ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರಿನಲ್ಲಿ ನಾಳೆಯಿಂದ ಒಂದಾದ ಮೇಲೆ ಒಂದರಂತೆ ಚುನಾವಣಾ ಪ್ರಚಾರ

|
Google Oneindia Kannada News

ಮೈಸೂರು, ಏಪ್ರಿಲ್ 8:ಚುನಾವಣೆ ಘೋಷಣೆಯಾಗಿ ಹಲವು ದಿನಗಳು ಕಳೆದರೂ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಪ್ರಚಾರ ರಂಗೇರಿಲ್ಲ. ಆದರೆ, ನಾಳೆಯಿಂದ ನಗರದಲ್ಲಿ ಸಮಾವೇಶ, ಪ್ರಚಾರ ಕಾರ್ಯಕ್ರಮಗಳು ನಡೆಯಲಿದ್ದು, ಚುನಾವಣೆಯ ಕಾವು ಹೆಚ್ಚಲಿದೆ.

ಏ.9ರಂದು ಪ್ರಧಾನಿ ನರೇಂದ್ರ ಮೋದಿ ಅವರ ಸಮಾವೇಶ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದೆ. ಮೈಸೂರು-ಕೊಡಗು ಅಲ್ಲದೆ, ಚಾಮರಾಜನಗರ ಹಾಗೂ ಸುತ್ತಮುತ್ತಲಿನ ಕ್ಷೇತ್ರಗಳಲ್ಲಿ ಪಕ್ಷದ ಕಾರ್ಯಕರ್ತರಲ್ಲಿ ಹುರುಪು ತುಂಬುವ ಉದ್ದೇಶದೊಂದಿಗೆ ಬಿಜೆಪಿ ಈ ಸಮಾವೇಶ ಆಯೋಜಿಸಿದೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಚುನಾವಣೆ ಘೋಷಣೆಯಾದ ಬಳಿಕ ಪ್ರಚಾರಕ್ಕಾಗಿ ಮೈಸೂರಿಗೆ ರಾಷ್ಟ್ರಮಟ್ಟದ ಯಾವುದೇ ನಾಯಕರೂ ಬಂದಿಲ್ಲ. ಆದ್ದರಿಂದ ಪ್ರಧಾನಿ ಅವರ ಸಮಾವೇಶ ಆಯೋಜಿಸಿ ಬಲ ಪ್ರದರ್ಶಿಸಲು ಬಿಜೆಪಿಯ ಸ್ಥಳೀಯ ಮುಖಂಡರು ಸಿದ್ಧತೆ ನಡೆಸಿದ್ದಾರೆ.

ಕರ್ನಾಟಕದ ಲೋಕಸಭಾ ಸದಸ್ಯರಲ್ಲಿ ಯಾರು ಎಷ್ಟು ಓದಿದ್ದಾರೆ?

ಬಿಜೆಪಿ ಸಮಾವೇಶದ ಮರುದಿನ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಮತ್ತು ಜೆಡಿಎಸ್ ವರಿಷ್ಠ ಎಚ್‌.ಡಿ.ದೇವೇಗೌಡ ಅವರು ಮೈತ್ರಿ ಅಭ್ಯರ್ಥಿ ಸಿ.ಎಚ್‌.ವಿಜಯಶಂಕರ್‌ ಪರ ಪ್ರಚಾರ ನಡೆಸಲಿದ್ದಾರೆ.

 ಏಪ್ರಿಲ್ 13 ರ ಮೋದಿ ಕಾರ್ಯಕ್ರಮಕ್ಕೆ ಮಂಗಳೂರಿನಲ್ಲಿ ಚಪ್ಪರ ಮುಹೂರ್ತ ಏಪ್ರಿಲ್ 13 ರ ಮೋದಿ ಕಾರ್ಯಕ್ರಮಕ್ಕೆ ಮಂಗಳೂರಿನಲ್ಲಿ ಚಪ್ಪರ ಮುಹೂರ್ತ

