ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೋದಿಯವರ ಭರವಸೆ ಈಡೇರುವುದು ಕನಸಿನ ಮಾತು : ಸಿದ್ದರಾಮಯ್ಯ

|
Google Oneindia Kannada News

ಮೈಸೂರು, ಫೆಬ್ರವರಿ 01 : "ಇಂದು ದೇಶದ ಜಿಡಿಪಿ 2.5 ರಷ್ಟಿದೆ ಈ ಪರಿಸ್ಥಿತಿಯಲ್ಲಿ ಮೋದಿಯವರ ಭರವಸೆ ಈಡೇರುವುದು ಕನಸಿನ ಮಾತು" ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಬಜೆಟ್ 2020ರ ಕುರಿತು ಪ್ರತಿಕ್ರಿಯೆ ನೀಡಿದರು.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಬಜೆಟ್ ಮಂಡನೆ ಮಾಡಿದರು. ಮೈಸೂರಿನಲ್ಲಿ ಕರ್ನಾಟಕದ ಪ್ರತಿಪಕ್ಷದ ನಾಯಕರಾದ ಸಿದ್ದರಾಮಯ್ಯ ಬಜೆಟ್ ಬಗ್ಗೆ ಪ್ರತಿಕ್ರಿಯೆ ನೀಡಿದರು. ಅಂಕಿ-ಸಂಖ್ಯೆಗಳ ಲೆಕ್ಕವನ್ನು ತೆರೆದಿಟ್ಟರು.

ಬಜೆಟ್: ಸಿಎಂ ಯಡಿಯೂರಪ್ಪ ಪ್ರಧಾನಿ ಮೋದಿಗೆ ಹೇಳಿದ್ದೇನು?ಬಜೆಟ್: ಸಿಎಂ ಯಡಿಯೂರಪ್ಪ ಪ್ರಧಾನಿ ಮೋದಿಗೆ ಹೇಳಿದ್ದೇನು?

"ಬೆಂಗಳೂರು ನಗರದ ಉಪನಗರ ರೈಲು ಯೋಜನೆ ಬಗ್ಗೆ ಕಳೆದ ಬಜೆಟ್‌ನಲ್ಲಿಯೇ ಪ್ರಸ್ತಾಪವಿದ್ದರೂ ಈವರೆಗೂ ಒಂದು ಸ್ಟೇಷನ್ ಆಗಲಿ, ಹಳಿ ನಿರ್ಮಾಣ ಕಾರ್ಯವಾಗಲಿ ಆಗಿಲ್ಲ. ಮತ್ತೆ ಈ ಬಾರಿಯೂ ಅದೇ ರಾಗ, ಅದೇ ಹಾಡು" ಎಂದು ಟೀಕಿಸಿದರು.

ಬಜೆಟ್ ಭಾಷಣ: ತಮ್ಮ ದಾಖಲೆಯನ್ನು ತಾವೇ ಮುರಿದ ನಿರ್ಮಲಾ ಸೀತಾರಾಮನ್!ಬಜೆಟ್ ಭಾಷಣ: ತಮ್ಮ ದಾಖಲೆಯನ್ನು ತಾವೇ ಮುರಿದ ನಿರ್ಮಲಾ ಸೀತಾರಾಮನ್!

"ದೇಶದ ಮುನ್ನಡೆಗೆ ಬೇಕಾದ ಯಾವ ಮುನ್ನೋಟವೂ ಇಲ್ಲದ, ಭವಿಷ್ಯದ ಮೇಲಿನ ಭರವಸೆಯನ್ನು ಕಳೆದುಕೊಂಡಿರುವ ಸಾಮಾನ್ಯ ಜನರು, ರೈತರು, ಯುವಜನರು, ಉದ್ಯಮಿಗಳು ಹೀಗೆ ಯಾವ ಜನ ಸಮುದಾಯದಲ್ಲಿಯೂ ವಿಶ್ವಾಸ, ಭರವಸೆಯನ್ನು ಹುಟ್ಟಿಸದ ನಿರಾಶದಾಯಕ ಬಜೆಟ್" ಎಂದು ಹೇಳಿದರು.

ಕೇಂದ್ರ ಬಜೆಟ್ 2020: ಯಾವುದು ಏರಿಕೆ? ಯಾವುದು ಇಳಿಕೆ? ಕೇಂದ್ರ ಬಜೆಟ್ 2020: ಯಾವುದು ಏರಿಕೆ? ಯಾವುದು ಇಳಿಕೆ?

