ಸ್ಮಾರಕ ಉದ್ಯಾನವನದ ಅವ್ಯವಸ್ಥೆ ಖಂಡಿಸಿ ಪ್ರತಿಭಟನೆ
ಮೈಸೂರು,ಜು.7: ನಗರದ ಸ್ವಾತಂತ್ರ್ಯ ಹೋರಾಟಗಾರರ ಸ್ಮಾರಕ ಉದ್ಯಾನವನದ ಅವ್ಯವಸ್ಥೆಯನ್ನು ಖಂಡಿಸಿ ನಾಗರಿಕರ ಸಹಯೋಗ ಸಮಿತಿ ಜು.10ರಂದು ಮಹಾನಗರ ಪಾಲಿಕೆಯ ಮುಂದೆ ಪ್ರತಿಭಟನೆ ನಡೆಸಲು ಮುಂದಾಗಿದೆ.
ಪಾಲಿಕೆ ಲಕ್ಷಾಂತರ ರೂಪಾಯಿ ಖರ್ಚು ಮಾಡುತ್ತಿದೆ ಎಂದು ಬಜೆಟ್‌ನಲ್ಲಿ ತೋರಿಸಿದ್ದರೂ ಸ್ಮಾರಕ ಉದ್ಯಾನವನದ ಹದಗೆಟ್ಟ ಸ್ಥಿತಿಯಲ್ಲಿದೆ. ಸಾಕಷ್ಟು ಬಾರಿ ಜನರು ಮನವಿ ಸಲ್ಲಿಸಿದರೂ ಪಾಲಿಕೆ ಕ್ರಮ ಕೈಗೊಳ್ಳದ ಹಿನ್ನಲೆಯಲ್ಲಿ ಸಮಿತಿಯ 50 ಜನ ಸದಸ್ಯರು ಚರ್ಚಿಸಿ ಪ್ರತಿಭಟನೆಯ ನಿರ್ಧಾರಕ್ಕೆ ಬಂದಿದ್ದಾರೆ.

ಸಮಿತಿಯ ಸಂಚಾಲಕ ಎಂ. ಶಶಿಧರ್ ಮಾತನಾಡಿ ಜನರಿಂದ ಸರ್ಕಾರ ಜನರ ಅಭಿವೃದ್ಧಿಗಾಗಿ ಜೆ-ನರ್ಮ್ ಸೇರಿದಂತೆ ನಾನಾ ಯೋಜನೆಗಳಿಗೆ ಕೋಟಿಗಟ್ಟಲೇ ಹಣವನ್ನು ಬಿಡುಗಡೆ ಮಾಡುತ್ತಿದೆ. ಆದರೆ ಈ ಹಣ ರಾಜಕಾರಣಿಗಳು, ಅಧಿಕಾರಿಗಳಳು, ಮತ್ತು ಗುತ್ತಿಗೆದಾರರ ಪಾಲಾಗುತ್ತಿದೆ ಎಂದು ಆರೋಪಿಸಿದರು.












Click it and Unblock the Notifications