• search
  • Live TV
ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕುಕ್ಕರಹಳ್ಳಿಯಲ್ಲಿ ಪೆಲಿಕಾನ್ ಸರಣಿ ಸಾವು; ಇದರ ಹಿಂದಿನ ಕಾರಣವಾದರೂ ಏನು?

By ಮೈಸೂರು ಪ್ರತಿನಿಧಿ
|

ಮೈಸೂರು, ನವೆಂಬರ್ 13: ಕುಕ್ಕರಹಳ್ಳಿ ಕೆರೆಯಲ್ಲಿ ಪೆಲಿಕಾನ್ ಹಕ್ಕಿಗಳು ಸಾವನ್ನಪ್ಪುವುದು ನಿಲ್ಲುವಂತೆ ತೋರುತ್ತಿಲ್ಲ. ಈಚೆಗಷ್ಟೇ ಕೆರೆಯ ಸಮೀಪ ಒಂದು ಪೆಲಿಕಾನ್ ಸಾವನ್ನಪ್ಪಿತ್ತು. ನಿನ್ನೆ ಸಂಜೆ ಮತ್ತೊಂದು ಪೆಲಿಕಾನ್ ಸಾವನ್ನಪ್ಪಿರುವುದು ಪಕ್ಷಿಪ್ರಿಯರಲ್ಲಿ ಆತಂಕ ಮೂಡಿಸಿದೆ. ತಿಂಗಳ ಅಂತರದಲ್ಲಿ ಒಟ್ಟು ನಾಲ್ಕು ಪೆಲಿಕಾನ್ ಗಳು ಜೀವ ಕಳೆದುಕೊಂಡಿವೆ.

ನಿನ್ನೆ ಸಂಜೆ ಕುಕ್ಕರಹಳ್ಳಿ ಕೆರೆಯಲ್ಲಿ ಸ್ಪಾಟ್ ಬಿಲ್ಡ್ ಪೆಲಿಕಾನ್ ಪಕ್ಷಿಯ ಮೃತದೇಹ ತೇಲುತ್ತಿರುವುದು ವಾಯು ವಿಹಾರಿಗಳ ಗಮನಕ್ಕೆ ಬಂದಿದೆ. ಕೂಡಲೇ ಈ ವಿಚಾರವನ್ನು ಅರಣ್ಯಾಧಿಕಾರಿಗಳಿಗೆ ತಿಳಿಸಿದ್ದಾರೆ.

 ತಿಂಗಳ ಅಂತರದಲ್ಲಿ ನಾಲ್ಕು ಪಕ್ಷಿಗಳ ಸಾವು

ತಿಂಗಳ ಅಂತರದಲ್ಲಿ ನಾಲ್ಕು ಪಕ್ಷಿಗಳ ಸಾವು

ಕಳೆದ ಒಂದು ತಿಂಗಳಿನಲ್ಲಿ ಮೃತಪಟ್ಟ ನಾಲ್ಕನೇ ಪೆಲಿಕಾನ್ ಪಕ್ಷಿ ಇದಾಗಿದೆ. ಆದರೆ ಇನ್ನೂ ಈ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ನಿನ್ನೆ ಮತ್ತೆ ಒಂದು ಪೆಲಿಕಾನ್ ಸಾವನ್ನಪ್ಪಿದ್ದು, ಸ್ಥಳಕ್ಕೆ ಬಂದ ಅಧಿಕಾರಿಗಳು ಮೃತ ಪಕ್ಷಿಯ ಕಳೆಬರವನ್ನು ಬೆಂಗಳೂರಿನ ಅನಿಮಲ್ ಹೆಲ್ತ್ ಅಂಡ್ ವೆಟರ್ನರಿ ಬಯೋಲಾಜಿಕಲ್ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ. ಒಂದೆರಡು ದಿನಗಳಲ್ಲಿ ವರದಿ ಬರುವ ನಿರೀಕ್ಷೆ ಇದ್ದು, ಈ ಪಕ್ಷಿಗಳ ಸಾವಿಗೆ ನಿಖರ ಕಾರಣ ತಿಳಿಯಲಿದೆ ಎಂದು ಡಿಸಿಎಫ್ ಪ್ರಶಾಂತ್ ಕುಮಾರ್ ತಿಳಿಸಿದ್ದಾರೆ.

