ಭೂ ಹಗರಣ : ಸಿದ್ದರಾಮಯ್ಯಗೆ ಬಂಧನ ಭೀತಿ!

ಮೈಸೂರು, ಜೂನ್ 24 : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಂಧನದ ಭೀತಿ ಎದುರಾಗಿದೆ. ಸಿದ್ದರಾಮಯ್ಯ ಅವರು ಧರ್ಮಸ್ಥಳದಲ್ಲಿದ್ದು, ಪ್ರಕೃತಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಭೂ ಹಗರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಲಕ್ಷ್ಮೀಪುರಂ ಠಾಣೆ ಪೊಲೀಸರು ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್ ದಾಖಲು ಮಾಡಿದ್ದಾರೆ. ಜಾಮೀನು ರಹಿತ ಸೆಕ್ಷನ್‌ಗಳನ್ನು ಹಾಕಲಾಗಿದೆ.

ಸಿದ್ದರಾಮಯ್ಯ, ಮುಡಾ ಮಾಜಿ ಅಧ್ಯಕ್ಷ ಬಸವೇಗೌಡ, ಧ್ರುವ ಕುಮಾರ್, ಮುಡ ಆಯುಕ್ತ ಕಾಂತರಾಜು ಅವರಿಗೂ ಬಂಧನದ ಭೀತಿ ಎದುರಾಗಿದೆ. ಈ ಪ್ರಕರಣದಲ್ಲಿ ಯಾವ ಆರೋಪಿಗಳು ನಿರೀಕ್ಷಣಾ ಜಾಮೀನು ಪಡೆದಿಲ್ಲ.

Siddaramaiah may file bail application on June 25

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿಗದಿತ ಕಾರ್ಯಕ್ರಮದಂತೆ ಧರ್ಮಸ್ಥಳದ ಶಾಂತಿವನದಲ್ಲಿ ಪ್ರಕೃತಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ ವಾರ ಅವರು ಧರ್ಮಸ್ಥಳಕ್ಕೆ ದಾಖಲಾಗಿದ್ದು, 10 ದಿನಗಳ ಕಾಲ ಚಿಕಿತ್ಸೆ ಪಡೆಯಲಿದ್ದಾರೆ.

ಸಿದ್ದರಾಮಯ್ಯ ಅವರು ಉಪ ಮುಖ್ಯಮಂತ್ರಿಯಾಗಿದ್ದ ವೇಳೆ ನಡೆದ ಭೂ ಹಗರಣಕ್ಕೆ ಸಂಬಂಧಿಸಿದಂತೆ ಈಗ ದೂರು ದಾಖಲಾಗಿದ್ದು, ಪೊಲೀಸರು ಎಫ್‌ಐಆರ್ ದಾಖಲು ಮಾಡಿದ್ದಾರೆ. ಸಿದ್ದರಾಮಯ್ಯ ಸೇರಿ 9 ಜನರ ವಿರುದ್ಧ ಕೇಸು ದಾಖಲು ಮಾಡಲು ಮೈಸೂರಿನ 2ನೇ ಪ್ರಧಾನ ಸತ್ರ ನ್ಯಾಯಾಲಯ ಆದೇಶ ನೀಡಿತ್ತು.

ಸಾಮಾಜಿಕ ಕಾರ್ಯಕರ್ತ ಗಂಗರಾಜು ಹಾಗೂ ಸಂಗಮೇಶ್ ದಾಖಲಿಸಿದ್ದ ದೂರಿನ ಅನ್ವಯ ಮೈಸೂರಿನ ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಸೆಕ್ಷನ್​ 120ಬಿ, 197, 166, 167, 169, 200, 417, 409, 420
ಹಾಗೂ ಐಪಿಸಿ ಸೆಕ್ಷನ್​ 468 ಅಡಿ ಎಫ್‌ಐಆರ್ ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+