ಹಣದ ಕೊರತೆ ಇತ್ತು

ಹಣದ ಕೊರತೆ ಇತ್ತು

ಕಳೆದ ಬಾರಿಯ ಕೇಂದ್ರದ ಬಜೆಟ್ ಗಾತ್ರ 27 ಲಕ್ಷ ಕೋಟಿ ರೂ. ಗಳಿತ್ತು, ಈ ಬಾರಿ ರೂ.30 ಲಕ್ಷದ 42 ಸಾವಿರ ಕೋಟಿಗೆ ಏರಿಕೆ ಕಂಡಿದೆ. ನೇರ ತೆರಿಗೆ ಸಂಗ್ರಹ ಕಡಿಮೆಯಾದ ಕಾರಣ ಕಳೆದ ಬಾರಿ ಸುಮಾರು ಎರಡು ಲಕ್ಷ ಕೋಟಿ ಹಣ ಕೊರತೆಯಾಗಿತ್ತು. ಕೇವಲ ರೂ.25 ಲಕ್ಷ ಕೋಟಿಗಳಷ್ಟು ಮಾತ್ರ ಖರ್ಚು ಮಾಡಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಮೋದಿ ಭರವಸೆ ಈಡೇರಿಕೆ ಕನಸಿನ ಮಾತು

ಮೋದಿ ಭರವಸೆ ಈಡೇರಿಕೆ ಕನಸಿನ ಮಾತು

2 ಬಾರಿ ನರೇಂದ್ರ ಮೋದಿಯವರ ಸರ್ಕಾರ ಅಧಿಕಾರಕ್ಕೆ ಬಂದಾಗ ದೇಶದ ಆದಾಯವನ್ನು 5 ಟ್ರಿಲಿಯನ್ ಡಾಲರ್‌ಗೆ ಏರಿಸುವುದಾಗಿ ಭರವಸೆ ನೀಡಿದ್ದರು. ಇಂದು ದೇಶದ ಜಿಡಿಪಿ 2.5 ರಷ್ಟಿದೆ, ಈ ಪರಿಸ್ಥಿತಿಯಲ್ಲಿ ಮೋದಿಯವರ ಭರವಸೆ ಈಡೇರುವುದು ಕನಸಿನ ಮಾತು.

ಪ್ರಸಕ್ತ ಬಜೆಟ್‌ನಲ್ಲಿ ದೇಶದ ಜಿಡಿಪಿಯನ್ನು 6% ಗೆ ಏರಿಸುವ ಕುರಿತು ವ್ಯಾಖ್ಯಾನಿಸಲಾಗಿದ್ದರೂ, ಅದರ ಈಡೇರಿಕೆಗೆ ಬೇಕಾದಂತಹ ಪರಿಣಾಮಕಾರಿ ಕಾರ್ಯಸೂಚಿಗಳೇನು ಕಂಡುಬರುತ್ತಿಲ್ಲ. ಹಾಗಾಗಿ ಇದೂ ಕೂಡ ಭರವಸೆಯಾಗಿಯೇ ಉಳಿಯಲಿದೆ. ಪಾತಾಳ ಮುಟ್ಟಿರುವ ಆರ್ಥಿಕ ಸ್ಥಿತಿಯನ್ನು ಮೇಲೆತ್ತಲು ಬೇಕಾದ ಇಚ್ಛಾಶಕ್ತಿ ಕೇಂದ್ರ ವಿತ್ತ ಸಚಿವರಲ್ಲಿ ಇಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

