ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರು ನಗರಪಾಲಿಕೆ ನೂತನ ಆಯುಕ್ತರಾಗಿ ಶಿಲ್ಪಾನಾಗ್ ಅಧಿಕಾರ ಸ್ವೀಕಾರ

|
Google Oneindia Kannada News

ಮೈಸೂರು, ಫೆಬ್ರವರಿ 18: ಮೈಸೂರು ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ಐಎಎಸ್ ಅಧಿಕಾರಿ ಶಿಲ್ಪಾ ನೇಮಕವಾಗಿದ್ದು, ವರ್ಗಾವಣೆಗೊಂಡಿರುವ ಜಗದೀಶ್ ಅವರಿಂದ ಹೂಗುಚ್ಛ ಸ್ವೀಕರಿಸಿ ಕಡತಗಳಿಗೆ ಸಹಿ ಹಾಕುವ ಮೂಲಕ ಅಧಿಕಾರ ಸ್ವೀಕರಿಸಿದರು.

ಈ ಬಾರಿ ಸಿಗುವುದೇ ಮೈಸೂರಿಗೆ ಸ್ವಚ್ಛ ನಗರಿ ಪಟ್ಟ ?ಈ ಬಾರಿ ಸಿಗುವುದೇ ಮೈಸೂರಿಗೆ ಸ್ವಚ್ಛ ನಗರಿ ಪಟ್ಟ ?

ನೂತನ ಆಯುಕ್ತರಾಗಿ ನೇಮಕಗೊಂಡಿರುವ ಶಿಲ್ಪಾ ನಾಗ್ ಅವರು ಈ ಹಿಂದೆ ಮೈಸೂರಿನಲ್ಲೇ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯಲ್ಲಿ ನಿರ್ದೇಶಕರಾಗಿದ್ದರು.

 ಮೈಸೂರು ಮಹಾನಗರ ಪಾಲಿಕೆಯಿಂದ 'ಮೈ ಕ್ಲೀನ್ ಸಿಟಿ' ಆಪ್ ಬಿಡುಗಡೆ ಮೈಸೂರು ಮಹಾನಗರ ಪಾಲಿಕೆಯಿಂದ 'ಮೈ ಕ್ಲೀನ್ ಸಿಟಿ' ಆಪ್ ಬಿಡುಗಡೆ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ವರ್ಗಾವಣೆಯಾಗಿರುವುದರಿಂದ ಅದರ ಬಗ್ಗೆ ಹೆಚ್ಚು ಗಮನಹರಿಸಬೇಕಾಗುತ್ತದೆಯಾದರೂ, ಬೇಸಿಗೆ ಆರಂಭವಾಗಿರುವ ಕಾರಣ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಆದ್ಯತೆ ನೀಡುತ್ತೇನೆ ಎಂದು ಶಿಲ್ಪಾನಾಗ್ ತಿಳಿಸಿದರು.

Shilpa Nag has been appointed as the new commissioner of Mysuru City Corporation

ಸ್ವಚ್ಛನಗರಿ ಎಂಬ ಹೆಗ್ಗಳಿಕೆಯನ್ನು ಉಳಿಸಲು ತ್ಯಾಜ್ಯ ಸಂಗ್ರಹಣೆ, ವಿಲೇವಾರಿಯನ್ನು ಸಮರ್ಪಕವಾಗಿ ನಿರ್ವಹಿಸಿ ಮೈಸೂರಲ್ಲಿ ಸ್ವಚ್ಛತಾ ಕಾರ್ಯವನ್ನು ಮುಂದುವರಿಸಬೇಕಾಗಿದೆ. ನಾಗರಿಕ ಸೌಲಭ್ಯ ಒದಗಿಸಲು ಹಣಕಾಸು ಕ್ರೋಢೀಕರಿಸುವ ದೃಷ್ಟಿಯಿಂದ ಕಂದಾಯ ಸಂಗ್ರಹಕ್ಕೂ ಆಧ್ಯತೆ ನೀಡುತ್ತೇವೆ. ಅಧಿಕಾರಿಗಳು, ಸಿಬ್ಬಂದಿ ಹಾಗೂ ಪಾಲಿಕೆ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಉತ್ತಮ ಆಡಳಿತ ನೀಡುವ ಮೂಲಕ ಯಶಸ್ವಿಯಾಗಿ ಕೆಲಸ ಮಾಡುತ್ತೇನೆ ಎಂದು ಶಿಲ್ಪಾನಾಗ್ ಹೇಳಿದರು.

English summary
IAS officer Shilpa Nag has been appointed as the new commissioner of Mysuru City Corporation.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X