ಪರೀಕ್ಷೆಗೂ ಮೊದಲೇ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ
ಮೈಸೂರು, ಫೆಬ್ರವರಿ 28: ಪರೀಕ್ಷೆಯ ಭಯದಲ್ಲಿದ್ದ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಂಜನಗೂಡು ತಾಲೂಕಿನ ಬಿಳಗಲಿ ಗ್ರಾಮದಲ್ಲಿ ನಡೆದಿದೆ.
ಮೃತಳನ್ನು ಬಿಳಗಲಿ ಗ್ರಾಮದ ನಾಗಯ್ಯ ಎಂಬುವವರ ಪುತ್ರಿ ಪ್ರಿಯಾಂಕಾ (18) ಎಂದು ಹೇಳಲಾಗಿದೆ. ಈಕೆ ತಿ.ನರಸೀಪುರದ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು.

ಮಾರ್ಚ್ ನಲ್ಲಿ ಪರೀಕ್ಷೆ ನಡೆಯಲಿದ್ದು ಸರಿಯಾಗಿ ಓದಿಲ್ಲವೆಂದು ಮನೆಯವರಲ್ಲಿ ಅಳಲು ತೋಡಿಕೊಂಡಿದ್ದಳು ಎನ್ನಲಾಗಿದೆ. ಪರೀಕ್ಷೆಯ ಭಯಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರಬೇಕೆಂದು ಶಂಕಿಸಲಾಗಿದೆ. ನಂಜನಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












Click it and Unblock the Notifications