ಕೊಕ್ಕರೆ ಬೆಳ್ಳೂರಿನಲ್ಲಿ ಮತ್ತೆ ಪೆಲಿಕಾನ್ ಸಾವು; ಜಂತುಹುಳು ಕಾರಣ?

 ಕಾಡಿದೆ ಹಕ್ಕಿ ಜ್ವರದ ಆತಂಕ

ಕಾಡಿದೆ ಹಕ್ಕಿ ಜ್ವರದ ಆತಂಕ

ಕುಕ್ಕರಹಳ್ಳಿ ಕೆರೆಯಲ್ಲಿ ಅಕ್ಟೋಬರ್ 30ರಂದು ಒಂದು ಪೆಲಿಕಾನ್ ಸಾವನ್ನಪ್ಪಿತ್ತು. ಅದಕ್ಕೂ ಮುನ್ನ ಎರಡು ಪೆಲಿಕಾನ್ ಪಕ್ಷಿಗಳು ಸಾವನ್ನಪ್ಪಿದ್ದವು. ಇವುಗಳ ಸಾವಿಗೆ ಸಂಬಂಧಿಸಿದಂತೆ ಪ್ರಾಥಮಿಕ ವರದಿ ದೊರೆತಿದ್ದು, ಪೆಲಿಕಾನ್ ಹಕ್ಕಿಗಳ ಸಾವಿಗೆ ಹಕ್ಕಿ ಜ್ವರ ಕಾರಣವಲ್ಲ, ಯಾವುದೇ ಭಯ ಪಡುವ ಅಗತ್ಯವಿಲ್ಲ ಎಂದು ಡಿಸಿಎಫ್ ಪ್ರಶಾಂತ್ ಕುಮಾರ್‌ ಸ್ಪಷ್ಟಪಡಿಸಿದ್ದರು. ಆದರೆ ಮೇಲಿಂದ ಮೇಲೆ ಪೆಲಿಕಾನ್ ಪಕ್ಷಿಗಳು ಸಾವಿಗೀಡಾಗುತ್ತಿರುವುದಕ್ಕೆ ಹಕ್ಕಿ ಜ್ವರದ ಕಾರಣವಿರಬಹುದು ಎಂಬ ಆತಂಕ ಜನರಲ್ಲಿ ವ್ಯಕ್ತವಾಗಿತ್ತು. ಈಗ ಆ ಆತಂಕ ಇನ್ನೂ ಹೆಚ್ಚಾಗಿದೆ.

 ಕೊಕ್ಕರೆ ಬೆಳ್ಳೂರಿನಲ್ಲೂ ಸಾವನ್ನಪ್ಪಿದ ಪೆಲಿಕಾನ್

ಕೊಕ್ಕರೆ ಬೆಳ್ಳೂರಿನಲ್ಲೂ ಸಾವನ್ನಪ್ಪಿದ ಪೆಲಿಕಾನ್

ಪಕ್ಷಿಗಳ ಆಶ್ರಯ ತಾಣವಾಗಿರುವ ಕೊಕ್ಕರೆ ಬೆಳ್ಳೂರಿನಲ್ಲಿ ನವೆಂಬರ್ 7ರಂದು ಪೆಲಿಕಾನ್ ಒಂದು ಸಾವನ್ನಪ್ಪಿತ್ತು. ಅದರ ನಂತರ ಮತ್ತೊಂದು ಪೆಲಿಕಾನ್ ಕೂಡ ಅಸ್ವಸ್ಥಗೊಂಡಿತ್ತು. ಹೀಗೆ ಸರಣಿಯಾಗಿ ಅಸ್ವಸ್ಥಗೊಂಡು ಪೆಲಿಕಾನ್ ಗಳು ಸಾವನ್ನಪ್ಪುತ್ತಿರುವುದು ಆತಂಕಕ್ಕೂ ಎಡೆಮಾಡಿಕೊಟ್ಟಿತ್ತು. ಆದರೆ ಇದು ಹಕ್ಕಿಜ್ವರವಲ್ಲ, ಜಂತುಹುಳ ಸಮಸ್ಯೆ ಎಂದು ಅಧಿಕಾರಿಗಳು ತಿಳಿಸಿದ್ದರು.