ಸರ್ಕಾರದ ಉದ್ದೇಶ

ಸರ್ಕಾರದ ಉದ್ದೇಶ

ಹಣಕಾಸು ಸಚಿವರು ಕೃಷಿ ಕ್ಷೇತ್ರದ ಅಭಿವೃದ್ದಿಗೆ 16 ಅಂಶಗಳ ಕಾರ್ಯಕ್ರಮವನ್ನು ಘೋಷಿಸಿದ್ದಾರೆ. ಇದರಲ್ಲಿ 9 ಅಂಶಗಳು ರೈತರ ಜಮೀನನ್ನು ಖಾಸಗಿ ಕಂಪೆನಿಗಳ ಸುಪರ್ದಿಗೆ ಒಳಪಡಿಸುವಂತಿವೆ. ಉದಾಹರಣೆಗೆ 'ಕೃಷಿ ಉಡಾನ್' ಯೋಜನೆ ಸಣ್ಣಪುಟ್ಟ ರೈತರಿಗಿಂತ ಕಾರ್ಪೊರೇಟ್ ಕಂಪೆನಿಗಳಿಗೆ ಹೆಚ್ಚು ಲಾಭದಾಯಕವಾಗುವಂತಿದೆ. 16 ಅಂಶಗಳ ಕಾರ್ಯಕ್ರಮಗಳಲ್ಲಿ 9 ಅಂಶಗಳು 'ಕಾರ್ಪೊರೇಟ್ ಫಾರ್ಮಿಂಗ್' ಕಡೆಗೆ ಒತ್ತು ನೀಡುತ್ತಿವೆ. ಒಟ್ಟಾರೆ ಕೃಷಿಯನ್ನು ಖಾಸಗೀಕರಣಗೊಳಿಸುವ ಸರ್ಕಾರದ ಉದ್ದೇಶ ಇದರಿಂದ ಸ್ಪಷ್ಟವಾಗುತ್ತಿದೆ ಎಂದು ಸಿದ್ದರಾಮಯ್ಯ ಟೀಕಿಸಿದರು.

ರೈತರಿಗೆ ಸಂಬಂಧಿಸಿದ್ದಲ್ಲ

ರೈತರಿಗೆ ಸಂಬಂಧಿಸಿದ್ದಲ್ಲ

16 ಅಂಶಗಳ ಬಹುತೇಕ ಕಾರ್ಯಕ್ರಮಗಳು ಸಾಮಾನ್ಯ ರೈತರಿಗೆ ಸಂಬಂಧಿಸಿದ್ದಲ್ಲ. 162 MT ಸಾಮರ್ಥ್ಯದ ಕೋಲ್ಡ್ ಸ್ಟೋರೇಜ್‌ಗಳ ಮ್ಯಾಪಿಂಗ್ ಮತ್ತು ಜಿಯೊಟ್ಯಾಗಿಂಗ್ ಇದರಿಂದ ಬಡರೈತನಿಗೆ ಏನು ಲಾಭ? ರೆಫ್ರಿಜರೇಟೇಡ್ ರೈಲುಗಳು, ಕೃಷಿ ಉಡಾನ್ ವಿಮಾನಗಳು ಯಾವ ರೈತರ ಅನುಕೂಲಕ್ಕಾಗಿ ತಿಳಿಯುತ್ತಿಲ್ಲ. 2022ರ ವೇಳೆಗೆ ದೇಶದ ರೈತರ ಆದಾಯವನ್ನು ದುಪ್ಪಟ್ಟು ಮಾಡುವುದಾಗಿ ಪ್ರಧಾನಿ ಹೇಳಿದ್ದರು. ಕಳೆದ ಹಣಕಾಸು ವರ್ಷದಲ್ಲಿ ಕೃಷಿ ಕ್ಷೇತ್ರ ಶೇಕಡಾ 2.5ರಷ್ಟು ಬೆಳವಣಿಗೆ ಕಂಡಿದೆ. ರೈತರ ಆದಾಯ ದುಪ್ಪಟ್ಟು ಆಗಬೇಕಾದರೆ ಕೃಷಿ ಕ್ಷೇತ್ರ ಕನಿಷ್ಠ 10ರಿಂದ 15% ದರದಲ್ಲಿ ಬೆಳವಣಿಗೆ ಆಗಬೇಕು. ಸದ್ಯಕ್ಕೆ ಇದೂ ಕೂಡ ಅಸಾಧ್ಯದ ಮಾತು ಎಂದು ಸಿದ್ದರಾಮಯ್ಯ ತಿಳಿಸಿದರು.

