ರಾಜ್ಯ ಕಾಂಗ್ರೆಸ್‌ನಲ್ಲಿ ಅಸಮಾಧಾನ; ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?
ಮೈಸೂರು: ಬಿಜೆಪಿ ನಾಯಕರು ಹೇಳಿಕೆ ನೀಡಿರುವುದು ಕೇವಲ ರಾಜಕೀಯ ಪ್ರೇರಿತ ಹೇಳಿಕೆಯಾಗಿದೆ. ಕಾಂಗ್ರೆಸ್‌ನಲ್ಲಿ ಯಾವುದೇ ರೀತಿಯ ಬೇಸರ, ವೈಮನಸ್ಸು ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನಲ್ಲಿ ನಾಯಕರ ನಡುವೆ ವೈಮನಸ್ಸು ಇದ್ದಿದ್ದರೆ ಕಳೆದ ಲೋಕಸಭೆ ಚುನಾವಣೆಯಲ್ಲಿ ಎಲ್ಲರೂ ಸಂಘಟಿತರಾಗಿ ಒಗ್ಗಟ್ಟಿನಿಂದ ಕೆಲಸ ಮಾಡಲು ಸಾಧ್ಯವಾಗುತ್ತಿರಲಿಲ್ಲ.

ಮಹಾರಾಷ್ಟ್ರ ಸಿಎಂ ಕರ್ನಾಟಕ ಸರ್ಕಾರ ಪತನವಾಗುವ ಬಗ್ಗೆ ಮಾತನಾಡುವ ಬದಲು ಮೊದಲು ಸರ್ಕಾರವನ್ನು ಉಳಿಸಿಕೊಳ್ಳಲಿ ಎಂದು ಹೇಳಿದರು.
ಪರಿಷತ್ ಚುನಾವಣೆಯಲ್ಲಿ ಗೆಲ್ಲುವ ಭರವಸೆ
ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಮತದಾರರು ರಾಜಕೀಯವಾಗಿ ಪ್ರಬುದ್ಧರಾಗಿರುತ್ತಾರೆ. ಅವರಿಗೆ ರಾಜಕೀಯ ವಿದ್ಯಮಾನಗಳ ಬಗ್ಗೆ ಸ್ಪಷ್ಟ ಅರಿವಿದೆ. ಕೇಂದ್ರ ಸರ್ಕಾರದ ಸಾಧನೆಗಳು ಹಾಗೂ ನಮ್ಮ ಸರ್ಕಾರದ ಸಾಧನೆಗಳ ಬಗ್ಗೆ ತುಲನೆ ಮಾಡುವ ಶಕ್ತಿಯೂ ಅವರಿಗಿದೆ. ಹಾಗಾಗಿ ಎಲ್ಲರೂ ಜವಾಬ್ದಾರಿಯಿಂದ ಮತದಾನ ಮಾಡುತ್ತಾರೆ ಎಂದರು.
ಈ ಬಾರಿಯ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ವಾತಾವರಣ ಉತ್ತಮವಾಗಿದೆ. ಅಲ್ಲದೇ ಪಕ್ಷವು ಈ ಚುನಾವಣೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಅದಕ್ಕಾಗಿಯೇ ಅಭ್ಯರ್ಥಿಗಳನ್ನು ಆರು ತಿಂಗಳು ಮುಂಚಿತವಾಗಿಯೇ ಆಯ್ಕೆ ಮಾಡಲಾಗಿತ್ತು. ಹಾಗಾಗಿ ಅಭ್ಯರ್ಥಿಗಳಿಗೆ ಮತದಾರರನ್ನು ಭೇಟಿಯಾಗಲು ಸಮಯಾವಕಾಶ ಸಿಕ್ಕಿದೆ ಎಂದು ಹೇಳಿದರು.
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು, ಭ್ರಷ್ಟಾಚಾರದ ಬಗ್ಗೆ ತಮ್ಮ ಬಳಿ ಪೆನ್ ಡ್ರೈವ್ ಇದ್ದು, ತನಿಖೆ ಮಾಡಿಸುವ ತಾಕತ್ತು ಸರಕಾರಕ್ಕಿದೆ ಎಂದರೆ ಬಿಡುಗಡೆ ಮಾಡುವುದಾಗಿ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿ, ಕುಮಾರಸ್ವಾಮಿ ಅವರದ್ದು ಸದಾ ಹಿಟ್ ಅಂಡ್ ರನ್ ಕೇಸ್ ಎಂದು ಟೀಕಿಸಿದರು.












Click it and Unblock the Notifications