• search
  • Live TV
ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮೈಸೂರು ಪಾಲಿಕೆ ಚುನಾವಣೆ ಮೈತ್ರಿ ಗೊಂದಲಕ್ಕೆ ಸಿದ್ದರಾಮಯ್ಯ ಕಾರಣ!

By ಮೈಸೂರು ಪ್ರತಿನಿಧಿ
|

ಮೈಸೂರು, ಫೆಬ್ರವರಿ 28: " ಮೈಸೂರು ಮಹಾನಗರ ಪಾಲಿಕೆಯ ಮೈತ್ರಿ ವಿಷಯದಲ್ಲಿ ಗೊಂದಲ ನಿರ್ಮಾಣವಾಗಲು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರೇ ಕಾರಣ" ಎಂದು ಜೆಡಿಎಸ್ ನಾಯಕ ಮತ್ತು ಶಾಸಕ ಸಾ. ರಾ. ಮಹೇಶ್ ಹೇಳಿದರು.

ಮೈಸೂರಿನಲ್ಲಿ ಭಾನುವಾರ ಪತ್ರಿಕಾಗೋಷ್ಠಿ ನಡೆಸಿದ ಅವರು, "ಪಾಲಿಕೆ ಆಡಳಿತಕ್ಕೆ ಸಂಬಂಧಿಸಿದಂತೆ ಈ ಹಿಂದೆ ನಡೆದಿದ್ದ ಒಪ್ಪಂದದಂತೆ ಮೂರು ಬಾರಿ ಮೇಯರ್ ಸ್ಥಾನ ಜೆಡಿಎಸ್‌ಗೆ ಹಾಗೂ 2 ಬಾರಿ ಮೇಯರ್ ಸ್ಥಾನ ಕಾಂಗ್ರೆಸ್‌ಗೆ ಎಂದು ಮಾತುಕತೆಯಾಗಿತ್ತು" ಎಂದರು.

ಮೈಸೂರು ಮೇಯರ್ ಚುನಾವಣೆ: ದೋಸ್ತಿಗೆ 'ಕೈ' ನಾಯಕರ ಭಿನ್ನರಾಗ!

"ಆದರೆ ರಾಜ್ಯದಲ್ಲಿ ಮೈತ್ರಿ ಮುರಿದು ಬಿದ್ದಿದ್ದರಿಂದ ಕೆಲವು ಸನ್ನಿವೇಶಗಳು ಪ್ರಾರಂಭವಾಯಿತು. ಈ ಹಿಂದೆ ಸಿದ್ದರಾಮಯ್ಯ ಜೆಡಿಎಸ್ ಬಗ್ಗೆ ಹೋಟೆಲ್‌ನಲ್ಲಿದ್ದು ರಾಜಕಾರಣ ಮಾಡುತ್ತಾರೆ ಎನ್ನುತ್ತಿದ್ದರು. ನಾವು ಹೋಟೆಲ್‌ನಲ್ಲಿ ಕುಳಿತು ರಾಜಕಾರಣ ಮಾಡಲು ಕಾರಣ ಯಾರು?" ಎಂದು ಪ್ರಶ್ನಿಸಿದರು.

ಮೈಸೂರು; ಸಿದ್ದರಾಮಯ್ಯ ಧಿಕ್ಕಾರ ಕೂಗಿದ 'ಕೈ' ಕಾರ್ಯಕರ್ತರು!

