ಮೈಸೂರು ವಿವಿಯ ಗೌರವ ಡಾಕ್ಟರೇಟ್ ನಿರಾಕರಿಸಿದ ಸಿದ್ದರಾಮಯ್ಯ
ಮೈಸೂರು, ಜನವರಿ 19: ಮೈಸೂರು ವಿಶ್ವವಿದ್ಯಾಲಯವು ನೀಡಲು ನಿರ್ಧರಿಸಿದ್ದ ಗೌರವ ಡಾಕ್ಟರೇಟ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿರಾಕರಿಸಿದ್ದಾರೆ.
ಮೈಸೂರು ವಿಶ್ವವಿದ್ಯಾಲಯವು ಫೆಬ್ರವರಿ ಎರಡನೇ ವಾರದಲ್ಲಿ ನಡೆದ ಸಮಿತಿ ಸದಸ್ಯರ ಸಭೆಯಲ್ಲಿ ಗೌರವ ಡಾಕ್ಟರೇಟ್‌ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರನ್ನು ಶೀಫಾರಸ್ಸು ಮಾಡಲಾಗಿತ್ತು. ಆದರೆ ಮುಖ್ಯಮಂತ್ರಿಗಳು ಗೌರವ ಡಾಕ್ಟರೇಟ್ ನಿರಾಕರಿಸಿದ್ದು, ನಿರಾಕರಣೆ ಕಾರಣ ತಿಳಿದುಬಂದಿಲ್ಲ.
ಸಭೆಯಲ್ಲಿ ಮುಖ್ಯಮಂತ್ರಿಗಳನ್ನು ಸೇರಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಸುತ್ತೂರು ಶ್ರೀ ದೇಶಿಕೇಂದ್ರ ಸ್ವಾಮೀಜಿ, ಇಸ್ರೋ ಅಧ್ಯಕ್ಷ ಡಾ .ಕಿರಣ್ಕುಮಾರ್, ಸಾಲುಮರದ ತಿಮ್ಮಕ್ಕ ಸೇರಿದಂತೆ 10 ಮಂದಿಯ ಹೆಸರುಗಳನ್ನು ಶಿಫಾರಸ್ಸು ಮಾಡಲಾಗಿದೆ.

ಸಿಂಡಿಕೇಟ್ ಸಭೆಯಲ್ಲಿ ಪಸ್ತಾಪಿಸಲಾದ 10 ಜನರ ಹೆಸರುಗಳಲ್ಲಿ ಸಿಂಡಿಕೇಟ್ ಉಪ ಸಮಿತಿ 4 ಹೆಸರುಗಳನ್ನು ಅಂತಿಮಗೊಳಿಸಿ ರಾಜ್ಯಪಾಲರ ಒಪ್ಪಿಗೆಗೆ ಕಳುಹಿಸಬೇಕಾಗುತ್ತದೆ. ಈ ಮಧ್ಯೆ ಅತಿಥಿ ಉಪನ್ಯಾಸಕರ ನೇಮಕದಲ್ಲಿ ನಡೆದಿರುವ ಅಕ್ರಮವೂ ಸಭೆಯಲ್ಲಿ ಚರ್ಚೆಗೆ ಬಂದಿತು. ಈ ಅಕ್ರಮದ ಬಗ್ಗೆ ಪರಿಶೀಲನೆ ನಡೆಸುವಂತೆ ಸಭೆಯಲ್ಲಿ ಕುಲಪತಿ ಪೊ.ಸಿ.ಬಸವರಾಜು ಅವರು ಕುಲಸಚಿವರಾದ ಡಿ.ಭಾರತಿ ಅವರಿಗೆ ಸೂಚಿಸಿದರು ಎಂದು ತಿಳಿದು ಬಂದಿದೆ.
ಮೈಸೂರು ವಿವಿ ಪ್ರತಿಷ್ಠಿತ ವಿಶ್ವವಿದ್ಯಾಲಯವಾಗಿದ್ದು, ಅದು ಸಾಕಷ್ಟು ಸಮಾಜಮುಖಿ ವ್ಯಕ್ತಿಗಳಿಗೆ ಗೌರವ ಡಾಕ್ಟರೇಟ್ ನೀಡಿದೆ. ಡಾ.ರಾಜ್‌ಕುಮಾರ್, ದಲೈ ಲಾಮಾ, ಸಚಿನ್ ತೆಂಡೂಲ್ಕರ್, ರಾಷ್ಟ್ರಕವಿ ಜಿ.ಎಸ್.ಶಿವರುದ್ರಪ್ಪ, ಇನ್‌ಫೋಸಿಸ್ ನಾರಾಯಣಮೂರ್ತಿ ಸೇರಿದಂತೆ ಹಲವು ಖ್ಯಾತ ವ್ಯಕ್ತಿಗಳಿಗೆ ಮೈಸೂರು ವಿವಿ ಗೌರವ ಡಾಕ್ಟರೇಟ್ ನೀಡಿದೆ.
ದೇಶದ ಪ್ರತಿಷ್ಠಿತ ವಿವಿಗಳಲ್ಲಿ ಒಂದಾದ ಮೈಸೂರು ವಿವಿಯ ಡಾಕ್ಟರೇಟ್ ನಿರಾಕರಿಸಿ ಮುಖ್ಯಮಂತ್ರಿಗಳು ವಿವಾದ ಮೈಮೇಲೆ ಎಳೆದುಕೊಂಡಿದ್ದಾರೊ ಎಂಬುದನ್ನು ಕಾದು ನೋಡಬೇಕು.
-
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ












Click it and Unblock the Notifications