ಮೈಸೂರಿನಲ್ಲಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಕೃಷ್ಣಮೂರ್ತಿ ನಿಧನ
ಮೈಸೂರು, ಆಗಸ್ಟ್ 24: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಡಾ.ಎಂ.ಜಿ. ಕೃಷ್ಣಮೂರ್ತಿ ಅವರು ಇಂದು ಮೈಸೂರಿನಲ್ಲಿ ವಿಧಿವಶರಾಗಿದ್ದಾರೆ.
ಮೈಸೂರಿನ ಬೃಂದಾವನ ಬಡಾವಣೆಯ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ. 1942ರ ಕ್ವಿಟ್ ಇಂಡಿಯಾ ಚಳವಳಿ ಹಾಗೂ 1947ರ ಮೈಸೂರು ಚಲೋ ಚಳವಳಿಗಳಲ್ಲಿ ಭಾಗಿಯಾಗಿದ್ದ ಕೃಷ್ಣಮೂರ್ತಿಯವರು ವಿದ್ಯಾರ್ಥಿ ದೆಸೆಯಿಂದಲೇ ಸ್ವಾತಂತ್ರ್ಯ ಹೋರಾಟದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದವರು.

ವೈದ್ಯ ತರಂಗಿಣಿ ಪತ್ರಿಕೆಯ ಸಂಪಾದಕರೂ ಆಗಿದ್ದ ಇವರು, ಎಂಟು ವರ್ಷಗಳಿಂದ ಮೈಸೂರು ಸ್ವಾತಂತ್ರ್ಯ ಹೋರಾಟಗಾರರ ಸಂಘದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರು.












Click it and Unblock the Notifications