ಎಚ್.ಡಿ ಕೋಟೆ: ಶಾಲಾ ಬಾಲಕಿಗೆ ಮುಖ್ಯ ಶಿಕ್ಷಕನಿಂದಲೇ ಲೈಂಗಿಕ ಕಿರುಕುಳ
ಮೈಸೂರು, ಮಾರ್ಚ್ 10: ಅಪ್ರಾಪ್ತ ಬಾಲಕಿಗೆ ಶಾಲೆಯ ಮುಖ್ಯ ಶಿಕ್ಷಕನಿಂದಲೇ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿರುವ ಘಟನೆ ಮೈಸೂರು ಜಿಲ್ಲೆಯ ಎಚ್.ಡಿ ಕೋಟೆ ತಾಲ್ಲೂಕಿನ ಕೆ.ಆರ್. ಪುರ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ.
ಎಚ್.ಡಿ. ಕೋಟೆ ತಾಲ್ಲೂಕಿನ ಕೆ.ಆರ್ ಪುರ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಎಚ್.ಎನ್.ಎಸ್ ಬೇಗ್ ಎಂಬುವವರೇ ಶಾಲಾ ಬಾಲಕಿಗೆ ಲೈಂಗಿಕ ಕಿರುಕಳ ನೀಡಿದ ಆರೋಪಕ್ಕೆ ಗುರಿಯಾಗಿದ್ದಾರೆ.
ಈ ವಿಷಯ ತಿಳಿಯುತ್ತಿದ್ದಂತೆಯೇ ಶಾಲೆಗೆ ಮುತ್ತಿಗೆ ಹಾಕಿ ಮುಖ್ಯ ಶಿಕ್ಷಕನನ್ನು ಗ್ರಾಮಸ್ಥರು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಘಟನೆ ಸಂಭವಿಸಿ 20 ದಿನಗಳು ಕಳೆದರೂ ಶಿಕ್ಷಣ ಇಲಾಖೆ ಅಧಿಕಾರಿಗಳಿಂದ ಕಾಮುಕ ಶಿಕ್ಷಕನನ್ನು ತೆರೆ ಮರೆಯಲ್ಲಿ ರಕ್ಷಣೆ ಮಾಡಲಾಗುತ್ತಿದೆ ಎಂಬ ಆರೋಪವೂ ಕೇಳಿಬಂದಿದೆ.
Recommended Video

ಎಚ್.ಡಿ ಕೋಟೆ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್. ರೇವಣ್ಣ ಸಮ್ಮುಖದಲ್ಲೇ ಕಾಮುಕ ಶಿಕ್ಷಕನಿಗೆ ಗ್ರಾಮಸ್ಥರು ಹಿಗ್ಗಾಮುಗ್ಗಾ ತರಾಟೆ ತೆಗೆದುಕೊಂಡಿದ್ದಾರೆ.
ಲೈಂಗಿಕ ಆರೋಪ ಹೊತ್ತಿರುವ ಬೇಗ್ ಹೆಚ್. ಡಿ. ಕೋಟೆ ತಾಲ್ಲೂಕು ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಸ್ಥಾನದ ಹುದ್ದೆ ಅಲಂಕರಿಸಿದ್ದಾರೆ.
ತನ್ನದೇ ಶಾಲೆಯ 10 ನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿ, ವಿದ್ಯಾರ್ಥಿನಿಯ ಮೊಬೈಲ್ ಗೆ ಅಶ್ಲೀಲ ಪದಗಳ ಸಂದೇಶ ರವಾನೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ.
ಪೋಷಕರು ಮತ್ತು ಗ್ರಾಮಸ್ಥರಿಗೆ ವಿಷಯ ತಿಳಿದು ಶಾಲೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಿ, ಮುಖ್ಯ ಶಿಕ್ಷಕ ಬೇಗ್ ರನ್ನು ಬೇರೆಡೆಗೆ ವರ್ಗಾವಣೆ ಮಾಡುವಂತೆ ಪಟ್ಟು ಹಿಡಿದಿದ್ದಾರೆ.












Click it and Unblock the Notifications