ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಮೈಸೂರು ಅಭಿವೃದ್ಧಿ ಮಾಡಲಿಲ್ಲ: ಅಶ್ವತ್ಥ ನಾರಾಯಣ

|
Google Oneindia Kannada News

ಮೈಸೂರು, ಜೂ 7: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮೈಸೂರು-ಬೆಂಗಳೂರು ನಡುವೆ ಸಾವಿರಾರು ಕೋಟಿ ರೂ ವೆಚ್ಚದಲ್ಲಿ ದಶಪಥ ರಸ್ತೆಯನ್ನು ನಿರ್ಮಾಣ ಮಾಡುತ್ತಿದೆ. ಸೆಮಿಕಂಡೆಕ್ಟರ್ ಸ್ಲ್ಯಾಬ್ ಪಾರ್ಕ್ನ್ನು ಮೈಸೂರಿನಲ್ಲಿ ಸ್ಥಾಪಿಸಲಾಗುತ್ತಿದೆ. ಅಲ್ಲದೇ ಟೆಕ್‌ಪಾರ್ಕ್ ನಿರ್ಮಾಣವೂ ಆಗಲಿದೆ. ಮಂಡಕಳ್ಳಿ ವಿಮಾನ ನಿಲ್ದಾಣದ ರನ್ ವೇ ವಿಸ್ತರಣೆ ಹಾಗೂ ಅಭಿವೃದ್ಧಿಯನ್ನು ಮಾಡಲಾಗುತ್ತಿದೆ ಎಂದು ಉನ್ನತ ಶಿಕ್ಷಣ, ಐಟಿಬಿಟಿ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್ ತಿರುಗೇಟು ನೀಡಿದರು.

ಬೆಲೆ ಹೆಚ್ಚಳವೇ ಬಿಜೆಪಿಯ ಸಾಧನೆ: ಸಿದ್ದರಾಮಯ್ಯ ವ್ಯಂಗ್ಯಬೆಲೆ ಹೆಚ್ಚಳವೇ ಬಿಜೆಪಿಯ ಸಾಧನೆ: ಸಿದ್ದರಾಮಯ್ಯ ವ್ಯಂಗ್ಯ

ಮಂಗಳವಾರ ನಗರದ ಖಾಸಗಿ ಹೋಟೆಲ್‌ನಲ್ಲಿ ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿವತಿಯಿಂದ ಆಯೋಜಿಸಲಾಗಿದ್ದ ಅತಿಥಿ ಉಪನ್ಯಾಸಕರೊಂದಗಿನ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಲೆಂದು ಆಗಮಿಸಿದ ಅವರು, ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಡಾನ್ ಯೋಜನೆಯಡಿ ಈ ವಿಮಾನ ನಿಲ್ದಾಣದಿಂದ ದೇಶದ ಇತರೆ ವಿಮಾನ ನಿಲ್ದಾಣಗಳಿಗೆ ವಿಮಾನ ಹಾರಾಟವನ್ನೂ ನಡೆಸಲಾಗುತ್ತಿದೆ. ಬಿಜೆಪಿ ಸರ್ಕಾರ ಮೈಸೂರಿನಲ್ಲಿ ಮಾಡಿರುವಷ್ಟು ಅಭಿವೃದ್ಧಿ ಕೆಲಸಗಳನ್ನು ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ ಸಿದ್ದರಾಮಯ್ಯ ಮಾಡಲಿಲ್ಲ ಎಂದು ಉನ್ನತ ಶಿಕ್ಷಣ, ಐಟಿಬಿಟಿ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್ ತಿರುಗೇಟು ನೀಡಿದರು.

ಮೈಸೂರಿನಲ್ಲಿ ಏನೇನು ಅಭಿವೃದ್ಧಿ ಮಾಡಿದರು?

ಮೈಸೂರಿನಲ್ಲಿ ಏನೇನು ಅಭಿವೃದ್ಧಿ ಮಾಡಿದರು?

