ಲಾಕ್ ಡೌನ್ ನಡುವೆಯೂ ಮೈಸೂರಿನಲ್ಲಿ ಜೂಜಾಟ: ಬಂಧನ
ಮೈಸೂರು, ಏಪ್ರಿಲ್ 23: ಎಲ್ಲೆಡೆ ಕೊರೊನಾ ವೈರಸ್ ನಿಯಂತ್ರಿಸಲು ಜನರು ಗುಂಪು ಗುಂಪಾಗಿರಬಾರದೆಂದು ದೇಶವನ್ನೇ ಲಾಕ್ ಡೌನ್ ಮಾಡಲಾಗಿದೆ. ಈ ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಗುಂಪುಗೂಡಿ ಜೂಜಾಟದಲ್ಲಿ ತೊಡಗಿದ್ದ ಏಳು ಜನರನ್ನು ಮೈಸೂರಿನ ಸರಸ್ವತಿಪುರಂ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಜೂಜಾಟದಲ್ಲಿ ತೊಡಗಿದ್ದ ಆರೋಪಿಗಳಿಂದ 4870 ರೂ. ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ನಿಷೇಧಾಜ್ಞೆ ಉಲ್ಲಂಘನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಟಿ.ಕೆ ಲೇಔಟ್ ರಾಮಂದಿರ ರಸ್ತೆಯ ಮನೆಯಲ್ಲಿ ಬಂಧಿತರು ಗುಂಪುಗೂಡಿ ಜೂಜಾಟದಲ್ಲಿ ತೊಡಗಿದ್ದ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಇನ್ಸ್ ಪೆಕ್ಟರ್ ವಿಜಯ್ ಕುಮಾರ್ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದ್ದು, ಗುಂಪಾಗಿ ಕುಳಿತಿದ್ದು ಮತ್ತು ಜೂಜಾಟದಲ್ಲಿ ತೊಡಗಿಕೊಂಡಿದ್ದ ಆರೋಪದ ಮೇಲೆ ಎಲ್ಲರನ್ನೂ ಬಂಧಿಸಲಾಗಿದೆ. ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.












Click it and Unblock the Notifications