ಸಬ್ ಅರ್ಬನ್ ರೈಲು

ಸಬ್ ಅರ್ಬನ್ ರೈಲು

ಬೆಂಗಳೂರು ನಗರದ ಉಪನಗರ ರೈಲು ಯೋಜನೆ ಬಗ್ಗೆ ಕಳೆದ ಬಜೆಟ್‌ನಲ್ಲಿಯೇ ಪ್ರಸ್ತಾಪವಿದ್ದರೂ ಈವರೆಗೂ ಒಂದು ಸ್ಟೇಷನ್ ಆಗಲಿ, ಹಳಿ ನಿರ್ಮಾಣ ಕಾರ್ಯವಾಗಲಿ ಆಗಿಲ್ಲ. ಮತ್ತೆ ಈ ಬಾರಿಯೂ ಅದೇ ರಾಗ, ಅದೇ ಹಾಡು. ಈ ಬಜೆಟ್‌ನಲ್ಲಿ ಕೂಡ ಅನುದಾನವನ್ನು ಮೀಸಲಿಟ್ಟಿಲ್ಲ ಜೊತೆಗೆ ಅನುದಾನದ ಬಗ್ಗೆ ಸ್ಪಷ್ಟತೆ ಕೂಡ ಇಲ್ಲ. ದೇಶದ ಅಭಿವೃದ್ಧಿಯ ದರ 42 ವರ್ಷಗಳಷ್ಟು ಹಿಂದಕ್ಕೆ ಹೋಗಿದೆ. ತೆರಿಗೆ ಸಂಗ್ರಹ ಎರಡು ಲಕ್ಷ ಕೋಟಿ ರೂಪಾಯಿಯಷ್ಟು ಕಡಿಮೆಯಾಗಿದೆ. ಕಾರ್ಪೋರೇಟ್ ತೆರಿಗೆ ಶೇಕಡಾ 15ರಷ್ಟು ಕಡಿಮೆಯಾಗಿದೆ. ಸಂಪನ್ಮೂಲ ಸಂಗ್ರಹದ ಯಾವ ಹೊಸ ಮಾರ್ಗಗಳ ಬಗ್ಗೆಯೂ ಬಜೆಟ್ ನಲ್ಲಿಯೂ ಪ್ರಸ್ತಾಪ ಇಲ್ಲ ಎಂದು ಸಿದ್ದರಾಮಯ್ಯ ದೂರಿದರು.

ಎಲ್‌ಐಸಿ ಷೇರುಗಳ ಮಾರಾಟ

ಎಲ್‌ಐಸಿ ಷೇರುಗಳ ಮಾರಾಟ

ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ಪ್ರಸಕ್ತ ಬಜೆಟ್‌ನಲ್ಲಿ ಎಲ್‌ಐಸಿ ಶೇರುಗಳನ್ನು ಸಹ ಮಾರಾಟ ಮಾಡಲು ನಿರ್ಧರಿಸಲಾಗಿದೆ. ಇದೊಂದು ರೀತಿ ಕುತ್ತಿಗೆಯಲ್ಲಿರುವ ತಾಳಿ ಮಾರಾಟಕ್ಕಿಟ್ಟ ಪರಿಸ್ಥಿತಿ. ದೇಶದ ಸದ್ಯದ ಆರ್ಥಿಕ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎಂಬುದುಕ್ಕೆ ಸರ್ಕಾರದ ಈ ನಿರ್ಧಾರ ಸಾಕ್ಷಿ. ವಿತ್ತೀಯ ಶಿಸ್ತು ಕಳೆದ ಬಾರಿ ಬಜೆಟ್‌ನಲ್ಲಿ 3.3 ಎಂದು ನಿಗದಿಪಡಿಸಲಾಗಿತ್ತು. ವರ್ಷಾಂತ್ಯದ ವೇಳೆಗೆ ಇದು 3.6 ತಲುಪಿತ್ತು. ಬರುವ ವರ್ಷಕ್ಕೆ ಸರ್ಕಾರವೇ 3.5 ಎಂದು ಗುರಿ ಇಟ್ಟುಕೊಂಡಿದೆ.‌ ಅಂದರೆ ಈಗಿರುವ ಸಾಲದ ಜೊತೆಗೆ ಇನ್ನಷ್ಟು ಸಾಲ ಮಾಡಿ ದೇಶವನ್ನು ದಿವಾಳಿ ಮಾಡಲು ಸರ್ಕಾರ ನಿರ್ಧರಿಸಿದಂತಿದೆ.

English summary
Opposition leader of Karnataka and Senior Congress leader Siddaramaih criticized the Union Budget 2020-21 presented by finance minister Nirmala Sitharaman.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X