ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರು ಲಾಕ್ ಡೌನ್ ಕುರಿತು ಸಿಎಂಗೆ ಸಾರಾ ಮಹೇಶ್ ಪತ್ರ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಜುಲೈ 15: ಮೈಸೂರು ಜಿಲ್ಲೆಯಲ್ಲಿ ಕೊರೊನಾ ವೈರಸ್ ಪ್ರಕರಣಗಳು ಹೆಚ್ಚುತ್ತಿವೆ. ನಿಯಂತ್ರಣಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದರೂ ಪ್ರಕರಣಗಳು ನಿಲ್ಲುತ್ತಿಲ್ಲ. ಹೀಗಾಗಿ ಮೈಸೂರು ಜಿಲ್ಲೆಯನ್ನೂ ಲಾಕ್ ಡೌನ್ ಮಾಡಬೇಕೆಂದು ಮಾಜಿ ಸಚಿವ ಸಾರಾ ಮಹೇಶ್ ಪತ್ರ ಬರೆದಿದ್ದಾರೆ.

ಕೋವಿಡ್-19 ವ್ಯಾಪಕವಾಗಿ ಹರಡುತ್ತಿರುವುದು ಆತಂಕಕಾರಿ ವಿಚಾರವಾಗಿದೆ. ಅದರಂತೆ ಮೈಸೂರು ಜಿಲ್ಲೆಯಲ್ಲಿ ಇಂದಿನವರೆಗೆ ಒಟ್ಟು 1091 ಪ್ರಕರಣಗಳು ವರದಿಯಾಗಿದ್ದು, 41 ಸಾವುಗಳಾಗಿವೆ. ಕಳೆದ ಒಂದು ವಾರದಲ್ಲಿ, ಅಂದರೆ ಜುಲೈ 8ರಿಂದ 14ರ ಅವಧಿಯಲ್ಲಿ ಒಟ್ಟು 563 ಪ್ರಕರಣಗಳು ವರದಿಯಾಗಿದ್ದು, 29ಕೋವಿಡ್-19 ಸಂಬಂಧಿತ ಸಾವುಗಳಾಗಿವೆ. ಹೀಗಾಗಿ ಮೈಸೂರು ಜಿಲ್ಲೆಯನ್ನು ಲಾಕ್ ಡೌನ್ ಮಾಡಬೇಕು ಎಂದು ಸಾರಾ ಮಹೇಶ್ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಹಾಗೂ ಕಂದಾಯ ಸಚಿವ ಆರ್. ಅಶೋಕ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

Sa Ra Mahesh Requested CM For Mysuru Lockdown

 ಕ್ವಾರಂಟೈನ್‌ನಲ್ಲಿ ಮಾಜಿ ಸಚಿವ ಸಾರಾ ಮಹೇಶ್ ಕ್ವಾರಂಟೈನ್‌ನಲ್ಲಿ ಮಾಜಿ ಸಚಿವ ಸಾರಾ ಮಹೇಶ್

ಕೊರೊನಾ ವೈರಸ್ ಸಮುದಾಯಕ್ಕೆ ಹರಡುತ್ತಿದೆ. ಗ್ರಾಮಾಂತರ ಪ್ರದೇಶಗಳಲ್ಲಿ ಹೆಚ್ಚಿನ ಪ್ರಕರಣ ದಾಖಲಾಗುತ್ತಿವೆ. ಈ ಅಂಕಿಅಂಶಗಳು ಕೋವಿಡ್-19 ಪ್ರಕರಣಗಳು ಜಿಲ್ಲೆಯಲ್ಲಿ ವ್ಯಾಪಕವಾಗಿ ಹರಡುತ್ತಿರುರುವುದರ ಸೂಚನೆಯಾಗಿದೆ.

ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಈಗಾಗಲೇ ಲಾಕ್ ಡೌನ್ ಘೋಷಣೆ ಮಾಡಲಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಸೋಂಕು ನಿಯಂತ್ರಣದ ದೃಷ್ಟಿಯಿಂದ, ಮೈಸೂರು ನಗರದಲ್ಲಿ ಹೆಚ್ಚು ಪ್ರಕರಣಗಳು ವರದಿಯಾಗುತ್ತಿರುವುದರಿಂದ ಲಾಕ್ ಡೌನ್ ಮಾಡಬೇಕೆಂದು ಪತ್ರದಲ್ಲಿ ಕೋರಿಕೊಂಡಿದ್ದಾರೆ.

English summary
Cases of coronavirus are rising in Mysuru. Therefore former minister sa ra Mahesh wrote a letter to cm asking Mysuru lock down
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X