ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಮ ಮಂದಿರ ನಿರ್ಮಾಣ; ಸಿದ್ದರಾಮಯ್ಯ ಸಹೋದರನಿಂದ ದೇಣಿಗೆ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಫೆಬ್ರವರಿ 16; "ರಾಮ ಮಂದಿರ ನಿರ್ಮಾಣಕ್ಕೆ ಯಾವುದೇ ದೇಣಿಗೆ ನೀಡಲ್ಲ" ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಇತ್ತ ಸಿದ್ದರಾಮಯ್ಯ ಅವರ ತಮ್ಮ ಸಿದ್ಧೇಗೌಡ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಿದ್ದಾರೆ.

ರಾಜ್ಯದಲ್ಲಿ ರಾಮ ಮಂದಿರಕ್ಕೆ ದೇಣಿಗೆ ಸಂಗ್ರಹಿಸುವ ವಿಚಾರ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಈ ನಡುವೆ "ಅಯೋಧ್ಯೆಯಲ್ಲಿ ನಿರ್ಮಾಣ ಮಾಡಲಾಗುತ್ತಿರುವ ರಾಮ ಮಂದಿರಕ್ಕೆ ದೇಣಿಗೆ ನೀಡುವುದಿಲ್ಲ. ವಿವಾದಿತ ಸ್ಥಳದಲ್ಲಿ ಕಟ್ಟುತ್ತಿರುವ ರಾಮ ಮಂದಿರಕ್ಕೆ ನಾನು ದೇಣಿಗೆ ನೀಡುವುದಿಲ್ಲ" ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಿದ ಲಕ್ಷ್ಮೀ ಹೆಬ್ಬಾಳ್ಕರ್ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಿದ ಲಕ್ಷ್ಮೀ ಹೆಬ್ಬಾಳ್ಕರ್

ಸಿದ್ದರಾಮಯ್ಯರ ಸ್ವಗ್ರಾಮ ಮೈಸೂರು ಜಿಲ್ಲೆಯ ಸಿದ್ದರಾಮನಹುಂಡಿಯಲ್ಲಿ ಬಿಜೆಪಿ ದೇಣಿಗೆ ಸಂಗ್ರಹ ಮಾಡುತ್ತಿದೆ. ಸಿದ್ದರಾಮಯ್ಯ ಅವರ ತಮ್ಮ ಸಿದ್ಧೇಗೌಡ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಿದ್ದಾರೆ. ರಾಮ ಮಂದಿರ ನಿರ್ಮಾಣಕ್ಕೆ ನಿಧಿ ಸರ್ಮಪಣಾ ಅಭಿಯಾನದ ಮೂಲಕ ಬಿಜೆಪಿ ಹಾಗೂ ಆರ್‌ಎಸ್‌ಎಸ್ ಕಾರ್ಯಕರ್ತರು ದೇಣಿಗೆ ಸಂಗ್ರಹಿಸುತ್ತಿದ್ದಾರೆ.

'ಕುಮಾರಸ್ವಾಮಿ ಮನಸ್ಸಲ್ಲೂ ರಾಮ ಮಂದಿರ ಆಗಬೇಕೆಂಬ ಬಯಕೆ ಇದೆ''ಕುಮಾರಸ್ವಾಮಿ ಮನಸ್ಸಲ್ಲೂ ರಾಮ ಮಂದಿರ ಆಗಬೇಕೆಂಬ ಬಯಕೆ ಇದೆ'

Siddaramaiah Brother Donated 10 Rs For Ram Mmandir

ಸಾಂಸ್ಕೃತಿಕ ನಗರದಲ್ಲಿ ಕೂಡ ಈ ಕಾರ್ಯಕ್ಕೆ ಈಗಾಗಲೇ ಚಾಲನೆ ನೀಡಲಾಗಿದೆ. ಗ್ರಾಮ ಗ್ರಾಮಗಳಿಗೂ ತೆರಳಿ ನಿಧಿ ಸಂಗ್ರಹಣೆ ನಡೆಸಲಾಗುತ್ತಿದೆ. ಅದರಂತೆ ಸಿದ್ದರಾಮನಹುಂಡಿ ಸೇರಿದಂತೆ ಸುತ್ತಮುತ್ತ ಗ್ರಾಮಗಳಲ್ಲಿ ನಿಧಿ ಸಂಗ್ರಹ ಕಾರ್ಯ ನಡೆಯುತ್ತಿದೆ.

ಅಯೋಧ್ಯೆ ರಾಮ ಮಂದಿರ ನಿರ್ಮಾಣ: ಅತಿಹೆಚ್ಚು ದೇಣಿಗೆ ನೀಡಿದವರ ಪಟ್ಟಿ ಅಯೋಧ್ಯೆ ರಾಮ ಮಂದಿರ ನಿರ್ಮಾಣ: ಅತಿಹೆಚ್ಚು ದೇಣಿಗೆ ನೀಡಿದವರ ಪಟ್ಟಿ

