ಹಿರಿಯ ಪತ್ರಕರ್ತ ನಿರಂಜನ್ ನಿಕ್ಕಂ ನಿಧನ
ಮೈಸೂರು, ಫೆಬ್ರವರಿ 17: ಮೈಸೂರಿನ ಹಿರಿಯ ಪತ್ರಕರ್ತ ಹಾಗೂ ಬರಹಗಾರ ನಿರಂಜನ್ ನಿಕ್ಕಂ (66) ಅವರು ಮಂಗಳವಾರ ರಾತ್ರಿ ನಿಧನರಾಗಿದ್ದಾರೆ.
ನಿರಂಜನ್ ನಿಕ್ಕಂ ಅವರು ಹೃದಯ ಸಂಬಂಧಿ ಸಮಸ್ಯೆಗಳಿಂದ ಬಳಲುತ್ತಿದ್ದರು ಎನ್ನಲಾಗಿದ್ದು, ಅವರನ್ನು ಮಂಗಳವಾರ ರಾತ್ರಿ ಮೈಸೂರು ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿ ಆಗದೆ ಹೃದಯಾಘಾತದಿಂದ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ನಿರಂಜನ್ ನಿಕ್ಕಂ ಅವರು ಡೆಕ್ಕನ್ ಹೆರಾಲ್ಡ್ ಪತ್ರಿಕೆಯ ಮೈಸೂರು ಬ್ಯೂರೋ ಮುಖ್ಯಸ್ಥರಾಗಿ ನಿವೃತ್ತರಾಗಿದ್ದರು. ಇವರಿಗೆ ಪತ್ನಿ, ಒಬ್ಬ ಪುತ್ರ, ಪುತ್ರಿ ಇದ್ದಾರೆ. ಮೃತರ ಶವವನ್ನು ಮೈಸೂರಿನ ವಿಜಯನಗರದ 3ನೇ ಹಂತದ ಇವರ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ಇರಿಸಲಾಗಿದೆ.

ಬುಧವಾರ ಸಂಜೆ 4 ಗಂಟೆಗೆ ಚಾಮುಂಡಿಬೆಟ್ಟದ ತಪ್ಪಲಿನ ವಿದ್ಯುತ್ ಚಿತಾಗಾರದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬ ತಿಳಿಸಿದೆ.












Click it and Unblock the Notifications