ಸರೋದ್ ವಾದಕ ಪಂಡಿತ್ ರಾಜೀವ್ ತಾರಾನಾಥ್ ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ

ಮೈಸೂರು, ಏಪ್ರಿಲ್ 30: ಪ್ರಖ್ಯಾತ ಸರೋದ್ ವಾದಕ ಪಂಡಿತ್ ರಾಜೀವ್ ತಾರಾನಾಥ್ ಅವರಿಗೆ ಸಂದಿರುವ 2019ನೇ ಸಾಲಿನ ಪದ್ಮಶ್ರೀ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

ಇದೇ 2019ರ ಮಾರ್ಚ್ 16 ರಂದು ನವದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿಯವರು ಎಲ್ಲಾ ಗಣ್ಯರಿಗೆ ಪದ್ಮ ಪ್ರಶಸ್ತಿಗಳನ್ನು ಪ್ರದಾನ ಮಾಡಿದ್ದರು. ಅಂದು ರಾಜೀವ್ ತಾರಾನಾಥ್ ಅವರು ಕಾರಣಾಂತರಗಳಿಂದ ಆ ಸಮಾರಂಭದಲ್ಲಿ ಭಾಗವಹಿಸಲು ಸಾಧ್ಯವಾಗದಿರುವ ಹಿನ್ನೆಲೆಯಲ್ಲಿ ಈ ಪ್ರಶಸ್ತಿಯನ್ನು ಶ್ರೀ ರಾಜೀವ್ ತಾರಾನಾಥ್ ಅವರ ಸ್ವಗೃಹದಲ್ಲೇ ಪ್ರದಾನ ಮಾಡಲಾಯಿತು.

ಅಪರ ಜಿಲ್ಲಾಧಿಕಾರಿಗಳಾದ ಜಿ. ಅನುರಾಧ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಜ್ಯೋತಿ, ಜಿಲ್ಲಾಧಿಕಾರಿಗಳ ಕಚೇರಿಯ ಶಿಷ್ಟಾಚಾರ ತಹಶೀಲ್ದಾರ್ ಎಸ್.ಎನ್.ನರಗುಂದ್ ಅವರು ಪ್ರಶಸ್ತಿ ಪ್ರದಾನ ನೆರವೇರಿಸಿ ಗೌರವ ಸಲ್ಲಿಸಿದರು.

Sarod playist Pandit Rajeev Taranath was awarded the Padma shri award

ಭಾರತ ಮತ್ತು ವಿದೇಶಗಳಲ್ಲೆಡೆಗಳಲ್ಲಿ ರಾಜೀವ್ ತಾರಾನಾಥರ ಸಂಗೀತ ಕಾರ್ಯಕ್ರಮಗಳು ಜರುಗುತ್ತಿವೆ. ಸುಮಾರು 8 ರಿಂದ 10 ದೇಶಗಳಲ್ಲಿ ಅವರ ಸಂಗೀತ ಕಾರ್ಯಕ್ರಮಗಳು ನಡೆದು ಅಪಾರ ಅಭಿಮಾನಿ ಬಳಗ ಅವರನ್ನು ಹಿಂಬಾಲಿಸಿದೆ. ಹಲವೊಂದು ಪ್ರಖ್ಯಾತ ಚಲನಚಿತ್ರಗಳಿಗೂ ಸಂಗೀತ ನೀಡಿರುವ ರಾಜೀವ್ ತಾರಾನಾಥರ ನಿರ್ದೇಶನದಲ್ಲಿ ಮೂಡಿಬಂದ ಪ್ರಮುಖ ಚಿತ್ರಗಳೆಂದರೆ ಕನ್ನಡದ ಸಂಸ್ಕಾರ, ಪಲ್ಲವಿ, ಅನುರೂಪ, ಶೃಂಗಾರ ಮಾಸ, ಪೇಪರ್ ಬೋಟ್, ಮಲಯಾಳಂನ ಕಾಂಚನ ಸೀತಾ ಮತ್ತು ಕಟವ್ ಮುಂತಾದವು ಇವರ ಹೆಸರಿನ ಸಾಧನೆ ಅಚ್ಚೊತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+