ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಡ್ರಗ್ಸ್ ನಂತೆ ಬ್ಲೂ ಫಿಲಂ ನೋಡುವುದು ಒಂದು ವ್ಯಸನವೇ: ಸಾ.ರಾ ಮಹೇಶ್ ವ್ಯಂಗ್ಯ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಸೆಪ್ಟೆಂಬರ್ 11: ವಿಧಾನ ಸೌಧದಲ್ಲಿ ಬ್ಲೂ ಫಿಲಂ ನೋಡುವ ಅಡಿಕ್ಷನ್ (ವ್ಯಸನ) ಇರುವವರು ಈ ರಾಜ್ಯದ ಉಪ ಮುಖ್ಯಮಂತ್ರಿ ಆಗುತ್ತಿದ್ದಾರೆ ಎಂದಾಗ ರಾಜ್ಯದ ಜನರಿಗೆ ನಗು, ದುಃಖ ಎರಡೂ ಬಂದಿತ್ತು ಎಂದು ಡಿಸಿಎಂ ಲಕ್ಷ್ಮಣ ಸವದಿ ವಿರುದ್ಧ ಶಾಸಕ ಸಾ.ರಾ ಮಹೇಶ್‌ ವ್ಯಂಗ್ಯವಾಡಿದರು.

Recommended Video

Suresh Kumar ಹೇಳದೆ ಬಡ ವಿದ್ಯಾರ್ಥಿ ಗುಡಿಸಲಿಗೆ ಭೇಟಿ ನೀಡುತ್ತಾರೆ | Oneindia Kannada

ಈ ಸಂಬಂಧ ಟ್ವೀಟ್ ಮಾಡಿರುವ ಕೆ.ಆರ್ ನಗರ ಶಾಸಕ ಸಾ.ರಾ ಮಹೇಶ್‌, "ಡ್ರಗ್ಸ್ ದಂಧೆಕೋರರೇ ಸರ್ಕಾರ ಬೀಳಿಸಿದರು ಎಂಬ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರ ಆರೋಪ ಡಿಸಿಎಂ ಲಕ್ಷ್ಮಣ ಸವದಿ ಅವರಿಗೆ ನಗು ತರಿಸಿತ್ತಂತೆ. ಬ್ಲೂ ಫಿಲಂ ನೋಡುವ ಅಡಿಕ್ಷನ್(ವ್ಯಸನ) ಇರುವವರು ಈ ರಾಜ್ಯದ ಡಿಸಿಎಂ ಆಗುತ್ತಿದ್ದಾರೆ ಎಂದಾಗ ರಾಜ್ಯದ ಜನರಿಗೇ ನಗು, ದುಃಖ ಬಂದಿತ್ತು. ಅಸಲಿಗೆ ಎಲ್ಲವೂ ವ್ಯಸನವೇ ಡ್ರಗ್ಸ್ ಆದರೂ, ಬ್ಲೂ ಫಿಲಂ ಆದರೂ...ʼ ಎಂದು ಕುಟುಕಿದ್ದಾರೆ.

ಬಿ.ಸಿ ಪಾಟೀಲರೇ ನಿಜವಾದ ಊಸರವಳ್ಳಿ: ಸಾ.ರಾ ಮಹೇಶ್‌ ಟೀಕೆಬಿ.ಸಿ ಪಾಟೀಲರೇ ನಿಜವಾದ ಊಸರವಳ್ಳಿ: ಸಾ.ರಾ ಮಹೇಶ್‌ ಟೀಕೆ

"ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರವನ್ನು ಉರುಳಿಸಿದ್ದೇ ಡ್ರಗ್ಸ್ ದಂಧೆಕೋರರು ಎಂಬ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರ ಹೇಳಿಕೆ ನೋಡಿ ನಗು ಬಂತು. ಅವರ ಮಾತು, ಕುಣಿಯಲು ಬಾರದವರು ನೆಲ ಡೊಂಕು ಎನ್ನುವಂತಿದೆʼ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಟೀಕಿಸಿದ್ದರು.

Sa Ra Mahesh Slams DCM Lakshman Savadi Over His Statement On Drug Case

2012 ರಲ್ಲಿ ವಿಧಾನ ಸಭೆ ಅಧಿವೇಶನ ನಡೆಯುತ್ತಿರುವಾಗಲೇ ಬ್ಲೂ ಫಿಲಂ ನೋಡಿದ ಆರೋಪ ಡಿಸಿಎಂ ಲಕ್ಷ್ಮಣ್ ಸವದಿ ಅವರ ಮೇಲೆ ಕೇಳಿ ಬಂದಿತ್ತು. ಇದೇ ಕಾರಣಕ್ಕೆ ಅಂದು ಸವದಿ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆಯನ್ನೂ ನೀಡಿದ್ದರು.

English summary
Drug Mafia in Karnataka: MLA sa ra mahesh slams DCM Laxman Savadi over his comments on HD kumaraswamy statment on drug case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X