ರಾಮದಾಸ್ ಆರೋಗ್ಯದಲ್ಲಿ ಚೇತರಿಕೆ, ಸಂಜೆ ಡಿಸ್ಚಾರ್ಜ್

ಮೈಸೂರು, ಫೆ.14 : ಆತ್ಮಹತ್ಯೆಗೆ ಯತ್ನಿಸಿ ಮೈಸೂರಿನ ಅಪೋಲೊ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಸಚಿವ ಎಸ್.ಎ.ರಾಮದಾಸ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಶುಕ್ರವಾರ ಮಧ್ಯಾಹ್ನ ಅವರನ್ನು ವಾರ್ಡ್‌ಗೆ ಸ್ಥಳಾಂತರಿಸಲಾಗುವುದು ಎಂದು ವೈದ್ಯರು ಹೇಳಿದ್ದಾರೆ. ಶುಕ್ರವಾರ ಸಂಜೆ ಅವರನ್ನು ಡಿಸ್ಚಾರ್ಜ್ ಮಾಡುವಂತೆ ಕುಟುಂಬದವರು ವೈದ್ಯರಿಗೆ ಮನವಿ ಮಾಡದ್ದಾರೆ.

ಶುಕ್ರವಾರ ರಾಮದಾಸ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಮಧ್ಯಾಹ್ನ ಅವರನ್ನು ಐಸಿಯುನಿಂದ ವಾರ್ಡ್‌ಗೆ ಸ್ಥಳಾಂತರಿಸಲಾಗುವುದು ಎಂದು ಅಪೋಲೊ ಬಿಜಿಎಸ್ ಆಸ್ಪತ್ರೆಯ ಮುಖ್ಯಸ್ಥ ಡಾ.ಸೋಮನಾಥ್ ಅವರು ಹೇಳಿದ್ದಾರೆ. ರಾಮದಾಸ್ ಅವರ ಕುಟುಂಬದವರು ಸಂಜೆ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡುವಂತೆ ಮನವಿ ಮಾಡಿದ್ದಾರೆ ಎಂದು ತಿಳಿಸಿದ್ದಾರೆ. [ರಾಮದಾಸ್ ಆತ್ಮಹತ್ಯೆಗೆ ಯತ್ನ]

SA Ramdas

ಫೆ.11ರ ಮಂಗಳವಾರ ಪ್ರೇಮಕುಮಾರಿ ಎಂಬ ಮಹಿಳೆ ರಾಮದಾಸ್ ವಿರುದ್ಧ ಮಾಡಿದ್ದ ಆರೋಪದಿಂದ ಮನನೊಂದು, ಮಾಜಿ ಸಚಿವರು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ತಕ್ಷಣ ಅವರನ್ನು ಅಪೋಲೊ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎರಡು ದಿನಗಳಿಂದ ರಾಮದಾಸ್ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಶುಕ್ರವಾರ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ಹಿನ್ನಲೆಯಲ್ಲಿ ಅವರನ್ನು ವಾರ್ಡ್ ಗೆ ಸ್ಥಳಾಂತರಿಸುವುದಾಗಿ ವೈದ್ಯರು ಹೇಳಿದ್ದಾರೆ. [ಮಾಜಿ ಸಚಿವ ರಾಮದಾಸ್ ಪರಿಚಯ]

ಪ್ರೇಮ ಕುಮಾರಿ ಕಾರಿಗೆ ಮುತ್ತಿಗೆ : ಬಿಜಿಎಸ್ ಅಪೋಲೊ ಆಸ್ಪತ್ರೆಗೆ ರಾಮದಾಸ್ ಅವರನ್ನು ನೋಡಲು ಬಂದ ಪ್ರೇಮಕುಮಾರಿ ಮತ್ತು ಅವರ ಸಹೋದರರನ್ನು ಬಿಜೆಪಿ ಕಾರ್ಯಕರ್ತರು ತಡೆದು ವಾಪಸ್ ಕಳಿಸಿದ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ. ರಾಮದಾಸ್ ಅವರನ್ನು ಭೇಟಿ ಮಾಡಲು ಪ್ರೇಮಕುಮಾರಿ ಆಗಮಿಸಿದ್ದರು. ಇದನ್ನು ಗಮನಿಸಿದ ಬಿಜೆಪಿ ಕಾರ್ಯಕರ್ತರು ಅವರ ಕಾರಿಗೆ ಮುತ್ತಿಗೆ ಹಾಕಿ ಅವರನ್ನು ವಾಪಸ್ ಕಳುಹಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+