ಅತಿಥಿ ಉಪನ್ಯಾಸಕರೊಂದಗಿನ ಸಂವಾದ ಕಾರ್ಯಕ್ರಮದಲ್ಲಿ ಅಶ್ವತ್ಥ್ ನಾರಾಯಣ್ ಮಾತನಾಡಿ, ಬಿಜೆಪಿ ಸರ್ಕಾರ ಬಂದ ನಂತರ ಕೆ.ಆರ್.ಆಸ್ಪತ್ರೆ, ಮೆಡಿಕಲ್ ಕಾಲೇಜ್ ಅಭಿವೃದ್ಧಿ ಮಾಡಲಾಗುತ್ತಿದೆ. ಸಾವಿರಾರು ಕಿ.ಮಿ ರಸ್ತೆಯನ್ನು ಅಭಿವೃದ್ಧಿ ಮಾಡಲಾಗಿದೆ. ಆರೋಗ್ಯ, ಶಿಕ್ಷಣ, ಮೂಲ ಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆಯನ್ನು ನೀಡಿದೆ. ಹೀಗೆ ಹಲವಾರು ಅಭಿವೃದ್ಧಿ ಕೆಲಸಗಳನ್ನು ಮೈಸೂರಿನಲ್ಲಿ ಮಾಡಲಾಗುತ್ತಿದೆ. ಏನೇನು ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದ್ದೇವೆ ಎಂಬುದನ್ನು ಈಗಾಗಲೇ ಸಂಸದ ಪ್ರತಾಪ್ ಸಿಂಹ ಅವರು ಹೇಳಿದ್ದಾರೆ. ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ ಸಿದ್ದರಾಮಯ್ಯನವರು ತಮ್ಮ ಅಧಿಕಾರದ ಅವಧಿಯಲ್ಲಿ ಮೈಸೂರಿನಲ್ಲಿ ಏನೇನು ಅಭಿವೃದ್ಧಿ ಕೆಲಸಗಳನ್ನು ಮಾಡಿದರು ಎಂದು ಹೇಳಲಿ, ಚರ್ಚೆಗೆ ಬರಲಿ ಎಂದು ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್ ಸವಾಲು ಹಾಕಿದರು.

ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು

ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು

ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಹೆಚ್ಚಳ, ನಿರುದ್ಯೋಗ ಸಮಸ್ಯೆ ಹೆಚ್ಚಳ, ನೋಟ್ ಬ್ಯಾನ್ ಮಾಡಿದ ಮೇಲೆ ಜಿಎಸ್ ಟಿ ಮಾಡಿದ ಮೇಲೆ ದೇಶದ ಆರ್ಥಿಕತೆ ಹಾಳಾಗಿದೆ. ದೇಶವನ್ನು ಸಾಲದ ಸ್ಥಿತಿಗೆ ಸಿಲುಕಿದ್ದಾರೆ. ಇದು ಬಿಜೆಪಿ, ಮೋದಿ ಸಾಧನೆಯೇ ಎಂದು ಸಿದ್ದರಾಮಯ್ಯ ವ್ಯಂಗ್ಯ ಮಾಡಿದ್ದರು.

ದೇಶದಲ್ಲಿ ಸಾಲದ ಪ್ರಮಾಣ ತೀವ್ರ ಹೆಚ್ಚಳವಾಗಿದೆ. ಸಿಎಂ ಸ್ಥಾನದಿಂದ ಯಡಿಯೂರಪ್ಪ ಅವರನ್ನು ಕಿತ್ತು ಹಾಕಿದ್ರು. ಮಗನಿಗೆ ಎಂ ಎಲ್ ಸಿ ಕೊಡಲು ಆಗಲಿಲ್ಲ. ಬಿಜೆಪಿಯಲ್ಲಿ ಯಡಿಯೂರಪ್ಪ ಅವರನ್ನು ಸೈಡ್ ಲೈನ್ ಮಾಡಿ ಬಹಳ ದಿನ ಆಯಿತು. ಭೇಟಿ ವೇಳೆಯಲ್ಲಿ ಹಲೋ ಹಲೋ ಅಷ್ಟೇ. ಬೊಲೋ ಬೊಲೋ ಅಂತ ಏನೂ ಮಾತನಾಡಿಲ್ಲ ಎಂದು ಸಿದ್ದರಾಮಯ್ಯ ಟೀಕಿಸಿದ್ದರು.

ಇದಕ್ಕೆ ಉತ್ತರಿಸಿದ ಜಗದೀಸ್ ಶೆಟ್ಟರ್, ಬಿಜೆಪಿ ಸರ್ಕಾರ ಮಾಡಿದ ಅಭಿವೃದ್ಧಿ ಕೆಲಸಗಳನ್ನು ನಮ್ಮ ಸರ್ಕಾರ ಮಾಡಿದ್ದು ಎಂದು ಸಿದ್ದರಾಮಯ್ಯ ಹೇಳಿಕೊಳ್ಳುತ್ತಿದ್ದಾರೆ. ಹಳೇ ಮದ್ಯ ಹೊಸ ಬಾಟಲಿ ಎಂಬಂತಾಗಿದೆ ಅವರ ಹೇಳಿಕೆ ಎಂದು ಟೀಕಿಸಿದರು.

