿ ಕಾರ್ಯಕ್ರಮವನ್ನೂ ಆಯೋಜಿಸಲಾಗಿದೆ.

ಜಿಲ್ಲೆಗಳಲ್ಲೂ ಸಂಚರಿಸುತ್ತಿರುವ ರಥಯಾತ್ರೆ

ಜಿಲ್ಲೆಗಳಲ್ಲೂ ಸಂಚರಿಸುತ್ತಿರುವ ರಥಯಾತ್ರೆ

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿಇಂದಿನಿಂದ ರಾಜ್ಯದ 75 ಸ್ಥಳಗಳಲ್ಲಿ ಏಕಕಾಲಕ್ಕೆ 'ಅಮೃತ ಭಾರತಿಗೆ ಕನ್ನಡದಾರತಿ' ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಒಟ್ಟಾರೆ ರಾಜ್ಯದ 75 ಸ್ಥಳಗಳಲ್ಲಿ ಅಭಿಯಾನ ನಡೆಯಲಿದ್ದು ಈ ಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟಗಾರರನ್ನು ಸನ್ಮಾನಿಸಲಾಗುತ್ತದೆ.

ಜುಲೈ 1 ರಿಂದ 15 ರವರೆಗೆ 'ಹೋರಾಟದ ನೆಲದಲ್ಲಿ ಒಂದು ದಿನ' ಎಂಬ ಪ್ರೇರಣಾದಾಯಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಸ್ವಾತಂತ್ರ್ಯ ಹೋರಾಟ ನಡೆದ ನಾಡಿನ ಪ್ರಮುಖ 15 ಸ್ಥಳಗಳಲ್ಲಿ ನಾಟಕ, ಮೆರವಣಿಗೆ. ಸ್ಥಬ್ಧಚಿತ್ರ ಮತ್ತು ಸಾಕ್ಷ್ಯಚಿತ್ರಗಳ ಮೆರವಣಿಗೆ ಮಾಡಲಾಗುತ್ತದೆ. ಆಗಸ್ಟ್ 1ರಿಂದ 8 ರವರೆಗೆ ರಾಜ್ಯದ ನಾಲ್ಕು ಕಂದಾಯ ಜಿಲ್ಲೆಗಳಲ್ಲಿ ಅಮೃತ ಭಾರತಿಗೆ ಕನ್ನಡದಾರತಿ ರಥಯಾತ್ರೆ ನಡೆಸಲಾಗುವುದು. 31 ಜಿಲ್ಲೆಗಳಲ್ಲೂ ಸಂಚರಿಸುವ ರಥಯಾತ್ರೆ ಬೆಂಗಳೂರಿಗೆ ತಲುಪಲಿದೆ ಎಂದು ವಿವರಿಸಿದರು.

ಬೆಂಗಳೂರಲ್ಲಿನಡೆದ ಅಭಿಯಾನದಲ್ಲಿ 75 ಮೀಟರ್‌ ಉದ್ದದ ತ್ರಿವರ್ಣ ಧ್ವಜವನ್ನು ಪ್ರದರ್ಶಿಸಲಾಯಿತು. ತುಮಕೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ವೈ.ಎಸ್‌.ಪಾಟೀಲ್ ಸಂಕಲ್ಪ ವಿಧಿ ಬೋಧಿಸಿದರು. ಇದಕ್ಕೂ ಮುನ್ನ ಸ್ವಾತಂತ್ರ್ಯ ಚೌಕ, ಅಶೋಕ ರಸ್ತೆ ಮೂಲಕ ಜಾನಪದ ಕಲಾತಂಡಗಳೊಂದಿಗೆ ಭಾರತಾಂಬೆಯ ಪುತ್ಥಳಿಯನ್ನು ಬೆಳ್ಳಿ ರಥದಲ್ಲಿಟ್ಟು ವೇದಿಕೆಯವರೆಗೂ ಕರೆತರಲಾಯಿತು.

