ಗಾನಕೋಗಿಲೆ ಎಸ್‌ ಜಾನಕಿ ಮೈಸೂರಿನ ಆಸ್ಪತ್ರೆಗೆ ದಾಖಲು

Recommended Video

      ಮೈಸೂರಿನ ಆಸ್ಪತ್ರೆಗೆ ದಾಖಲಾದ ಎಸ್.ಜಾನಕಿ

      ಮೈಸೂರು, ಮೇ 4: ಹಿರಿಯ ಗಾಯಕಿ, ಗಾನಕೋಗಿಲೆ ಎಂದೇ ಖ್ಯಾತರಾಗಿರುವ ಎಸ್‌, ಜಾನಕಿ ಅವರು ಅನಾರೋಗ್ಯದಿಂದ ಮೈಸೂರು ಆಸ್ಪತ್ರೆಗೆ ದಾಖಲಾಗಿದ್ದಾರೆ.

      ಸಂಬಂಧಿಕರ ಮನೆಗೆ ತೆರಳಿದ್ದಾಗ ಬಿದ್ದು ಸೊಂಟಕ್ಕೆ ಏಟಾಗಿದೆ.ಫ್ರ್ಯಾಕ್ಚರ್ ಆಗಿರುವ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

      ಗಾನಕೋಗಿಲೆ ಎಸ್.ಜಾನಕಿ ಅವರಿಗೆ ಸೊಂಟ ಮುರಿದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಎಸ್ ಜಾನಕಿ ಅವರಿಗೆ ಈಗ ಸುಮಾರು 81 ವರ್ಷ ವಯಸ್ಸಾಗಿದ್ದು, ಸುಮಾರು 17 ಭಾಷೆಗಳಲ್ಲಿ 48 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ.

      Senior singer S Janaki hospitalised in Mysuru

      ಜೊತೆಗೆ ನಾಲ್ಕು ಬಾರಿ ತಮ್ಮ ಹಾಡಿಗೆ ರಾಷ್ಟ್ರ ಪ್ರಶಸ್ತಿ ಪಡೆದಿದ್ದಾರೆ. ಇವರು 1952ರಲ್ಲಿ ಅಂದಿನ ಪ್ರಖ್ಯಾತ ಸಂಗೀತ ನಿರ್ದೇಶಕ ಜಿ.ಕೆ. ವೆಂಕಟೇಶ್ ಅವರಿಂದ ಆಯೋಜಿಸಲ್ಪಟ್ಟಿದ್ದ ಸಂಗೀತ ಸಂಜೆಯಲ್ಲಿ ಪಿ.ಬಿ. ಶ್ರೀನಿವಾಸ್ ಜೊತೆಗೆ ಹಾಡಿದ್ದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+