ಮೈಸೂರು ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ಪರ ಪ್ರತಿಭಟನೆ
ಮೈಸೂರು, ಜೂನ್ 4: ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ರಾಜೀನಾಮೆ ನೀಡಿರುವ ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ಅವರನ್ನು ಬೆಂಬಲಿಸಿ ಮೈಸೂರಿನೆಲ್ಲೆಡೆ ಸರಣಿ ಪ್ರತಿಭಟನೆಗಳು ನಡೆದಿದ್ದು, ಇದೇ ವಿಷಯಕ್ಕೆ ಪಾಲಿಕೆ ಸದಸ್ಯರು, ಸಿಬ್ಬಂದಿ ಹಾಗೂ ಪೌರಕಾರ್ಮಿಕರು ಸಹ ಪ್ರತಿಭಟನೆ ನಡೆಸಿದರು.
Recommended Video

"ಐ ಸ್ಟ್ಯಾಂಡ್ ವಿತ್ ಅವರ್ ಕಮಿಷನರ್' ಎಂಬ ಬ್ಯಾನರ್ ಅಳವಡಿಸಿ ಮೈಸೂರು ಮಹಾನಗರ ಪಾಲಿಕೆ ಕಚೇರಿ ಎದುರು ಜಮಾಯಿಸಿದ ಪಾಲಿಕೆ ಸದಸ್ಯರು, ಪಾಲಿಕೆ ಸಿಬ್ಬಂದಿ, ಪೌರ ಕಾರ್ಮಿಕರು ಶಿಲ್ಪನಾಗ್ ಅವರನ್ನು ಬೆಂಬಲಿಸಿ ಪಾಲಿಕೆ ಎದುರು ಪ್ರತಿಭಟನೆ ನಡೆಸಿದರು.

'ತೊಲಗಲಿ ತೊಲಗಲಿ ಡಿಸಿ ತೊಲಗಲಿ', "ಉಳಿಸಿ ಉಳಿಸಿ ಮೈಸೂರು ಉಳಿಸಿ', "ಐಎಎಸ್ ಅಧಿಕಾರಿ ಕನ್ನಡತಿ ಶಿಲ್ಪಾನಾಗ್ ಉಳಿಯಬೇಕು' ಎಂಬ ಘೋಷಣೆಗಳನ್ನು ಕೂಗುವ ಮೂಲಕ ಪಾಲಿಕೆ ಸದಸ್ಯರು ಪಕ್ಷಾತೀತವಾಗಿ ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದರು.

ಈ ನಡುವೆ ಶಿಲ್ಪಾನಾಗ್ ಅವರನ್ನು ಉಳಿಸಿಕೊಳ್ಳುವಂತೆ ಒತ್ತಾಯಿಸಿ ಪಾಲಿಕೆ ಸದಸ್ಯರು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಸ್ಥಳಕ್ಕಾಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಅವರಿಗೆ ಶಿಲ್ಪಾನಾಗ್ ಉಳಿಸಿಕೊಳ್ಳುವಂತೆ ಪಾಲಿಕೆ ಸದಸ್ಯರ ಒಕ್ಕೊರಲು ಮನವಿ ಸಲ್ಲಿಸಿದರು.

ಈ ಬಗ್ಗೆ ಪತ್ರದ ಮೂಲಕ ಜಿಲ್ಲಾ ಉಸ್ತುವಾರಿ ಸಚಿವರಿಗೆ ಸದಸ್ಯರು, ಪೌರ ಕಾರ್ಮಿಕರು ಮನವಿ ಮಾಡಿದರು. ಈ ಸಂದರ್ಭದಲ್ಲಿ ಸಂಸದ ಪ್ರತಾಪ್ ಸಿಂಹ, ಶಾಸಕ ಜಿ.ಟಿ ದೇವೇಗೌಡ, ತನ್ವಿರ್ ಸೇಠ್, ಎಲ್.ನಾಗೇಂದ್ರ ಸಹ ಸಾಥ್ ನೀಡಿದರು.












Click it and Unblock the Notifications