• search
  • Live TV
ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಭೂ ಹಗರಣದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯಗೆ 'ಬಿಗ್ ರಿಲೀಫ್'

|

ಮೈಸೂರು, ಡಿಸೆಂಬರ್ 13: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಭೂ ಹಗರಣದಲ್ಲಿ ಬಿಗ್ ರಿಲೀಫ್ ಸಿಕ್ಕಿದೆ.

ಸಿದ್ದರಾಮಯ್ಯ ಅವರ ವಿರುದ್ಧ ಮೈಸೂರಿನ ಲಕ್ಷ್ಮಿಪುರಂ ಠಾಣೆಯಲ್ಲಿ ದಾಖಲಾಗಿದ್ದ ದೂರಿನ ಸಂಬಂಧ ಪೊಲೀಸರು ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದು, ಈ ದೂರಿನಲ್ಲಿ ಯಾವುದೇ ಸತ್ಯಾಂಶವಿಲ್ಲವೆಂದು ತಿಳಿಸಿ, ಈ ಪ್ರಕರಣದಲ್ಲಿ ಬಿ ರಿಪೋರ್ಟ್ ಸಲ್ಲಿಸಿದ್ದಾರೆ. ಈ ಮೂಲಕ ಸಿದ್ದರಾಮಯ್ಯ ಅವರಿಗೆ ಕ್ಲೀನ್ ಚಿಟ್ ನೀಡಲಾಗಿದೆ.

ಸಿದ್ದರಾಮಯ್ಯಗೆ ಆತಂಕ, ಭೂ ಹಗರಣ ಕೇಸ್, ಸಿಬಿಐ ತನಿಖೆಗೆ? ಸಿದ್ದರಾಮಯ್ಯಗೆ ಆತಂಕ, ಭೂ ಹಗರಣ ಕೇಸ್, ಸಿಬಿಐ ತನಿಖೆಗೆ?

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿಯಮ ಉಲ್ಲಂಘಿಸಿ ಸಿದ್ದರಾಮಯ್ಯ, ಕೃಷಿ ಭೂಮಿಯಲ್ಲಿ ಮನೆ ನಿರ್ಮಿಸಿದ್ದಾರೆಂದು ಗಂಗರಾಜು ಎಂಬವರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುವಂತೆ ನ್ಯಾಯಾಲಯ, ಲಕ್ಷ್ಮಿಪುರಂ ಠಾಣೆ ಪೊಲೀಸರಿಗೆ ನಿರ್ದೇಶನ ನೀಡಿತ್ತು.

ಈ ದೂರಿನ ಕುರಿತು ತನಿಖೆ ನಡೆಸಿದ್ದ ಪೊಲೀಸರು ನವೆಂಬರ್ ಮೊದಲ ವಾರದಲ್ಲಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದರು. ದೂರಿನಲ್ಲಿ ಯಾವುದೇ ಸತ್ಯಾಂಶವಿಲ್ಲವೆಂದು ತಿಳಿಸಿದ್ದಾರೆ. ಇದರಿಂದಾಗಿ ಸಿದ್ದರಾಮಯ್ಯನವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ವಿರುದ್ಧದ ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವ ಕುರಿತು ಮೈಸೂರು ಪೊಲೀಸ್ ಆಯುಕ್ತರಿಗೆ ಪೊಲೀಸ್ ಮಹಾನಿರ್ದೇಶಕರು(ಡಿಜಿ -ಐಜಿಪಿ) ಪತ್ರ ಬರೆದಿದ್ದರು.

30 ಗುಂಟೆ ಜಾಗ ಅಕ್ರಮ ಡಿನೋಟಿಫೈ

30 ಗುಂಟೆ ಜಾಗ ಅಕ್ರಮ ಡಿನೋಟಿಫೈ

30 ಗುಂಟೆ ಜಾಗ ಅಕ್ರಮ ಡಿನೋಟಿಫೈ ಮಾಡಲಾಗಿದೆ. ಅದರ ಸುತ್ತಾ 400-500 ಎಕರೆ ಜಾಗವನ್ನು ಭೂಸ್ವಾಧೀನವಾಗಿದೆ. ಸಿದ್ದರಾಮಯ್ಯ ಜೊತೆ ಮುಡಾದ ಮಾಜಿ ಅಧ್ಯಕ್ಷರಾದ ಸಿ. ಬಸವೇಗೌಡ, ಡಿ ಧೃವಕುಮಾರ್ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ ಎಂದು ಗಂಗರಾಜು ಅವರು ಖಾಸಗಿ ಸುದ್ದಿ ವಾಹಿನಿ ಜತೆ ಮಾತನಾಡುತ್ತಾ ಹೇಳಿದರು.