ಐದು ವರ್ಷಗಳ ಕಾಲ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದರೂ ಮೈಸೂರನ್ನು ಅಭಿವೃದ್ಧಿ ಮಾಡುವಲ್ಲಿ ವಿಫಲರಾಗಿದ್ದಾರೆ. ಏನೂ ಅಭಿವೃದ್ಧಿ ಕೆಲಸಗಳನ್ನು ಮಾಡಿಲ್ಲ, ಆದರೂ ಕೂಡ ಮಾಡಿದ್ದೇನೆ ಎಂದು ಸುಳ್ಳು ಹೇಳುವ ಮೂಲಕ ಜನರನ್ನು ದಾರಿತಪ್ಪಿಸುತ್ತಿದ್ದಾರೆ ಎಂದರು.

ಜೂನ್ 21ಕ್ಕೆ ಮೋದಿ ಮೈಸೂರಿಗೆ

ಜೂನ್ 21ಕ್ಕೆ ಮೋದಿ ಮೈಸೂರಿಗೆ

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಅರಮನೆ ಮುಂಭಾಗ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಡೆಯಲಿದೆ. ಜೂ.21ರಂದು ವಿವಿಧ ಆಸನಗಳನ್ನು ಪ್ರಧಾನಿ ಪ್ರದರ್ಶನ ಮಾಡುವ ಮೂಲಕ ಯೋಗ ಮಹತ್ವವನ್ನು ಸಾರಲಿದ್ದಾರೆ. ಈ ಹಿನ್ನೆಲೆಯಲ್ಲಿ ಅರಮನೆ ಸುತ್ತಮುತ್ತ ಇರುವ ರಾಜಪಥ ಹಾಗೂ ಮೋದಿ ಅವರು ಸಾಗುವ ರಸ್ತೆ ಮಾರ್ಗಗಳಿಗೆ ದುರಸ್ತಿ ಭಾಗ್ಯ ಲಭಿಸಿದೆ. ಈಗಾಗಲೇ ನಗರಪಾಲಿಕೆ ಆಯುಕ್ತರು ರಾಜಪಥ ರಸ್ತೆಯನ್ನು ಅಧಿಕಾರಿಗಳೊಂದಿಗೆ ಪರಿಶೀಲಿಸಿ ದುರಸ್ತಿ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ. ವರ್ಷಗಟ್ಟಲೆ ದುರಸ್ತಿ ಇಲ್ಲದೆ ಸೊರಗಿದ್ದ ರಾಜಪಥಕ್ಕೆ ಇದೀಗ ಮೋದಿ ಆಗಮನದಿಂದ 'ಯೋಗ' ಬಂದಂತಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರು, ಜೂನ್ 21 ರಂದು ಮೈಸೂರಿನಲ್ಲಿ ನಡೆಯಲಿರುವ ವಿಶ್ವ ಯೋಗದಿನಾಚರಣೆಯಲ್ಲಿ ಭಾಗವಹಿಸಲೆಂದು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಯೋಗ ವಿಶ್ವವಿದ್ಯಾ ನಿಲಯ ಸ್ಥಾಪಿಸಬೇಕೆಂಬ ಬೇಡಿಕೆಯಿದೆ. ಈ ಬಗ್ಗೆ ಕೇಂದ್ರ ಸರ್ಕಾರ ತೀರ್ಮಾನ ತೆಗೆದುಕೊಳ್ಳುತ್ತದೆ. ಆದರೆ ಮನುಷ್ಯನ ಆರೋಗ್ಯಕ್ಕೆ ಅಗತ್ಯವಾದ ಯೋಗಕ್ಕೆ ಪ್ರತ್ಯೇಕ ವಿವಿಯನ್ನು ಸ್ಥಾಪಿಸುವ ಅಗತ್ಯವಿಲ್ಲ, ಇತರೆ ಸಂಗೀತ, ಸಾಹಿತ್ಯ, ಸಾಂಸ್ಕೃತಿಕ, ಕ್ರೀಡೆ ಚಟುವಟಿಕೆಗಳೊಂದಿಗೆ ಯೋಗ ಕೂಡ ಇರಬೇಕು ಎಂದು ಹೇಳಿದರು.

