ಜಿಟಿಡಿ-ಸಾರಾ ಮಹೇಶ್ ನಡುವೆಯೇ ಕಿತ್ತಾಟ ನಡೆಯುತ್ತಿದೆ: ಶೋಭಾ ಕರಂದ್ಲಾಜೆ
Recommended Video

ಮೈಸೂರು, ಅಕ್ಟೋಬರ್. 18: ನಾಡಹಬ್ಬ ದಸರಾ ಹಿನ್ನೆಲೆಯಲ್ಲಿ ಗುರುವಾರ ಮಾವುತರು ಹಾಗೂ ಕಾವಾಡಿಗಳಿಗೆ ಸಂಸದೆ ಶೋಭಾ ಕರಂದ್ಲಾಜೆ ಉಪಹಾರ ವ್ಯವಸ್ಥೆ ಮಾಡಿದ್ದರು. ಇದೇ ವೇಳೆ ಮಾತನಾಡಿದ ಅವರು, ಓಪನ್ ಸ್ಟ್ರೀಟ್ ಫೆಸ್ಟ್ ನಲ್ಲಿ ರಕ್ಷಣೆ ನೀಡಲು ಆಗದಿದ್ದರೆ ಈ ಫೆಸ್ಟ್ ಏಕೆ ಮಾಡಬೇಕಿತ್ತು ಎಂದು ಪೊಲೀಸರ ವಿರುದ್ಧ ಹರಿಹಾಯ್ದರು.
ಓಪನ್ ಸ್ಟ್ರೀಟ್ ಫೆಸ್ಟ್ ನಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ನಡೆದಿದೆ ಎಂದು ಹೇಳಲಾಗುತ್ತಿದೆ. ಆದರೆ ಈವರೆಗೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಇಂತಹ ದೊಡ್ಡ ಕಾರ್ಯಕ್ರಮ ಆಯೋಜಿಸಿದಾಗ ಮಹಿಳೆಯರಿಗೆ ರಕ್ಷಣೆ ನೀಡಲು ಆಗದಿದ್ದರೆ ಏಕೆ ಕಾರ್ಯಕ್ರಮ ಆಯೋಜಿಸಬೇಕಿತ್ತು?
ಫೆಸ್ಟ್ ವೇಳೆ ಮಹಿಳೆಯರ ವೇಳೆ ದೌರ್ಜನ್ಯ ನಡೆದಿದ್ದು , ಸಿಸಿ ಟಿವಿ ಕ್ಯಾಮೆರಾ ಪರಿಶೀಲಿಸಿ ತಪ್ಪಿತಸ್ಥರನ್ನು ಗುರುತಿಸಿ ಕ್ರಮ ಕೈಗೊಳ್ಳಬೇಕೆಂದು ಎಚ್ಚರಿಸಿದರು.

ಇನ್ನು ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಇದ್ದರೂ ದಸರಾ ಕಾರ್ಯಕ್ರಮದಲ್ಲಿ ಜೆಡಿಎಸ್ ನವರೇ ಭಾಗವಹಿಸುತ್ತಿದ್ದಾರೆ. ಕಾಂಗ್ರೆಸ್ ನವರು ಯಾವ ಕಾರ್ಯಕ್ರಮದಲ್ಲೂ ಭಾಗಿಯಾಗಲ್ಲ. ಇದನ್ನು ನೋಡಿದರೆ ಕಾಂಗ್ರೆಸ್-ಜೆಡಿಎಸ್ ನಡುವೆ ಹೊಂದಾಣಿಕೆ ಇಲ್ಲ ಎಂಬುದು ತಿಳಿಯುತ್ತದೆ.
ಸಚಿವರಾದ ಜಿ.ಟಿ.ದೇವೇಗೌಡ ಹಾಗೂ ಸಾ.ರಾ.ಮಹೇಶ್ ನಡುವೆಯೇ ಕಿತ್ತಾಟ ನಡೆಯುತ್ತಿದೆ ಎಂದು ಶೋಭಾ ಕರಂದ್ಲಾಜೆ ಟೀಕಿಸಿದರು.

ಇದಕ್ಕೂ ಮುನ್ನ ದಸರಾ ಆನೆಗಳಿಗೆ ಬೆಲ್ಲ-ಕಬ್ಬು-ಹುಲ್ಲು ನೀಡಿ, ಆನೆಯೊಂದಿಗೆ ಫೋಟೋಗೆ ಪೋಸ್ ನೀಡಿದರು.











Click it and Unblock the Notifications