ಸಿದ್ದರಾಮಯ್ಯ ವಿರುದ್ಧ ಎಫ್ ಐಆರ್

ಸಿದ್ದರಾಮಯ್ಯ ವಿರುದ್ಧ ಎಫ್ ಐಆರ್

ಮೈಸೂರಿನ ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಸೇರಿ ನಾಲ್ಕು ಜನರ ವಿರುದ್ಧ 9 ಐಪಿಸಿ ಸೆಕ್ಷನ್ 120ಬಿ, 197, 166, 167, 169, 200, 417, 409, 420 ಹಾಗೂ ಸೆಕ್ಷನ್ 468] ಪ್ರಕರಣ ದಾಖಲಿಸಲಾಗಿದೆ. ಮೈಸೂರಿನ ಸಿವಿಲ್ ನ್ಯಾಯಾಲಯವು ಸಿದ್ದರಾಮಯ್ಯ ವಿರುದ್ಧ ಎಫ್ ಐಆರ್ ದಾಖಲಿಸಲು ಆದೇಶ ನೀಡಿತ್ತು. ಆದರೆ, ಈಗ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಕೆಯಾಗಿದೆ.

ಭೂ ಹಗರಣದಲ್ಲಿ ಸಿದ್ದರಾಮಯ್ಯ ಸಿಲುಕಿಸಲು ಹೋದ ಬಿಜೆಪಿಗೆ ಬೂಮರಾಂಗ್ಭೂ ಹಗರಣದಲ್ಲಿ ಸಿದ್ದರಾಮಯ್ಯ ಸಿಲುಕಿಸಲು ಹೋದ ಬಿಜೆಪಿಗೆ ಬೂಮರಾಂಗ್

ಕೃಷಿ ಭೂಮಿಯಲ್ಲಿ ಮನೆ ನಿರ್ಮಾಣ ಆರೋಪ

ಕೃಷಿ ಭೂಮಿಯಲ್ಲಿ ಮನೆ ನಿರ್ಮಾಣ ಆರೋಪ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು ಈ ಕೃಷಿ ಭೂಮಿಯನ್ನು ಸ್ವಾಧೀನ ಪಡಿಸಿಕೊಂಡಿತ್ತು. ಆದರೆ, ಈ ಜಾಗವನ್ನು ಸಿದ್ದರಾಮಯ್ಯ ಅವರು ತಮ್ಮ ಪ್ರಭಾವ ಬಳಸಿ ಡಿನೋಟಿಫೈ ಮಾಡಿಸಿದ್ದಲ್ಲದೆ, ಜಾಗ ಖರೀದಿಸಿ ಮನೆ ಕಟ್ಟಿದ್ದಾರೆ. ನಗರಾಭಿವೃದ್ಧಿ ಪ್ರಾಧಿಕಾರದ ಅನುಮತಿ, ಗ್ರಾಮ ಪಂಚಾಯಿತಿಯಿಂದ ಅನುಮತಿ ಕೂಡಾ ಸಮರ್ಪಕವಾಗಿ ಸಿಕ್ಕಿಲ್ಲ ಎಂದು ಆರೋಪಿಸಲಾಗಿದೆ.

ಗಂಗರಾಜು ಎಂಬುವರು ನೀಡಿದ್ದ ದೂರು

ಗಂಗರಾಜು ಎಂಬುವರು ನೀಡಿದ್ದ ದೂರು

ಮೈಸೂರಿನ ವಿಜಯನಗರದಲ್ಲಿರುವ ಸಿದ್ದರಾಮಯ್ಯ ನಿವಾಸವೇ ಈಗ ವಿವಾದದ ಕೇಂದ ಬಿಂದು. ಈ ಮನೆಯನ್ನು ಕೃಷಿಭೂಮಿಯಲ್ಲಿ ನಿರ್ಮಿಸಲಾಗಿದೆ. ಮನೆ ಜಾಗ ಖರೀದಿ, ನಿರ್ಮಾಣ, ಅನುಮತಿ ಎಲ್ಲದರ

ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಡಿನೋಟಿಫೈ ಆರೋಪಸಿದ್ದರಾಮಯ್ಯ ವಿರುದ್ಧ ಮತ್ತೊಂದು ಡಿನೋಟಿಫೈ ಆರೋಪ

English summary
Former CM Siddaramaiah gets big relief in land scam in Mysuru. Mysuru police have submitted a B report and given clean chit to Siddaramaiah, Siddaramaiah was accused of building house on agricultural land in Mysuru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X