ಕ್ಷೇತ್ರದಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್ ನ ಪ್ರಮುಖ ನಾಯಕರು ಇನ್ನೂ ಜಂಟಿಯಾಗಿ ಪ್ರಚಾರ ನಡೆಸಿಲ್ಲ. ಕಾರ್ಯಕರ್ತರ ನಡುವೆ ಸಮನ್ವಯತೆ ಕಂಡುಬಂದಿಲ್ಲ. ಆದ್ದರಿಂದ ಸಿದ್ದರಾಮಯ್ಯ ಮತ್ತು ಎಚ್‌.ಡಿ.ದೇವೇಗೌಡ ಅವರು ಪ್ರಚಾರ ನಡೆಸಿದರೆ ಎರಡೂ ಪಕ್ಷಗಳ ಕಾರ್ಯಕರ್ತರನ್ನು ಒಗ್ಗೂಡಿಸಬಹುದು ಎಂಬ ಲೆಕ್ಕಾಚಾರವನ್ನು ಕಾಂಗ್ರೆಸ್‌ ಹೊಂದಿದೆ. ಮುಂದೆ ಓದಿ...

 ಏ.10 ರಂದು ಮಾಯಾವತಿ ಪ್ರಚಾರ

ಏ.10 ರಂದು ಮಾಯಾವತಿ ಪ್ರಚಾರ

ಏ. 10 ರಂದು ಬಿಎಸ್ ಪಿ ನಾಯಕಿ ಮಾಯಾವತಿ ಅವರು ನಗರದಲ್ಲಿ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಚಾಮರಾಜನಗರ ಮತ್ತು ಮೈಸೂರಿನಲ್ಲಿ ಕಣದಲ್ಲಿರುವ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಅವರು ಪ್ರಚಾರ ನಡೆಸಲಿದ್ದಾರೆ.

 ಕಾಂಗ್ರೆಸ್ ಇರುವುದು ಗಾಂಧಿ ಕುಟುಂಬಕ್ಕಾಗಿಯೇ ಹೊರತು ದೇಶಕ್ಕಾಗಿ ಅಲ್ಲ: ಶಾ ಕಾಂಗ್ರೆಸ್ ಇರುವುದು ಗಾಂಧಿ ಕುಟುಂಬಕ್ಕಾಗಿಯೇ ಹೊರತು ದೇಶಕ್ಕಾಗಿ ಅಲ್ಲ: ಶಾ

 ಹಲವು ದಿನಗಳು ಕಳೆದರೂ ಅಬ್ಬರವಿಲ್ಲ

ಹಲವು ದಿನಗಳು ಕಳೆದರೂ ಅಬ್ಬರವಿಲ್ಲ

ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆಯಲ್ಲಿ ಮೈಸೂರು ಜಿಲ್ಲೆಯ ಎಲ್ಲಾ ಕ್ಷೇತ್ರಗಳಲ್ಲೂ ಅಬ್ಬರದ ಪ್ರಚಾರ ನಡೆದಿತ್ತು. ಚಾಮುಂಡೇಶ್ವರಿ ಕ್ಷೇತ್ರವಂತೂ ಇಡೀ ರಾಜ್ಯದ ಗಮನ ಸೆಳೆದಿತ್ತು. ಸಿದ್ದರಾಮಯ್ಯ ಮತ್ತು ಜಿ.ಟಿ.ದೇವೇಗೌಡ ನಡುವಿನ ಸ್ಪರ್ಧೆ ರಾಷ್ಟ್ರಮಟ್ಟದಲ್ಲೂ ಸುದ್ದಿಯಾಗಿತ್ತು. ಎರಡೂ ಪಕ್ಷಗಳ ಪ್ರಮುಖ ಮುಖಂಡರು ಮೈಸೂರಿನಲ್ಲಿ ಆಗಿಂದಾಗ್ಗೆ ಪ್ರಚಾರ ನಡೆಸಿದ್ದರು. ಆದರೆ, ಲೋಕಸಭೆ ಚುನಾವಣೆ ಘೋಷಣೆಯಾಗಿ ಹಲವು ದಿನಗಳು ಕಳೆದರೂ ಅಬ್ಬರ ಕಾಣಿಸಿಕೊಂಡಿಲ್ಲ. ತಾಲೂಕು ಕೇಂದ್ರಗಳು ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಪ್ರಚಾರ ತಕ್ಕ ಮಟ್ಟಿಗೆ ಚುರುಕು ಪಡೆದುಕೊಂಡಿದೆ. ಮೈಸೂರು ನಗರದ ಜನರಲ್ಲಿ ಇನ್ನೂ ಚುನಾವಣೆಯ 'ಜ್ವರ' ಕಾಣಿಸಿಕೊಂಡಿಲ್ಲ.

