ರಾಜಕೀಯ ಕಾರಣಕ್ಕೆ ನೇಹಾ ಕೊಲೆ ಪ್ರಕರಣ ಬಳಕೆ : ಸಿಎಂ ಸಿದ್ದರಾಮಯ್ಯ
ಮೈಸೂರು: ನೇಹಾ ಹಿರೇಮಠ ಅವರ ಕೊಲೆ ವೈಯಕ್ತಿಕ ಕಾರಣಕ್ಕೆ ಸಂಭವಿಸಿದೆ. ಇದನ್ನು ನಾನು ತೀವ್ರ ಖಂಡಿಸುತ್ತೇನೆ. ಈ ಪ್ರಕರಣವನ್ನು ಬಿಜೆಪಿಯವರು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೇಹಾ ಹಿರೇಮಠ ಕೊಲೆ ಪ್ರಕರಣವನ್ನು ರಾಜ್ಯ ಸರಕಾರ ಗಂಭೀರವಾಗಿ ಪರಿಗಣಿಸಿದೆ. ಆರೋಪಿಯನ್ನು ಬಂಧಿಸಲಾಗಿದೆ. ಆದರೆ, ಬಿಜೆಪಿ ಇದನ್ನೇ ಅಸವಾಗಿಟ್ಟುಕೊಂಡು ಪ್ರತಿಭಟನೆ ನಡೆಸುತ್ತಿದೆ ಎಂದು ತಿಳಿಸಿದರು.

ನಾವು ಕಾನೂನು ಮತ್ತು ಸುವ್ಯವಸ್ಥೆ ವಿಚಾರದಲ್ಲಿ ಕಾಂಗ್ರೆಸ್ ಸದಾ ಗಂಭೀರವಾದ ನಿರ್ಧಾರಗಳನ್ನೇ ತೆಗೆದುಕೊಳ್ಳುತ್ತದೆ. ಬಿಜೆಪಿ ಕಾಲದಲ್ಲೂ ಕೊಲೆಗಳಾಗಿವೆ. ಹಾಗೆಂದ ಮಾತ್ರಕ್ಕೆ ನಾವು ಕಾನೂನು ಸುವ್ಯವಸ್ಥೆಯನ್ನು ಗಂಭೀರವಾಗಿ ತೆಗೆದುಕೊಂಡಿಲ್ಲ ಎಂದರ್ಥವಲ್ಲ ಎಂದರು.
ಮೋದಿ ಅಲೆ ಕೆಲಸ ಮಾಡಲ್ಲ
ಬಿಜೆಪಿ ಅಭ್ಯರ್ಥಿಗಳು ಮೋದಿಯನ್ನು ಅವಲಂಬಿಸಿದ್ದು, ಮೋದಿ ಹೆಸರಿನಲ್ಲಿ ಮತ ಕೇಳುತ್ತಿದ್ದಾರೆ. ಆದರೆ, ದೇಶದಲ್ಲಿ ಮೋದಿ ಅಲೆ ಇಲ್ಲ. ಸದ್ಯ ಬಿಜೆಪಿ ವಿರುದ್ಧ ಆಡಳಿತ ವಿರೋಧಿ ಹಾಗೂ ಕಾಂಗ್ರೆಸ್, ಐಎನ್‌ಡಿಐಎ ಪರವಾದ ಅಲೆ ಇದೆ. ಕಾಂಗ್ರೆಸ್ ಹೆಚ್ಚು ಸ್ಥಾನ ಗೆಲ್ಲಲಿದೆ ಎಂದರು.
ಕಪ್ಪು ಹಣ ತಂದು ಎಲ್ಲರ ಖಾತೆಗೆ 15 ಲಕ್ಷ ಕೊಡುತ್ತೇವೆ, ಉದ್ಯೋಗ ಕೊಡುತ್ತೇವೆ, ರೈತರ ಆದಾಯ ಡಬಲ್ ಮಾಡುತ್ತೇವೆ ಎಂದು ಹೇಳಿ ಜನರ ಕೈಗೆ ಚೊಂಬು ನೀಡಿದ್ದಾರೆ ಎಂಬುದರ ಸೂಚಕವಾಗಿ ಖಾಲಿ ಚೊಂಬಿನ ಜಾಹೀರಾತು ನೀಡಿದ್ದೇವೆ. ರಾಜ್ಯ ಸರಕಾರದ ಖಜಾನೆ ಖಾಲಿಯಾಗಿಲ್ಲ. ಗ್ಯಾರಂಟಿಗೂ ಹಣ ಕೊಟ್ಟಿದ್ದೇವೆ. ಅಭಿವೃದ್ಧಿಗೂ ಹಣ ಮೀಸಲಿಟ್ಟು ಅಭಿವೃದ್ಧಿ ಮಾಡುತ್ತಿದ್ದೇವೆ ಎಂದರು.
ಜೆಡಿಎಸ್‌ನವರು ಮೈತ್ರಿ ಮಾಡಿಕೊಂಡು, ಬಿಜೆಪಿ ಜತೆಗೆ ಚುನಾವಣೆ ಎದುರಿಸುತ್ತಿದ್ದಾರೆ. ನಾವು ಸ್ವತಂತ್ರವಾಗಿ ಚುನಾವಣೆ ಎದುರಿಸುತ್ತಿದ್ದೇವೆ. ಬಿಜೆಪಿ ಜತೆಗೆ ಸೇರಿರುವ ಜೆಡಿಎಸ್‌ನವರು ಈಗ ಸೆಕ್ಯೂಲರ್ ಆಗಿ ಉಳಿದಿಲ್ಲ. ಹೀಗಾಗಿ ಅವರು ಎಸ್ ಅಕ್ಷರವನ್ನು ತೆಗೆದುಹಾಕಬೇಕು ಎಂದು ತಿರುಗೇಟು ನೀಡಿದರು.












Click it and Unblock the Notifications