ಸಿದ್ದರಾಮನ ಹುಂಡಿಯಲ್ಲಿ ರಾಮ ಮಂದಿರಕ್ಕೆ ನಿಧಿ ಸಂಗ್ರಹಿಸುವಾಗ ಸಿದ್ದೇಗೌಡರ ನಿವಾಸಕ್ಕೆ ತೆರಳಿ ನಿಧಿಗಾಗಿ ಮನವಿ ಮಾಡಲಾಗಿದೆ. ಈ ವೇಳೆ ಮನವಿಗೆ ಸ್ಪಂದಿಸಿದ ಸಿದ್ದೇಗೌಡರು 10 ರೂ. ದೇಣಿಗೆ ನೀಡಿದ್ದಾರೆ. ಈ ನಡುವೆ 10 ರೂ. ದೇಣಿಗೆ ಪಡೆದ ಬಿಜೆಪಿ ಕಾರ್ಯಕರ್ತರು ರಶೀದಿ ನೀಡಿದ್ದಲ್ಲದೆ ಸಿದ್ದೇಗೌಡರ ಜೊತೆ ನಿಂತು ಪೋಟೋಗೆ ಪೋಸ್ ಕೊಟ್ಟಿದ್ದಾರೆ.

ಇದಾದ ಬಳಿಕ ಸಿದ್ದರಾಮಯ್ಯರ ಅಣ್ಣನ ಮಗನ ಬಳಿಯೂ ನಿಧಿಗೆ ಮನವಿ ಮಾಡಿದ್ದಾರೆ.‌ ಆದರೆ, ಬಿಜೆಪಿ ಕಾರ್ಯಕರ್ತರ ಮನವಿಗೆ ಸ್ಪಂದಿಸದ ಸಿದ್ದರಾಮಯ್ಯರ ಅಣ್ಣನ ಮಗ ನಾನು‌ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡುವುದಿಲ್ಲ. ನೀವು ಅಗತ್ಯವಿದ್ದರೆ ನಮ್ಮೂರಿನಲ್ಲಿ ಪಡೆದುಕೊಳ್ಳಿ ಎಂದು ತಿಳಿಸಿದ್ದಾರೆ.

ಸಿದ್ದರಾಮಯ್ಯ ಅವರ ಅಣ್ಣನ ಮಗನಿಗೆ ಕರಪತ್ರ ನೀಡಿ ವಾಪಸ್ಸಾದ ಬಿಜೆಪಿಗರು ಸಿದ್ದರಾಮನಹುಂಡಿ ಹಾಗೂ ಸುತ್ತಮುತ್ತಲಿನ ಗ್ರಾಮದಲ್ಲಿ 40 ಸಾವಿರ ದೇಣಿಗೆ ಸಂಗ್ರಹಿಸಿದ್ದಾರೆ. ರಾಮ ಮಂದಿರಕ್ಕೆ ದೇಣಿಗೆ ನೀಡುವುದಿಲ್ಲ ಎಂದ ಸಿದ್ದರಾಮಯ್ಯರ ಸ್ವ ಗ್ರಾಮದಲ್ಲೇ ದೇಣಿಗೆ ಸಂಗ್ರಹಕ್ಕೆ‌ ಮುಂದಾದ ಬಿಜೆಪಿ ಕಾರ್ಯಕರ್ತರು ನಡೆಯೂ ಚರ್ಚೆಗೆ ಗ್ರಾಸವಾಗಿದೆ.

ಸಿದ್ದರಾಮಯ್ಯ ಹೇಳಿದ್ದೇನು?: ದೆಹಲಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, "ರಾಮಮಂದಿರ ನಿರ್ಮಾಣಕ್ಕೆ ಯಾರ ವಿರೋಧವೂ ಇಲ್ಲ. ಆದರೆ ಇದೇ ಬಿಜೆಪಿ ಹಿಂದೊಮ್ಮೆ ರಾಮ ಮಂದಿರ ನಿರ್ಮಾಣಕ್ಕಾಗಿ ಇಟ್ಟಿಗೆ-ಹಣ ಸಂಗ್ರಹಿಸಿತ್ತಲ್ಲಾ, ಅದು ಏನಾಯಿತೆಂದು ಯಾರಿಗೂ ಗೊತ್ತಿಲ್ಲ.‌ ಅದರ ಲೆಕ್ಕವನ್ನು ಬಿಜೆಪಿ ಮೊದಲು ಸಾರ್ವಜನಿಕರಿಗೆ ನೀಡಬೇಕಾಗುತ್ತದೆ." ಎಂದು ಹೇಳಿದ್ದಾರೆ.

"ಸಾರ್ವಜನಿಕರಿಂದ ಹಣ ಸಂಗ್ರಹಿಸುವವವರು ಪಾರದರ್ಶಕವಾಗಿ ನಡೆದುಕೊಳ್ಳಬೇಕಾಗುತ್ತದೆ. ಪಿಎಂ ಕೇರ್ಸ್ ನಿಧಿಯ ಲೆಕ್ಕವನ್ನೇ ಕೊಡದಿರುವ ಈಗಿನ ಬಿಜೆಪಿ ಸರ್ಕಾರ ರಾಮ ಮಂದಿರ ನಿರ್ಮಾಣಕ್ಕೆ ಸಂಗ್ರಹಿಸುವ ಹಣದ ಲೆಕ್ಕ ನೀಡುತ್ತಾ? ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ" ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

English summary
Opposition leader of Karnataka Siddaramaiah brother Sidde Gowda donated Rs 10 for Ram mandir. Shri Ram Janmabhoomi Teerth Kshetra Trust collecting donation.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X