ಯಾರು ಕುಬೇರರು, ಯಾರು ಕುಚೇಲರು? ಆಸ್ತಿಪಾಸ್ತಿ ವಿವರ ಬೇಕೆ?

 ಕೆ.ಆರ್.ನಗರಕ್ಕೆ ರಾಹುಲ್ ಗಾಂಧಿ ಆಗಮನ

ಕೆ.ಆರ್.ನಗರಕ್ಕೆ ರಾಹುಲ್ ಗಾಂಧಿ ಆಗಮನ

ಇದರೊಟ್ಟಿಗೆ ಏ.13ರಂದು ಮಂಡ್ಯ ಲೋಕಸಭಾ ಚುನಾವಣಾ ಪ್ರಚಾರದ ಅಂಗವಾಗಿ ಕೆ.ಆರ್.ನಗರದಲ್ಲಿ ಹಮ್ಮಿಕೊಂಡಿರುವ ಸಮಾವೇಶದಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪಾಲ್ಗೊಳ್ಳಲಿದ್ದಾರೆ. ಇದಕ್ಕೂ ಮುನ್ನ 12ರಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹಾಗೂ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ಜಂಟಿಯಾಗಿ ಮೈಸೂರು ಲೋಕಸಭಾ ಕ್ಷೇತ್ರದ 2 ಕಡೆ ಸಮಾವೇಶ ನಡೆಸಲಿದ್ದಾರೆ ಎಂಬ ಮಾತು ಪಕ್ಷದ ಮೂಲದಿಂದ ಕೇಳಿ ಬಂದಿದೆ.

 ಮತದಾರರ ಮನವೊಲಿಸುವ ತಂತ್ರ

ಮತದಾರರ ಮನವೊಲಿಸುವ ತಂತ್ರ

ಮಂಡ್ಯ ಮತ್ತು ಹಾಸನ ಲೋಕಸಭಾ ಕ್ಷೇತ್ರಗಳಲ್ಲಿ ನಡೆಯತ್ತಿರುವಂತಹ ಪ್ರಚಾರದ ಅಬ್ಬರ, ರಾಜಕೀಯ ಚಟುವಟಿಕೆ ಇಲ್ಲಿ ಇನ್ನೂ ಕಾಣಿಸಿಕೊಂಡಿಲ್ಲ. ಮೈಸೂರಿನ ಮತದಾರರ ಗಮನ ಕೂಡ ನಿಖಿಲ್ ಕುಮಾರಸ್ವಾಮಿ ಮತ್ತು ಸುಮಲತಾ ನಡುವಿನ ಪೈಪೋಟಿಯ ಸುತ್ತಲೇ ಗಿರಕಿ ಹೊಡೆಯುತ್ತಿದೆ. ಪ್ರತಾಪ್ ಸಿಂಹ ಮತ್ತು ವಿಜಯಶಂಕರ್‌ ಅವರು ನಾಮಪತ್ರ ಸಲ್ಲಿಸಿದ್ದ ದಿನ ನಗರದಲ್ಲಿ ಚುನಾವಣೆಯ ಕಾವು ಸ್ವಲ್ಪ ರಂಗೇರಿತ್ತು. ಆ ಬಳಿಕ ಇಬ್ಬರೂ ಸದ್ದಿಲ್ಲದೆ ಪ್ರಚಾರ ನಡೆಸುತ್ತಿದ್ದಾರೆ. ಪಟ್ಟಣ ಪ್ರದೇಶಗಳಲ್ಲಿ ದೊಡ್ಡಮಟ್ಟದಲ್ಲಿ ಕಾರ್ಯಕ್ರಮ ಆಯೋಜಿಸುವುದಕ್ಕಿಂತಲೂ ಗ್ರಾಮೀಣ ಪ್ರದೇಶಗಳಲ್ಲಿ ಸಂಚರಿಸಿ ಮತದಾರರ ಮನವೊಲಿಸುವ ತಂತ್ರ ಅನುಸರಿಸುತ್ತಿದ್ದಾರೆ.

English summary
Lokasabha election date are coming near. All National party leaders are started election campaign in Mysuru. PM Narendra modi also coming tomorrow for bjp Rally.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X