ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉಪ ಚುನಾವಣೆ: ಹುಣಸೂರು ಅಭ್ಯರ್ಥಿಗೆ ತೀವ್ರ ಹೃದಯಾಘಾತ

|
Google Oneindia Kannada News

ಮೈಸೂರು, ನವೆಂಬರ್ 29: ಉಪ ಚುನಾವಣೆ ಕಣದಲ್ಲಿದ್ದ ಹುಣಸೂರು ಪಕ್ಷೇತರ ಅಭ್ಯರ್ಥಿಗೆ ತೀವ್ರ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಹುಣಸೂರು ನಗರದ ಕುಲ್ಕಣಿ ಉಮೇಶ್ ಅವರು ಪಕ್ಷೇತರ ಅಭ್ಯರ್ಥಿಯಾಗಿ ಉಪ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಪ್ರಚಾರ ಮುಗಿದು ಮನೆಗೆ ಬಂದ ತಕ್ಷಣ ಎದೆನೋವು ಕಾಣಿಸಿಕೊಂಡಿದ್ದು ತಕ್ಷಣವೇ ಆಸ್ಪತ್ರೆಗೆ ಸೇರಿಸಲಾಗಿದೆ.

 ಈಗ ವಿಶ್ವನಾಥ್ ಗೆ ಸಿಕ್ಕಿದೆ ಒಕ್ಕಲಿಗರ ಬಲ ಈಗ ವಿಶ್ವನಾಥ್ ಗೆ ಸಿಕ್ಕಿದೆ ಒಕ್ಕಲಿಗರ ಬಲ

2018ರ ಚುನಾವಣೆಯಲ್ಲಿ ಜೆಡಿಎಸ್‍ನಿಂದ ಸ್ಪರ್ಧಿಸಿದ್ದ ಎಚ್.ವಿಶ್ವನಾಥ್ 91,667 ಮತಗಳನ್ನು ಪಡೆದು ಗೆದ್ದಿದ್ದರು.ಕಾಂಗ್ರೆಸ್ ಅಭ್ಯರ್ಥಿ ಎಚ್.ಪಿ.ಮಂಜುನಾಥ್ 83,092 ಹಾಗೂ ಪಕ್ಷೇತರ ಅಭ್ಯರ್ಥಿ ಎಚ್.ಪಿ.ಲಕ್ಷ್ಮಣ 243 ಮತ ಗಳಿದ್ದರು. ಆದರೆ ಬಿಜೆಪಿ ಅಭ್ಯರ್ಥಿ ಜೆ.ಎಸ್.ರಮೇಶ್ ಕುಮಾರ್ ಕೇವಲ 6,406 ಮತ ಪಡೆದಿದ್ದರು.

Severe Heart Attack For Hunsur Independent Candidate

ಆಯಾಸಗೊಂಡಿದ್ದ ಅವರು ಮನೆಯಲ್ಲಿ ಏಕಾಏಕಿ ಕುಸಿದು ಬಿದ್ದಿದ್ದರು. ಇದರಿಂದ ಗಾಬರಿಗೊಂಡ ಕುಟುಂಬಸ್ಥರು ಅವರನ್ನು ತಕ್ಷಣವೇ ಮೈಸೂರಿನ ಜಯದೇವ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಿದ್ದಾರೆ.

ಚುನಾವಣಾ ಅಧಿಕಾರಿಗಳು ಉಮೇಶ್ ಅವರಿಗೆ ಕ್ರಮಸಂಖ್ಯೆ 9 ಹಾಗೂ ಫ್ರಾಕ್ ಗುರುತು ನೀಡಿದ್ದಾರೆ. ಬಿಜೆಪಿಯಿಂದ ಎಚ್.ವಿಶ್ವನಾಥ್, ಕಾಂಗ್ರೆಸ್‌ನಿಂದ ಎಚ್.ಪಿ.ಮಂಜುನಾಥ್, ಜೆಡಿಎಸ್‍ನಿಂದ ಸೋಮಶೇಖರ್ ಸ್ಪರ್ಧೆ ಮಾಡುತ್ತಿದ್ದಾರೆ.

English summary
A Independent candidate from Hunsur by-election election was hospitalized with a severe heart attack.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X