ಮೈಸೂರಿನಲ್ಲಿ ಮದ್ಯದಂಗಡಿಗೆ ಬೆಂಕಿ: ಲಕ್ಷಾಂತರ ರೂ. ನಷ್ಟ
ಮೈಸೂರು, ಮೇ 11: ಗುಂಡ್ಲುಪೇಟೆ ತಾಲ್ಲೂಕು ಬೇಗೂರಿನಲ್ಲಿ ಇಂದು ಬೆಳಗಿನ ಜಾವ ಎಂಎಸ್ಐಎಲ್ ಮದ್ಯದಂಗಡಿಗೆ ಬೆಂಕಿ ಬಿದ್ದು ಲಕ್ಷಾಂತರ ರುಪಾಯಿ ಮೌಲ್ಯದ ಮದ್ಯ ಸುಟ್ಟು ಭಸ್ಮವಾಗಿದೆ.
ಈ ಘಟನೆ ಬೇಗೂರಿನ ಸೋಮಹಳ್ಳಿ ರಸ್ತೆಯಲ್ಲಿರುವ ಮದ್ಯದಂಗಡಿಗೆ ಬೆಳಗಿನ ಜಾವ 3 ಗಂಟೆಗೆ ಬೆಂಕಿ ಬಿದ್ದಿದ್ದು, 2 ಲಕ್ಷ ರೂ. ನಗದು ಹಾಗೂ 4 ಲಕ್ಷ ರೂ. ಮೌಲ್ಯದ ಮದ್ಯ ಅಗ್ನಿಗಾಹುತಿಯಾಗಿದೆ ಎಂದು ತಿಳಿದುಬಂದಿದೆ.

ಮದ್ಯದಂಗಡಿಗೆ ಬೆಂಕಿ ಬಿದ್ದ ವಿಷಯ ತಿಳಿದ ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಬಂದರಾದರೂ, ಅಷ್ಟೊತ್ತಿಗಾಗಲೇ ಸರಕುಗಳು ಸಂಪೂರ್ಣ ಸುಟ್ಟು ಕರಕಲಾಗಿತ್ತು. ಬೆಂಕಿ ಅವಘಡಕ್ಕೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಶಂಕಿಸಲಾಗಿದೆ. ಬೇಗೂರು ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.












Click it and Unblock the Notifications