ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನಟ ದರ್ಶನ್ ಫಾರ್ಮ್ ಹೌಸ್‌ನಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಸೆಪ್ಟೆಂಬರ್ 17: ಸ್ಯಾಂಡಲ್ ವುಡ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮಾಲೀಕತ್ವದ ಫಾರಂ ಹೌಸ್‌ನಲ್ಲಿ ವ್ಯಕ್ತಿಯೊಬ್ಬ ಅಪ್ರಾಪ್ತೆಯ ಮೇಲೆ ಅತ್ಯಾಾಚಾರ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಟಿ. ನರಸೀಪುರ ರಸ್ತೆಯಲ್ಲಿರುವ ಫಾರಂ ಹೌಸ್‌ನಲ್ಲಿ ಕೆಲಸ‌ ಮಾಡಿಕೊಂಡಿದ್ದ ಶಿವಮೊಗ್ಗ ಮೂಲದ ಕುಟುಂಬವೊಂದರ ಅಪ್ರಾಪ್ತೆ ಮೇಲೆ ಸೆ.13ರಂದು ಸೋಮವಾರ ರಾತ್ರಿ ಅದೇ ತೋಟದಲ್ಲಿ ಕುದುರೆಗೆ ಲಾಳ ಹೊಡೆಯುವ ಕೆಲಸ ಮಾಡಿಕೊಂಡಿದ್ದ ವ್ಯಕ್ತಿ ಅತ್ಯಾಚಾರ ನಡೆಸಿದ್ದಾನೆ ಎಂಬುದು ಗೊತ್ತಾಗಿದೆ. ಈ ಸಂಬಂಧ ಮೈಸೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯಿದೆಯಡಿ ಪ್ರಕರಣ ದಾಖಲಾಗಿದೆ.

ಅತ್ಯಾಚಾರ ನಡೆದಿರುವ ಬಗ್ಗೆ ಯಾರಿಗೂ ಹೇಳದಂತೆ ಆರೋಪಿಯು ಯುವತಿಗೆ ಬೆದರಿಕೆ ಹಾಕಿದ್ದನು ಎಂದು ಗೊತ್ತಾಗಿದೆ. ಈ ಹಿನ್ನೆಲೆ ಸೆಪ್ಟೆಂಬರ್ 13ರಂದು ನಡೆದಿರುವ ಘಟನೆ ಕುರಿತು ನಾಲ್ಕು ದಿನಗಳ ನಂತರ ಗೊತ್ತಾಗಿದೆ. ಈ ವಿಷಯ ತಿಳಿಯುತ್ತಿದ್ದಂತೆ ಪೋಷಕರು ಆರೋಪಿಯ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.

 Sandalwood Challenging Star Darshan Farmhouse Worker Arrested in Rape Case

ಆರೋಪಿಯನ್ನು ಬಂಧಿಸಿದ ಮಹಿಳಾ ಠಾಣೆ ಪೊಲೀಸರು:

ನಟ ದರ್ಶನ್ ಮಾಲೀಕತ್ವದ ಫಾರ್ಮ್ ಹೌಸ್‌ನಲ್ಲಿ ಅಪ್ರಾಪ್ತೆ ಮೇಲೆ ನಡೆದಿರುವ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 16ರಂದು ಪ್ರಕರಣ ದಾಖಲಿಸಿಕೊಂಡ ಪೊಲೀಸರು ತಕ್ಷಣ ಕ್ರಮಕ್ಕೆ ಮುಂದಾಗಿದ್ದು, ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯನ್ನು ಬಂಧಿಸಿದ ಪೊಲೀಸರು ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

English summary
Sandalwood Challenging Star Darshan Farmhouse Worker Arrested in Rape Case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X