"ಅಲ್ಲದೇ, ನಾವು ವಾಸ್ತವವಾಗಿ ಯಾರೊಂದಿಗೂ ದೊಡ್ಡ ಮಟ್ಟದಲ್ಲಿ ಮಾತುಕತೆ ನಡೆಸಿರಲಿಲ್ಲ. ಕಾಂಗ್ರೆಸ್‌ನ ಅಧ್ಯಕ್ಷರು ಹಾಗೂ ಶಾಸಕ ತನ್ವಿರ್ ಸೇಠ್ ನನ್ನ ಕಚೇರಿಗೆ ಬರುತ್ತೇನೆ ಅಂದಿದ್ದರು. ಅದಕ್ಕೆ ನಾನು ಬನ್ನಿ ಎಂದು ಹೇಳಿದ್ದೆ. 3 ಮೇಯರ್ ಸ್ಥಾನ ನಿಮಗೆ, ನಮಗೆ 2 ಸ್ಥಾನ ಎಂದು ಅವರೇ ಹೇಳಿದ್ದರು. ಸಿದ್ದರಾಮಯ್ಯ ಹೇಳಿಕೆ ಬಿಟ್ಟರೆ ಕಾಂಗ್ರೆಸ್ ಬಗ್ಗೆ ನಮಗೆ ಯಾವುದೇ ಬೇಸರವಿಲ್ಲ" ಎಂದು ಸ್ಪಷ್ಟಪಡಿಸಿದರು.

ಮೈಸೂರು ಪಾಲಿಕೆ ನೂತನ ಮೇಯರ್ ಆಗಿ ರುಕ್ಮಿಣಿ ಮಾದೇಗೌಡ ಆಯ್ಕೆ; ಬಿಜೆಪಿಗೆ ಮುಖಭಂಗ

"ಈ ನಡುವೆ ಡಿ. ಕೆ. ಶಿವಕುಮಾರ್ ಎರಡು ಬಾರಿ ದೂರವಾಣಿ ಮೂಲಕ ಮಾತನಾಡಿದ್ದರು. ಇದನ್ನು ಕುಮಾರಸ್ವಾಮಿ ಅವರಿಗೂ ತಿಳಿಸಿದ್ದೆವು. ನಾನು ರಾಜ್ಯಾಧ್ಯಕ್ಷರಾಗಿರುವಾಗ ಮೈಸೂರು ಮೇಯರ್ ಸ್ಥಾನ ಪಡೆಯಲಿಲ್ಲ ಎಂಬಂತಾಗುತ್ತದೆ. ಆದ್ದರಿಂದ ಕಾಂಗ್ರೆಸ್ ಜೊತೆ ಬನ್ನಿ ಎಂದು ಡಿಕೆಶಿ ಹೇಳಿದ್ದರು. ಬಳಿಕ ತನ್ವಿರ್ ಸೇಠ್ ಭೇಟಿ ಮಾಡಿದೆವು. ನಂತರ ಧ್ರುವನಾರಾಯಣ್ ಸಹ ಕುಮಾರಸ್ವಾಮಿ ಅವರೊಂದಿಗೆ ಮಾತುಕತೆ ನಡೆಸಿದ್ದರು" ಎಂದು ಎಲ್ಲಾ ಬೆಳವಣಿಗೆಗಳನ್ನು ವಿವರಿಸಿದರು.

ಶಾಸಕ ತನ್ವೀರ್ ಸೇಠ್ ಜೆಡಿಎಸ್ ಸೇರುತ್ತಾರಾ? ಎಂಬ ಪ್ರಶ್ನೆಗೆ ಉತ್ತರಿಸಿದ ಶಾಸಕರು, "ಶಾಸಕ ತನ್ವೀರ್‌ ಸೇಠ್‌ ಅವರನ್ನು ಕಾಂಗ್ರೆಸ್‌ ವಜಾ ಮಾಡಿದರೆ, ಜೆಡಿಎಸ್‌ಗೆ ಸ್ವಾಗತಿಸುತ್ತೇವೆ. ತನ್ವಿರ್ ಸೇಠ್ ಒಬ್ಬ ಅಲ್ಪಸಂಖ್ಯಾತ ಮುಖಂಡ, ನಮಗೆ ಅವರ ಬಗ್ಗೆ ಗೌರವವಿದೆ. ಅವರು ಜೆಡಿಎಸ್‌ಗೆ ಬಂದರೆ ಸ್ವಾಗತ" ಎಂದರು.

English summary
JD(S) MLA Sa. Ra. Mahesh said that opposition leader Siddaramaiah main reason for confusion in the Congress-JD(S) alliance in Mysuru city corporation mayor election.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X