ರಾಜ್ಯದ ಅನೇಕ ಕಡೆ ಸಂಭ್ರಮ: ದೇಶಭಕ್ತಿಯನ್ನು ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮ

ರಾಜ್ಯದ ಅನೇಕ ಕಡೆ ಸಂಭ್ರಮ: ದೇಶಭಕ್ತಿಯನ್ನು ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮ

ಅಭಿಯಾನದ ವೆಚ್ಚ ಭರಿಸಲು ಪ್ರತಿ ಜಿಲ್ಲೆಗೆ 1.80 ಲಕ್ಷ ರುಪಾಯಿ ಅನುದಾನ ನೀಡಲಾಗಿದ್ದು ಜಿಲ್ಲಾಧಿಕಾರಿಗಳು ಮತ್ತು ಇಲಾಖೆಯ ಸಹಾಯಕ ನಿರ್ದೇಶಕರಿಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ. ಮೊದಲ ಹಂತದಲ್ಲಿ ಇಂದು 45 ಸ್ಥಳಗಳಲ್ಲಿ ಅಭಿಯಾನ ನಡೆಯಲಿದ್ದು, ಇದಕ್ಕಾಗಿ ರಾಜ್ಯದ 75 ಸ್ಥಳಗಳನ್ನು ಗುರುತಿಸಲಾಗಿದ್ದು ದೇಶಭಕ್ತಿಯನ್ನು ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮ, ಸಭಾ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ವಿವರಿಸಿದರು.

ಕರ್ನಾಟಕದ ಜಲಿಯನ್ ವಾಲಾಬಾಗ್ ಎಂದೇ ಖ್ಯಾತವಾದ ಚಿಕ್ಕಬಳ್ಳಾಪುರ ಜಿಲ್ಲೆಯ ವಿಧುರಾಶ್ವತ್ಥದಲ್ಲಿ ವಿಧಾನಸಭಾ ಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೇರಿ, ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಇತಿಹಾಸ ಪ್ರಸಿದ್ಧ ತಾಲೂಕಿನ ಬಿದನೂರು ಕೋಟೆ ಆವರಣದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ, ಚಿತ್ರದುರ್ಗದ ಐತಿಹಾಸಿಕ ಕೋಟೆಯ ಮುಂಭಾಗದಲ್ಲಿ ಶಾಸಕ ತಿಪ್ಪಾರೆಡ್ಡಿ ಅಭಿಯಾನವನ್ನು ಉದ್ಘಾಟಿಸಿದರು. ರಾಯಚೂರಲ್ಲಿ ಸಂಸದ ರಾಜಾ ಅಮರೇಶ್ವರ ನಾಯಕ, ದಾವಣಗೆರೆಯಲ್ಲಿ ಸಂಸದ ಸಿದ್ದೇಶ್ವರ, ಉಡುಪಿಯಲ್ಲಿ ಸಂಸದ ಪ್ರತಾಪಸಿಂಹ, ಮಂಗಳೂರಿನಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷರಾಗಿರುವ ಸಂಸದ ನಳಿನ್ ಕುಮಾರ್‌ ಕಟೀಲ್, ಮಡಿಕೇರಿಯಲ್ಲಿ ಶಾಸಕ ಅಪ್ಪಚ್ಚು ರಂಜನ್ ಚಾಲನೆ ನೀಡಿದರು. ತುಮಕೂರು, ರಾಮನಗರ, ಕಲಬುರಗಿ, ಬೀದರ್‌, ರಾಯಚೂರುಗಳಲ್ಲೂ ವೈವಿಧ್ಯಮಯ ಕಾರ್ಯಕ್ರಮಗಳು ನಡೆದವು.

English summary
Inaugarates amritha bharatige kannadadarati Program in mysuru. Krishnaraja constituency legislator SA Ramadas said The role of Mysuru and Karnataka is huge during the 75th Independence Day of the country,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X