ಕುಕ್ಕರಹಳ್ಳಿಯಲ್ಲಿ ಪೆಲಿಕಾನ್ ಸಾವು; ಹಕ್ಕಿಜ್ವರ ಕಾರಣವಲ್ಲ

 ಮರುಕಳಿಸೀತೇ ಕಳೆದ ವರ್ಷದ ಘಟನೆ?

ಮರುಕಳಿಸೀತೇ ಕಳೆದ ವರ್ಷದ ಘಟನೆ?

ಕಳೆದ ವರ್ಷವೂ ಕೊಕ್ಕರೆ ಬೆಳ್ಳೂರಿನಲ್ಲಿ ಇದೇ ರೀತಿಯ ಪರಿಸ್ಥಿತಿ ತಲೆದೋರಿ ಜಂತುಹುಳು ಸಮಸ್ಯೆಯಿಂದ ಸುಮಾರು 45ಕ್ಕೂ ಹೆಚ್ಚು ಪಕ್ಷಿಗಳು ಸಾವನಪ್ಪಿದ್ದವು. ಈ ಪಕ್ಷಿಗಳ ಸಾವನ್ನು ನೋಡಿದ ಗ್ರಾಮಸ್ಥರು ಹಕ್ಕಿ ಜ್ವರದ ಆತಂಕ ವ್ಯಕ್ತಪಡಿಸಿ ಕ್ರಮ ವಹಿಸಲು ಪ್ರತಿಭಟನೆ ನಡೆಸಿದ್ದರು. ಇದರಿಂದ ಎಚ್ಚೆತ್ತ ಅರಣ್ಯ ಇಲಾಖೆ ರಾಸಾಯನಿಕ ಸಿಂಪಡಿಸಿತು. ಮೃತ ಪೆಲಿಕಾನ್ ‌ಗಳ ದೇಹವನ್ನು ಪ್ರಯೋಗಾಲಯಕ್ಕೂ ಕಳುಹಿಸಿತ್ತು. ಸ್ಥಳಕ್ಕೆ ತಜ್ಞರು ಬಂದು ಪರಿಶೀಲನೆ ನಡೆಸಿ, ಪೆಲಿಕಾನ್ ‌ಗಳು ಹಕ್ಕಿ ಜ್ವರದಿಂದ ಮೃತಪಟ್ಟಿಲ್ಲ, ಜಂತುಹುಳುಗಳಿಂದ ಮೃತಪಟ್ಟಿವೆ ಎಂಬ ಮಾಹಿತಿ ನೀಡಿದ್ದರು. ಜತೆಗೆ ಪೆಲಿಕಾನ್ ತಿಂದು ಉಗುಳಿದ ಮೀನನ್ನು ಪರೀಕ್ಷೆ ಮಾಡಿದಾಗ ಅದರಲ್ಲಿ ಜಂತುಹುಳುಗಳು ಕಂಡು ಬಂದಿದ್ದವು.

ಇದೀಗ ಮತ್ತೆ ಕೆರೆಯಂಗಳಗಳಲ್ಲಿ ಪೆಲಿಕಾನ್ ಪಕ್ಷಿಗಳ ಸರಣಿ ಸಾವು ಸಂಭವಿಸುತ್ತಿರುವುದು ಆತಂಕ ಆವರಿಸುವಂತೆ ಮಾಡಿದೆ.

English summary
Pelican birds dying in Kukkarahalli Lake do not seem to stop. The death of another pelican yesterday evening has bring anxiety in bird lovers. A total of four pelicans have died in duration of one month
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more
X