ಮೈ.ವಿ.ರವಿಶಂಕರ್ ಗೆಲುವು ಸಂಶಯವಿಲ್ಲ

ಮೈ.ವಿ.ರವಿಶಂಕರ್ ಗೆಲುವು ಸಂಶಯವಿಲ್ಲ

ರಾಜ್ಯ ಸಭಾ ಚುನಾವಣೆಯಲ್ಲಿ ಮೂರು ಸ್ಥಾನವನ್ನೂ ಗೆಲ್ಲುತ್ತೇವೆ, ರಾಜ್ಯಸಭಾ ಚುನಾವಣೆಯಲ್ಲಿ ಪಕ್ಷದಿಂದ ಮೂರು ಅಭ್ಯರ್ಥಿಗಳನ್ನು ಹಾಕಿದ್ದೇವೆ, ಜೆಡಿಎಸ್, ಕಾಂಗ್ರೆಸ್‌ನವರು ಏನೇ ಪ್ರಯತ್ನ ಮಾಡಿದರೂ, ನಮ್ಮ ಪಕ್ಷದ ಮೂವರು ಅಭ್ಯರ್ಥಿಗಳು ಗೆಲುವು ಸಾಧಿಸುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದರು.

ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿಪರ ಉತ್ತಮ ವಾತಾವರಣವಿದೆ. ಹಾಗಾಗಿ ಪಕ್ಷದ ಅಭ್ಯರ್ಥಿ ಮೈ.ವಿ.ರವಿಶಂಕರ್ ಗೆಲುವು ಸಾಧಿಸುವುದರಲ್ಲಿ ಯಾವುದೇ ಸಂಶಯವಿಲ್ಲ. ಉತ್ತಮ ನಾಯಕತ್ವ, ಜನಪರವಾದ ಆಡಳಿತವನ್ನು ಬಿಜೆಪಿಯಿಂದ ಮಾತ್ರ ನೀಡಲು ಸಾಧ್ಯ. ಸರ್ಕಾರಿ ನೌಕರರಿಗೆ ಐದು ಹಾಗೂ 6 ನೇ ವೇತನವನ್ನು ಜಾರಿಗೆ ತಂದಿದ್ದು ಬಿಜೆಪಿ ಸರ್ಕಾರವೇ ವಿನಃ ಸಿದ್ದರಾಮಯ್ಯ ಸರ್ಕಾರವಲ್ಲ. ಬಿಜೆಪಿ ಸರ್ಕಾರದ ಆಡಳಿತದಿಂದ ಸರ್ಕಾರಿ ನೌಕರರು ತೃಪ್ತರಾಗಿದ್ದಾರೆ. ಬಿಜೆಪಿ ಸರ್ಕಾರದ ಆಡಳಿತದ ಬಗ್ಗೆ ಮೆಚ್ಚುಗೆ, ಒಲವು ಹೊಂದಿದ್ದಾರೆ. ಹಾಗಾಗಿ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮೈ.ವಿ.ರವಿಶಂಕರ್ ಅವರನ್ನು ಬೆಂಬಲಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಈ ವೇಳೆ ಶಾಸಕ ಎಲ್.ನಾಗೇಂದ್ರ, ಬಿಜೆಪಿ ಮೈಸೂರು ನಗರಾಧ್ಯಕ್ಷ ಟಿ.ಎಸ್.ಶ್ರೀವತ್ಸ, ನಗರ ವಕ್ತಾರ ಎಂ.ಎ.ಮೋಹನ್, ಮಹಿಳಾ ಮೋರ್ಚಾದ ಅಧ್ಯಕ್ಷೆ ಹೇಮಾನಂದೀಶ್, ಮುಖಂಡರಾದ ಎಸ್.ಜಯಪ್ರಕಾಶ್ (ಜೆಪಿ), ಶಿವಕುಮಾರ್, ಈ.ಸಿ.ನಿಂಗರಾಜೇಗೌಡ ಮತ್ತಿತರರು ಉಪಸ್ಥಿತರಿದ್ದರು.

(ಒನ್ಇಂಡಿಯಾ ಸುದ್ದಿ)

English summary
BJP government has done good work in Mysore, while Siddaramaiah did nothing in Mysore during his tenure, says minister Dr. Ashwath Narayana.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X